ಚುನಾವಣಾ ಭಾಷಣ ಆರೋಪ: ವಾಗ್ವಾದ

Team Udayavani, Apr 8, 2019, 3:00 AM IST

ಬೆಂಗಳೂರು: ಬಸವನಗುಡಿಯ ಪೂರ್ಣಪ್ರಜ್ಞಾ ವಿದ್ಯಾಪೀಠದ ಆವರಣದಲ್ಲಿ ಯುಗಾದಿ ಹಬ್ಬದಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರು ಚುನಾವಣಾ ಪ್ರಚಾರಕ್ಕೆ ಯತ್ನಿಸಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆರೋಪಿಸಿದ್ದರಿಂದ ಕೆಲಕಾಲ ಗೊಂದಲ ಸ್ಥಿತಿ ನಿರ್ಮಾಣವಾಗಿತ್ತು.

ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಶನಿವಾರ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಚಕ್ರವರ್ತಿ ಸೂಲಿಬೆಲೆ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸುತ್ತಾ ನೀತಿ ಸಂಹಿತೆ ಉಲ್ಲಂ ಸಿದ್ದಾರೆ ಎಂದು ಆರೋಪಿಸಿದರು.

ಆಗ ಸ್ಥಳದಲ್ಲಿದ್ದವರು ಭಾಷಣಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದರು. ಈ ಸಂದರ್ಭದಲ್ಲಿ ಎರಡೂ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಗುಂಪುಗಳನ್ನು ಸಮಾಧಾನಪಡಿಸಿದರು ಎನ್ನಲಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಚಕ್ರವರ್ತಿ ಸೂಲಿಬೆಲೆ, “ವಿದ್ಯಾಪೀಠದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ “ರಾಷ್ಟ್ರ ಧರ್ಮ’ ಕುರಿತು ಮಾತನಾಡುವಾಗ ಕೆಲ ಕಾಂಗ್ರೆಸ್‌ ಗೂಂಡಾಗಳು ಬಂದು ಅಡ್ಡಿಪಡಿಸುವ ವಿಫ‌ಲ ಯತ್ನ ನಡೆಸಿದರು. ಆದರೆ ಯಾರೊಬ್ಬರೂ ಆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ