ಪರಮೇಶ್ವರ್ ವಿರುದ್ಧ ಹಿರಿಯರ ಅಸಮಾಧಾನ
Team Udayavani, Jun 5, 2018, 6:05 AM IST
ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ವಿರುದ್ಧ ಪಕ್ಷದ ಹಿರಿಯ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾದ ಮೇಲೆ ಪರಮೇಶ್ವರ್ ಪಕ್ಷದ ಯಾವುದೇ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಂಗಿಯಾಗಿ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕೆಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯರು ಸಂಪುಟ ಸೇರುವ ಬಗ್ಗೆಯೂ ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದ್ದಾರೆ. ಪರಮೇಶ್ವರ್ ಅವರ ಏಕ ಪಕ್ಷೀಯ ನಿರ್ಧಾರದಿಂದ ಬೇಸರಗೊಂಡು ಎಸ್.ಆರ್. ಪಾಟೀಲ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅಧಿಕಾರದಲ್ಲಿದ್ದ ಪಕ್ಷ ಸೋತ ನಂತರ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿ ಹೊತ್ತುಕೊಂಡು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಬದಲು ಅದೇ ಹುದ್ದೆಯಲ್ಲಿ ಮುಂದುವರೆದಿದ್ದು, ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ. ಎರಡು ಬಾರಿ ಸಚಿವರಾದವರು ಮಂತ್ರಿಯಾಗಬಾರದು ಎಂಬ ಸೂತ್ರ ಪರಮೇಶ್ವರ್ ಅವರಿಗೆ ಅನ್ವಯವಾಗಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…