“ಇಮ್ಯುನಾಲಜಿ’: ಲಸಿಕಾ ಸಂಶೋಧನಾ ಕೇಂದ್ರ ಸ್ಥಾಪನೆ

Team Udayavani, Aug 11, 2020, 7:44 AM IST

“ಇಮ್ಯುನಾಲಜಿ’: ಲಸಿಕಾ ಸಂಶೋಧನಾ ಕೇಂದ್ರ ಸ್ಥಾಪನೆ

ಬೆಂಗಳೂರು: ಸದ್ಯ ಇಡೀ ಜಗತ್ತು “ಇಮ್ಯುನಾಲಜಿ’ ಬಗ್ಗೆ ಚಿಂತಿಸುತ್ತಿರುವ ಹಾಗೂ ಪರಿಣಾಮಕಾರಿ ಲಸಿಕೆಗೆ ಕಾದಿರುವ ಸಂದರ್ಭದಲ್ಲಿ ಅಮೆರಿಕದ ಅಟ್ಲಾಂಟಾದ ಎಮೊರಿ ಲಸಿಕಾ ಕೇಂದ್ರ ಸಹಯೋಗದಲ್ಲಿ “ಇಮ್ಯು  ನಾಲಜಿ ಮತ್ತು ಲಸಿಕಾ ಸಂಶೋಧನಾ ಕೇಂದ್ರ’ವನ್ನು ರಾಜ್ಯದಲ್ಲಿ ಸ್ಥಾಪಿಸಲು ಸರ್ಕಾರ ಉತ್ಸುಕವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

ಅಮೆರಿಕದ ಅಟ್ಲಾಂಟಾದ ಎಮೊರಿ ವಿವಿಯ ಲಸಿಕಾ ಕೇಂದ್ರದ ನಿರ್ದೇಶಕ ಡಾ.ರಫಿ ಅಹಮ್ಮದ್‌ ಅವರೊಂದಿಗೆ ಸೋಮವಾರ ವೆಬಿನಾರ್‌ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಇಮ್ಯುನಾಲಜಿ ಅಧ್ಯಯನ ಪ್ರಮುಖವಾಗಿದೆ. ರಾಜ್ಯದಲ್ಲೇ “ಇಮ್ಯುನಾಲಜಿ ಮತ್ತು ಲಸಿಕಾ ಸಂಶೋಧನಾ ಕೇಂದ್ರ’ ಸ್ಥಾಪನೆ ಸಂದರ್ಭೂಚಿತವೆನಿಸಿದೆ ಎಂದರು. ಲಸಿಕೆ, ಸಾಂಕ್ರಾಮಿಕ ರೋಗಗಳು, ಕ್ಯಾನ್ಸರ್‌ ಸಂಶೋಧನೆಗಳೆಲ್ಲಾ ಅಂತಿಮವಾಗಿ “ಇಮ್ಯುನಾಲಜಿ’ ವ್ಯಾಪ್ತಿಗೆ ಬರುತ್ತವೆ. “ಇಮ್ಯುನಾಲಜಿ’ ಕ್ಷೇತ್ರದಲ್ಲಿನ ಸಂಶೋಧನೆಗಳು ಭವಿಷ್ಯದಲ್ಲಿ ಎದುರಾಗಲಿರುವ ಸಮಸ್ಯೆಗಳಿಗೆ ಉತ್ತರ ಒದಗಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್‌- 19ರ ದೃಢೀಕರಣದ ಆಧುನಿಕ ವಿಧಾನಗಳ ಅಭಿವೃದ್ಧಿ ಬಗ್ಗೆಯೂ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಕ್ಕೆ ಪೂರಕ ವಾತಾವರಣವಿದೆ. ಇದನ್ನು ಬಳಸಿಕೊಂಡು ಲಸಿಕೆಗಳಿಗೆ ಸಂಬಂಧಿಸಿದಂತೆ ಸಂಶೋಧನೆ, ಕ್ಲಿನಿಕಲ್‌ ಟ್ರಯಲ್‌, ಸಂಶೋಧನೆಗಳ ಪ್ರಯೋಜನವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಅಗತ್ಯವಿದೆ. ಇದಕ್ಕೆ ಪೂರಕವಾದ ನೀತಿಯನ್ನು ಸರ್ಕಾರ ರೂಪಿಸಲಿದೆ ಎಂದು ತಿಳಿಸಿದರು. ಅಮೆರಿಕದ ಅಟ್ಲಾಂಟಾದದ ಎಮೊರಿ ವಿವಿ ಲಸಿಕಾ ಕೇಂದ್ರದ ನಿರ್ದೇಶಕ ಡಾ.ರಫಿ ಅಹಮ್ಮದ್‌ ಮಾತನಾಡಿ, ಎಮೊರಿ ಲಸಿಕಾ ಕೇಂದ್ರವು ನಿಖರತೆಯಿಂದ ಕೂಡಿದ ಅತ್ಯಾಧುನಿಕ ಕ್ಷಿಪ್ರ ಪರೀಕ್ಷಾ ವಿಧಾನವನ್ನು ಅಭಿವೃದ್ಧಿಪಡಿಸಿದೆ. ಇದನ್ನು ಅಟ್ಲಾಂಟಾದ ಆಸ್ಪತ್ರೆಗಳಲ್ಲಿ ಯಶಸ್ವಿಯಾಗಿ ಬಳಸಲಾಗುತ್ತಿದೆ. “ಪ್ಲಾಸ್ಮಾ ಥೆರಪಿ’, “ಹ್ಯೂಮನ್‌ ಮಾಲಿಕ್ಯುಲಾರ್‌ ಆಂಟಿಬಾಡೀಸ್‌’ ಕ್ಷೇತ್ರವು ಎಮೊರಿ ಕೇಂದ್ರವು ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇತರೆ ಪ್ರಮುಖ ವಲಯಗಳಾಗಿವೆ ಎಂದು ಹೇಳಿದರು.

ಕರ್ನಾಟಕ ಹಾಗೂ ಎಮೊರಿ ಲಸಿಕಾ ಕೇಂದ್ರದ ನಡುವೆ ಶೈಕ್ಷಣಿಕ ಸಹಭಾಗಿತ್ವಕ್ಕೆ ಅವಕಾಶವಿದ್ದು, ಸದ್ಯ ಆನ್‌ಲೈನ್‌ ಮೂಲಕ ಆರಂಭಿಸಬಹುದು. ಇದರಿಂದ ಎರಡೂ ಕಡೆಯ ವಿದ್ಯಾರ್ಥಿಗಳಿಗೂ ಪ್ರಯೋಜನವಾಗಲಿದೆ. ಕರ್ನಾಟಕ ಸರ್ಕಾರದ ಸಹಯೋಗಕ್ಕಾಗಿ ಸದ್ಯದಲ್ಲೇ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದರು. ಕ್ಯಾನ್ಸರ್‌ ತಜ್ಞ ಡಾ. ವಿಶಾಲ್‌ ರಾವ್‌ ಉಪಸ್ಥಿತರಿದ್ದರು.

ಆರು ತಿಂಗಳಲಿ ತಾತ್ಕಾಲಿಕ ಪರವಾನಗಿ ನಿರೀಕ್ಷೆ  : ಕೋವಿಡ್‌-19 ಲಸಿಕೆಗೆ ಸಂಬಂಧಪಟ್ಟಂತೆ ಅಮೆರಿಕದಲ್ಲಿ ಮೂರು ಲಸಿಕೆಗಳ ಕ್ಲಿನಿಕಲ್‌ ಟ್ರಯಲ್‌ ಮುಂಚೂಣಿಯಲ್ಲಿವೆ. ಅವು ಫ‌ಲಪ್ರದವೆಂದು ದೃಢಪಟ್ಟರೆ ಮುಂದಿನ 6-8 ತಿಂಗಳಲ್ಲಿ ತಾತ್ಕಾಲಿಕ ಪರವಾನಗಿ ಲಭ್ಯವಾಗಬಹುದು ಎಂದು ಅಟ್ಲಾಂಟಾದ ಎಮೊರಿ ವಿವಿ ಲಸಿಕಾ ಕೇಂದ್ರದ ನಿರ್ದೇಶಕ ಡಾ. ರμ ಅಹಮ್ಮದ್‌ ತಿಳಿಸಿದರು. ಈ ಪೈಕಿ ಎರಡು ಲಸಿಕೆಗಳು ಆರ್‌ ಎನ್‌ಎ ಆಧಾರಿತವಾಗಿವೆ. ಕನಿಷ್ಠ ಶೇ. 50 ಜನರಿಗಾದರೂ ಇದು ಪರಿಣಾಮಕಾರಿ ಎಂದು ದೃಢಪಟ್ಟರೆ ಆರರಿಂದ ಎಂಟು ತಿಂಗಳ ಅವಧಿಯಲ್ಲಿ ತಾತ್ಕಾಲಿಕ ಪರವಾನಗಿ ಸಿಗಬಹುದು ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.