ಚುನಾವಣೆಗೆ ಬಿಜೆಪಿಯಿಂದ 300 ವಿಸ್ತಾರಕರು
Team Udayavani, Sep 17, 2017, 10:53 AM IST
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ ಚುನಾವಣೆ ಮುಕ್ತಾಯಗೊಳ್ಳುವವರೆಗೆ 300 ವಿಸ್ತಾರಕರನ್ನು ನೇಮಕ ಮಾಡಲು ರಾಜ್ಯ ಬಿಜೆಪಿ ನಿರ್ಧರಿಸಿದೆ.
ಈ ಕುರಿತಂತೆ ಶನಿವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಈಗಾಗಲೇ 300 ಮಂದಿಯನ್ನು ಚುನಾವಣೆ ಮುಗಿಯುವವರೆಗೆ ವಿಸ್ತಾರಕರಾಗಿ ನೇಮಕ ಮಾಡುವ ಕಾರ್ಯಯೋಜನೆ ಸಿದ್ಧಪಡಿಸಲಾಗಿದೆ. ಅಕ್ಟೋಬರ್ 1 ಮತ್ತು 2ರಂದು ಇವರಿಗಾಗಿ ವಿಶೇಷ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಅರವಿಂದ ಲಿಂಬಾವಳಿ ತಿಳಿಸಿದರು.