ಎಫ್ ಡಿಎ-ಎಸ್‌ಡಿಎ ಹುದ್ದೆ ಸಿಕ್ಕರೂ, ನೇಮಕಾತಿ ಆದೇಶವಿಲ್ಲ

Team Udayavani, Apr 10, 2017, 10:34 AM IST

Ban10041706Medn.jpg

ಬೆಂಗಳೂರು:ಸರ್ಕಾರದ ಕೆಲಸ ಮಾಡಲು ಖಜಾನೆ ಇಲಾಖೆ ಆಯ್ಕೆ ಮಾಡಿಕೊಂಡಿರುವ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಹುದ್ದೆಗಳಿಗೆ ಆಯ್ಕೆಯಾದ ಎಂಟುನೂರು ಅಭ್ಯರ್ಥಿಗಳ ವಿಷಯದಲ್ಲಿ”ದೇವರು ವರ ಕೊಟ್ಟರೂ, ಪೂಜಾರಿ ಕೊಡುತ್ತಿಲ್ಲ’ ಎನ್ನುವಂತಾಗಿದೆ.

ಸರ್ಕಾರಿ ಹುದ್ದೆ ಸಿಕ್ಕಿ  ಸಿಂಧುತ್ವ ಪ್ರಮಾಣ ಪತ್ರ ಹಾಗೂ ಪೊಲೀಸ್‌ ಪರಿಶೀಲನೆ ಪೂರ್ಣಗೊಂಡು ಐದು ತಿಂಗಳು ಕಳೆದರೂ ಖಜಾನೆ ಇಲಾಖೆ ನೇಮಕಾತಿ ಆದೇಶ ಕೊಡುತ್ತಿಲ್ಲ.

ಕೆಪಿಎಸ್‌ಸಿ ಮೂಲಕ ಪರೀಕ್ಷೆ ಬರೆದು ಬೇರೆ ಇಲಾಖೆಗಳನ್ನು ಆಯ್ಕೆ ಮಾಡಿಕೊಂಡಿದ್ದವರು ಈಗಾಗಲೇ  ನೇಮಕಾತಿ ಆದೇಶಗಳನ್ನು ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ, ಖಜಾನೆ ಇಲಾಖೆ ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಕಾಯೋದೇ ಕಾಯಕ ಆಗಿದೆ.

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಎಫ್ ಡಿಎ ಮತ್ತು ಎಸ್‌ಡಿಎ ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆಯಾಗಿ ಖಜಾನೆ ಇಲಾಖೆ ಆಯ್ಕೆ ಮಾಡಿಕೊಂಡಿರುವ 400 ಎಫ್ಡಿಎ ಹಾಗೂ 350ಕ್ಕೂ ಹೆಚ್ಚು ಎಸ್‌ಡಿಎ ಸೇರಿ ಒಟ್ಟು ಸುಮಾರು 800 ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ ಐದು ತಿಂಗಳಿಂದ ಕಾದು ಕುಳಿತಿದ್ದಾರೆ.

ಆಹಾರ, ಆರಣ್ಯ, ಅಲ್ಪಸಂಖ್ಯಾತರ ಕಲ್ಯಾಣ, ಕಾನೂನು ಸೇರಿ ವಿವಿಧ ಇಲಾಖೆಗಳನ್ನು ಆಯ್ಕೆ ಮಾಡಿಕೊಂಡವರಿಗೆ ಈಗಾಗಲೇ ನೇಮಕಾತಿ ಆದೇಶಗಳನ್ನು ಕೊಡಲಾಗಿದೆ. ಕೆಲವರಿಗೆ ಸಿಂಧುತ್ವ ಹಾಗೂ ಪೊಲೀಸ್‌ ಪರಿಶೀಲನೆಯ ಶರತ್ತಿಗೊಳಪಟ್ಟು ನೇಮಕಾತಿ ಆದೇಶ ಕೊಡಲಾಗಿದೆ. ಆದರೆ, ನಮಗ್ಯಾಕೆ ಈ “ಶಿಕ್ಷೆ’ ಅನ್ನುವುದು ಖಜಾನೆ ಇಲಾಖೆ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಅಳಲು.

ಖಜಾನೆ ಇಲಾಖೆ ಆಯ್ಕೆ ಮಾಡಿಕೊಂಡಿರುವ 800 ಅಭ್ಯರ್ಥಿಗಳ ಪೈಕಿ ಶೇ.95ರಷ್ಟು ಜಾತಿ ಸಿಂಧುತ್ವ ಪ್ರಮಾಣ ಪತ್ರ ಹಾಗೂ ಪೊಲೀಸ್‌ ಪರಿಶೀಲನೆ ಮುಗಿದಿದೆ. ಆದರೂ, ನೇಮಕಾತಿ ಆದೇಶ ಕೊಡುತ್ತಿಲ್ಲ. ಈ ಸಂಬಂಧ ಹಲವು ಬಾರಿ ಬೆಂಗಳೂರಿಗೆ ಹೋಗಿ ನೇರವಾಗಿ ಖಜಾನೆ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಲಾಗಿದೆ. ಎಲ್ಲ ಅಭ್ಯರ್ಥಿಗಳ ಸಿಂಧುತ್ವ ಹಾಗೂ ಪೊಲೀಸ್‌ ಪರಿಶೀಲನೆ ಪೂರ್ಣಗೊಳ್ಳಲಿ ಎಂದು ಇಲಾಖೆಯಲ್ಲಿ ಸಬೂಬು ನೀಡಲಾಗುತ್ತದೆ. ದೂರವಾಣಿ ಕರೆ ಮಾಡಿ ವಿಚಾರಿಸಿದರೆ ಒಂದೊಂದು ದಿನ ಒಬ್ಬಬ್ಬರೂ ಏನೇನು ಕಾರಣಗಳನ್ನು ಹೇಳುತ್ತಾರೆ. ಹೆಚ್ಚು ಮಾತನಾಡಿದರೆ ನಿಂದಿಸಲಾಗುತ್ತದೆ ಎಂದು ನೊಂದ ಅಭ್ಯರ್ಥಿಗಳು ಆರೋಪಿಸುತ್ತಾರೆ.

ವಯಸ್ಸಿನ ಖಜಾನೆ ಖಾಲಿ: ಎರಡೂ¾ರು ವರ್ಷ ಕಷ್ಟಪಟ್ಟು ಓದಿ, ಆಸೆ ಇಟ್ಟುಕೊಂಡು ಪರೀಕ್ಷೆ ಬರೆದು ಪಾಸಾಗಿದ್ದೇವೆ. ಕೆಪಿಎಸ್‌ಸಿ ವತಿಯಿಂದ ಅಂತಿಮ ಪಟ್ಟಿ ಪ್ರಕಟಗೊಂಡು ಒಂದು ವರ್ಷ ಆಯಿತು. ಖಜಾನೆ ಇಲಾಖೆಯಲ್ಲಿ ಹುದ್ದೆ ಸಿಕ್ಕಿದೆ. ಸಿಂಧುತ್ವ, ಪೊಲೀಸ್‌ ಪರಿಶೀಲನೆ ಎಲ್ಲವೂ ಆಗಿದೆ. ಆದರೂ ನೇಮಕಾತಿ ಆದೇಶ ಸಿಗುತ್ತಿಲ್ಲ. ನೌಕರಿ ನಮ್ಮ ಪಾಲಿಗೆ ಇದೆ. ಆದರೆ, ಅನುಭವಿಸುವಂತಿಲ್ಲ. ನೌಕರಿ ಆಸೆಯಲ್ಲಿ ಜೀವನಕ್ಕೆ ಅನೇಕ ಕನಸುಗಳನ್ನು ಕಟ್ಟಿಕೊಂಡಿದ್ದೇವೆ. ಖಜಾನೆ ಇಲಾಖೆಯ ನೌಕರಿ ನಿರೀಕ್ಷೆಯಲ್ಲಿ ನಮ್ಮ ವಯಸ್ಸಿನ “ಖಜಾನೆ’ ಖಾಲಿ ಆಗುತ್ತಿದೆ. ಈ ರೀತಿ ವಯಸ್ಸು ಕಳೆದು ಹೋದರೆ ಮುಂದೇನು ಗತಿ ಅನ್ನುವ ಚಿಂತೆ ನಮ್ಮನ್ನು ಕಾಡುತ್ತಿದೆ ಎಂದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿಗಳು “ಉದಯವಾಣಿ’ ಎದುರು ತಮ್ಮ ನೋವು ತೋಡಿಕೊಂಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಫ್ಡಿಎ ಹಾಗೂ ಎಸ್‌ಡಿಎ ಹುದ್ದೆಗಳ ಭರ್ತಿಗೆ 2015ರ ಜೂ.30ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಅದೇ ವರ್ಷ ಅಕ್ಟೋಬರ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು. 1:2 ಅನುಪಾತದಲ್ಲಿ 2016ರ ಮೇ ತಿಂಗಳಲ್ಲಿ ಫ‌ಲಿತಾಂಶ ಪ್ರಕಟ, ಬಳಿಕ ದಾಖಲಾತಿಗಳ ಪರಿಶೀಲನೆ ನಡೆಯಿತು. ಅದೇ ವರ್ಷ ಅಕ್ಟೋಬರ್‌ 7ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದ ಕೆಪಿಎಸ್‌ಸಿ, ಅ.24ಕ್ಕೆ ಅಂತಿಮ ಪಟ್ಟಿ ಪ್ರಕಟಿಸಿತ್ತು. ಈಗ ಅಂತಿಮ ಪಟ್ಟಿ ಪ್ರಕಟಗೊಂಡು 5 ತಿಂಗಳು ಆದರೂ ಖಜಾನೆ ಇಲಾಖೆ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಸಿಕ್ಕಿಲ್ಲ.

“ನೇಮಕಾತಿ ಆದೇಶ ಇಂದಲ್ಲ, ನಾಳೆ ಸಿಗಬಹುಹುದೇನೂ ಎಂಬ ಆಸೆಯಲ್ಲಿ ದಿನದೂಡುತ್ತಿದ್ದೇನೆ. ಸರ್ಕಾರಿ ನೌಕರಿ ಭರವಸೆಯಿಂದ ಕೈಯಲ್ಲಿದ್ದ ಖಾಸಗಿ ಕೆಲಸ ಕಳೆದುಕೊಂಡೆ. ಪರೀಕ್ಷೆ ತಯಾರಿ, ಫ‌ಲಿತಾಂಶಕ್ಕೆ ಕಾದಿದ್ದು, ಈಗ ನೇಮಕಾತಿ ಆದೇಶಕ್ಕೆ ಕಾದು ಕುಳಿತಿದ್ದು, ಹೀಗೆ ನನ್ನ ಜೀವನ ಕಳೆದ ಎರಡು ವರ್ಷಗಳಿಂದ ನಿಂತಲ್ಲೇ ನಿಂತು ಹೋಗಿದೆ. ಕೌಟುಂಬಿಕ ಜವಾಬ್ದಾರಿಗಳನ್ನು ನೆನಪಿಸಿಕೊಂಡರೆ ಕಣ್ಣ ಮುಂದೆ ಕತ್ತಲು ಕಾಣುತ್ತದೆ’.
– ನೊಂದ ಅಭ್ಯರ್ಥಿ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.