ಹಾಪ್‌ಕಾಮ್ಸ್‌ ಮೇಳದಲ್ಲಿ ಬಗೆಬಗೆ ಹಣ್ಣುಗಳ ಜಾತ್ರೆ

Team Udayavani, Feb 15, 2017, 12:22 PM IST

hopcoms.jpg

ಬೆಂಗಳೂರು: ರೈತರು ಬೆಳೆದ ಹಣ್ಣು ಸಂರಕ್ಷಿಸಿ ಸಂಗ್ರಹಿಸಲು ಹಾಪ್‌ಕಾಮ್ಸ್‌ ವತಿಯಿಂದ ಶೀಥಲಗೃಹ ಹಾಗೂ ಉಪ ಉತ್ಪನ್ನಗಳ ತಯಾರಿಕೆಯ ಸಂಸ್ಕರಣ ಕೇಂದ್ರ ನಿರ್ಮಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚಿಕ್ಕಬಳ್ಳಾಪುರದಲ್ಲಿ 9.5 ಎಕರೆ ಸರ್ಕಾರಿ ಜಮೀನು ಗುರುತಿಸಿದ್ದು, ಆ ಜಮೀನು ಹಾಪ್‌ಕಾಮ್ಸ್‌ಗೆ ಹಸ್ತಾಂತರಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ನಗರದ ಹಡ್ಸನ್‌ ವೃತ್ತದಲ್ಲಿರುವ ಹಾಪ್‌ಕಾಮ್ಸ್‌ ಮಳಿಗೆಯಲ್ಲಿ ಮಂಗಳವಾರ ದ್ರಾಕ್ಷಿ, ಕಲ್ಲಂಗಡಿ ಮಾರಾಟ ಮೇಳಕ್ಕೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ, ಹಾಪ್‌ಕಾಮ್ಸ್‌ ರೈತರ ಸಂಸ್ಥೆ.  ಈ ಸಂಸ್ಥೆಯಿಂದ ರೈತರು ಬೆಳೆದ ಹಣ್ಣು ಸಂರಕ್ಷಣೆಗೆ ಶೀಥಲಗೃಹ ಹಾಗೂ ಜಾಮ್‌ ಸೇರಿದಂತೆ ಇತರೆ ಉತ್ಪನ್ನ ತಯಾರಿಸುವ ಸಂಸ್ಕರಣೆ ಕೇಂದ್ರ ಸ್ಥಾಪಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ನೂರಾರು ವಿಧದ ದ್ರಾಕ್ಷಿಯ ತಳಿಗಳು ಇದ್ದು, ಅವುಗಳಲ್ಲಿ ಕೆಲವೊಂದನ್ನು ಮಾತ್ರ ನಾವು ಬೆಳೆಯುತ್ತಿದ್ದೇವೆ. ಅಂತೆಯೇ 350  ಮಾವಿನ ತಳಿಗಳಿದ್ದು, ಬೇಡಿಕೆ ಇರುವಂತಹ 15 ತಳಿಗಳನ್ನು ರೈತರು ಬೆಳೆಯುತ್ತಿದ್ದಾರೆ. ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ಹಣ್ಣು, ತರಕಾರಿ ನೀಡುವ ಉದ್ದೇಶದಿಂದ ಹಾಪ್‌ಕಾಮ್ಸ್‌ ಉತ್ತಮ ಸೇವೆ ನೀಡುತ್ತಿದ್ದು, ಗ್ರಾಹಕರು ದ್ರಾಕ್ಷಿ, ಕಲ್ಲಂಗಡಿ ಮೇಳದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

 ಶೇ.10ರಷ್ಟು ರಿಯಾಯಿತಿ ಮಾರಾಟ: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸುತ್ತಮುತ್ತಲ ಭಾಗದಲ್ಲಿ ದ್ರಾಕ್ಷಿ ಫ‌ಸಲು ಬಂದಿಲ್ಲ. ಆದರೆ, ಬಿಜಾಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರಿಂದ ಹಾಪ್‌ಕಾಮ್ಸ್‌ ನೇರವಾಗಿ ದ್ರಾಕ್ಷಿ ಖರೀದಿಸಿ, ನಗರದ ಗ್ರಾಹಕರಿಗೆ ಶೇ.10ರ ರಿಯಾಯಿತಿ ದರದಲ್ಲಿ ನೀಡಲಿದೆ. ಫೆ.14ರಿಂದ ಮಾರ್ಚ್‌ ಅಂತ್ಯದವರೆಗೆ ಮೇಳ ನಡೆಯಲಿದೆ ಎಂದು ಹಾಪ್‌ಕಾಮ್ಸ್‌ ಅಧ್ಯಕ್ಷ ಜಿ.ಆರ್‌.ಶ್ರೀನಿವಾಸ್‌ ತಿಳಿಸಿದ್ದಾರೆ. ಬಿಬಿಎಂಪಿ ಸದಸ್ಯ ಆರ್‌.ವಸಂತ್‌ಕುಮಾರ್‌, ವೈನ್‌ ಮಂಡಳಿ ಅಧ್ಯಕ್ಷ ರವೀಂದ್ರ ಶಂಕರ ಮಿರ್ಜೆ ಇದ್ದರು. 

ಮಾವು ಮೇಳಕ್ಕೆ ಸಿದ್ಧತೆ 
ಹಾಪ್‌ಕಾಮ್ಸ್‌ ಮತ್ತು ಮಾವು ಅಭಿವೃದ್ಧಿ ನಿಗಮ ಜಂಟಿಯಾಗಿ ಏಪ್ರಿಲ್‌ ಮೊದಲ ವಾರದಲ್ಲಿ ಮಾವು ಮತ್ತು ಇತರ ಹಣ್ಣುಗಳ ಮೇಳ ನಡೆಸಲು ಚಿಂತನೆ ನಡೆದಿದೆ. ಮೊದಲು ಕೇವಲ ಒಂದೆರಡು ಕಡೆಗಳಲ್ಲಿ ಮಾತ್ರ ಮಾವು ಮೇಳ ನಡೆಯುತ್ತಿತ್ತು. ಈ ಬಾರಿ ನಗರದ 50 ಕಡೆಗಳಲ್ಲಿ ಮೇಳ ಆಯೋಜಿಸಲಾಗುವುದು ಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.