ಫೇಸ್‌ಬುಕ್‌ ಸ್ನೇಹಿತನ ಮೇಲೆ ಹಲ್ಲೆ: ಆರೋಪಿಗಳ ಬಂಧನ

Team Udayavani, Apr 5, 2019, 12:00 PM IST

fb
ಬೆಂಗಳೂರು: ಫೇಸ್‌ಬುಕ್‌ ಸ್ನೇಹಿತನನ್ನು ಕರೆಸಿಕೊಂಡು ಮೊಬೈಲ್‌ ವಿಚಾರಕ್ಕೆ ಜಗಳವಾಡಿ ಮಾರಕಾಸ್ತ್ರಗಳಿಂದ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ಅಡ್ಡಗಟ್ಟಿ ಗಾಜು ಪುಡಿ ಮಾಡಿ, ದಾಂಧಲೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ರಘುವನಹಳ್ಳಿ ನಿವಾಸಿ ಹರ್ಷಿತ್‌ಗೌಡ ಅಲಿಯಾಸ್‌ ಹಚ್ಚು (20) ಮತ್ತು ವಡೇರಹಳ್ಳಿ ನಿವಾಸಿ ಶರಣ್‌ (20) ಬಂಧಿತರು. ಏ.3ರಂದು ಸಂಜೆ 6.30ರ ಸುಮಾರಿಗೆ ಕನಕಪುರ ಮುಖ್ಯರಸ್ತೆಯಲ್ಲಿರುವ ಯಲಚೇನಹಳ್ಳಿ ಮೆಟ್ರೋ ನಿಲ್ದಾಣ ಮುಂಭಾಗ ಹರ್ಷಿತ್‌ಗೌಡ ತನ್ನ ಫೇಸ್‌ಬುಕ್‌ ಸ್ನೇಹಿತ, ಹರಿನಗರ ನಿವಾಸಿ ಮಿಥುನ್‌ ಎಂಬಾತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ಅಡ್ಡಗಟ್ಟಿ ಗಾಜುಗಳನ್ನು ಪುಡಿ ಮಾಡಿ, ಚಾಲಕರಿಗೆ ಪ್ರಾಣ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಶರಣ್‌ ಕೂಡ ಸಹಕಾರ ನೀಡಿದ್ದ ಎಂದು ಪೊಲೀಸರು
ಹೇಳಿದರು.
ಆರೋಪಿಗಳು ವೃತ್ತಿಯಲ್ಲಿ ಪೇಂಟರ್‌ಗಳಾಗಿದ್ದು, ಹರ್ಷಿತ್‌ಗೌಡ ಈ ಹಿಂದೆ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಶರಣ್‌ ಕೂಡ ಜಯನಗರದಲ್ಲಿ ನಡೆದ ದರೋಡೆ, ಡಕಾಯಿತಿ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ. ಇಬ್ಬರೂ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದರು.
ಮೊಬೈಲ್‌ ವಿಚಾರಕ್ಕೆ ಹಲ್ಲೆ: ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಮಿಥುನ್‌ ಹಾಗೂ ಆರೋಪಿ ಹರ್ಷಿತ್‌ಗೌಡ ಫೇಸ್‌ಬುಕ್‌ ಸ್ನೇಹಿತರು. ಈ ಮಧ್ಯೆ ಆರೋಪಿ ಬುಧವಾರ ಸಂಜೆ ಕರೆ ಮಾಡಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಮಿಥುನ್‌ನನ್ನು ಕರೆಸಿಕೊಂಡಿದ್ದಾನೆ. ಈ ವೇಳೆ ಮಿಥುನ್‌ ಬಳಿಯಿದ್ದ ಮೊಬೈಲ್‌ ಕಸಿದುಕೊಂಡು, ಇದನ್ನು ವಾಪಸ್‌ ಕೊಡುವುದಿಲ್ಲ. “ನಾನೇ ಇಟ್ಟುಕೊಳ್ಳುತ್ತೇನೆ’ ಎಂದು ತಕರಾರು ತೆಗೆದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ
ಜಗಳವಾಗಿದ್ದು, ವಿಕೋಪಕ್ಕೆ ಹೋದಾಗ ಮಿಥುನ್‌, ಆರೋಪಿ ಕೈಯಲ್ಲಿದ್ದ ತನ್ನ ಮೊಬೈಲ್‌ ಕಸಿದಕೊಂಡು ಓಡುವಾಗ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರದ ಮುಂಭಾಗ ಆಯತಪ್ಪಿ ಬಿದ್ದಿದ್ದಾನೆ.
ಆಗ ತನ್ನ ದ್ವಿಚಕ್ರ ವಾಹನದಲ್ಲಿ ಶರಣ್‌ ಜತೆ ಸ್ಥಳಕ್ಕೆ ಬಂದ ಹರ್ಷಿತ್‌ಗೌಡ, ಮಾರಕಾಸ್ತ್ರದಿಂದ ಮಿಥುನ್‌ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಶ್ರೀಕಾಂತ್‌ ಎಂಬುವವರಿಗೂ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಗಾಯಾಳು ಮಿಥುನ್‌, ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ.
ಅನಂತರ ಇಬ್ಬರೂ ದ್ವಿಚಕ್ರ ವಾಹನದಲ್ಲಿ ಸ್ಥಳದಿಂದ ಪರಾರಿಯಾಗಿದ್ದು, ಕೋಣನಕುಂಟೆ ಮುಖ್ಯ ರಸ್ತೆಯ ಡಿ.ಕೆ. ಚಿಕನ್‌ ಶಾಪ್‌ ಹತ್ತಿರ ಟ್ರಕ್‌ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದರು. ಆರೋಪಿಗಳ ವಿರುದ್ಧ ಸುಬ್ರಹ್ಮಣ್ಯಪುರ ಮತ್ತು ಕೋಣನಕುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಹವಾ ಸೃಷ್ಟಿಸಲು ಕೃತ್ಯ ಕೆಲ ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ಸಾರ್ವಜನಿಕ ವಲಯದಲ್ಲಿ “ಹವಾ’ ಸೃಷ್ಟಿಸಲು ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಹಲ್ಲೆಗೂ ಮೊದಲು ಇಬ್ಬರೂ ಬಾರ್‌ವೊಂದರಲ್ಲಿ ಕಂಠಪೂರ್ತಿ ಮದ್ಯ ಸೇವಿಸಿದ್ದರು. ಹೊರಬರುತ್ತಿದ್ದಂತೆ “ನಾವು ಜೈಲಿಗೆ ಹೋಗಿ ಬಂದವರು, ಹುಷಾರಾಗಿರಿ. ನಮ್ಮ ವಿಚಾರಕ್ಕೆ ಬಂದರೆ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.