ಹಜ್‌ ಯಾತ್ರಿಗಳಿಗೆ ಬೀಳ್ಕೊಡುಗೆ

Team Udayavani, Jul 18, 2019, 3:03 AM IST

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್‌ಇಮಾಮ್‌ ಹಾಗೂ ಮೌಜನ್‌ಗಳು ಸೇರಿ ಹಜ್‌ ಯಾತ್ರೆಗೆ ಹೊರಟ 153 ಮಂದಿಯನ್ನು ಬುಧವಾರ ಬೀಳ್ಕೊಡಲಾಯಿತು.

ಹಜ್‌ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನದೀಮ್‌ ಜಾವಿದ್‌, ಹಜ್‌ ಯಾತ್ರಾರ್ಥಿಗಳನ್ನು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್‌ಇಮಾಮ್‌ ಹಾಗೂ ಮೌಜನ್‌ಗಳ ಸಂಭಾವನೆ ಕಡಿಮೆ ಇರುವುದರಿಂದ ಅವರಿಗೆ ಹಜ್‌ ಯಾತ್ರೆ ಕೈಗೊಳ್ಳುವ ಆರ್ಥಿಕ ಶಕ್ತಿ ಇರುವುದಿಲ್ಲ.

ಆದ್ದರಿಂದ ಸಚಿವರ ಜಮೀರ್‌ ಅಹ್ಮದ್‌ ಖಾನ್‌ ಅವರು ಪ್ರತಿ ವರ್ಷ ತಮ್ಮ ಸ್ವಂತ ಖರ್ಚಿನಲ್ಲಿ ರಾಜ್ಯಾದ್ಯಂತ ಆಯ್ದ ಪೇಶ್‌ಇಮಾಮಮ್‌ ಹಾಗೂ ಮೌಜನ್‌ಗಳನ್ನು ಹಜ್‌ ಯಾತ್ರೆಗೆ ಕಳಿಸುತ್ತಿದ್ದಾರೆ ಎಂದು ಹೇಳಿದರು.

ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ಸಚಿವರು ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಈ ವರ್ಷ153 ಮಂದಿಯನ್ನು ಹಜ್‌ ಯಾತ್ರೆಗೆ ಕಳುಹಿಸಿಕೊಡುತ್ತಿದ್ದಾರೆ ಎಂದು ತಿಳಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್‌.ಜಮೀರ್‌ ಅಹಮದ್‌ ಖಾನ್‌, ಉತ್ತರ ಪ್ರದೇಶ ಕಾಂಗ್ರೆಸ್‌ ಮುಖಂಡರಾದ ಅಲ್ಲು ಮಿಯಾಮ್‌, ರಫೀಕ್‌ ವಾರ್ಸಿ ಸೇರಿದಂತೆ ಧಾರ್ಮಿಕ ಗುರುಗಳು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: "ನನ್ನ ಸಾವಿಗೆ ಪತಿ ಹಾಗೂ ಆತನ ದೊಡ್ಡಮ್ಮ ಕಾರಣ' ಕಾರಣ ಎಂದು ಸಹೋದರನ ಮೊಬೈಲ್‌ಗೆ ಸಂದೇಶ ಕಳುಹಿಸಿ ಹಿನ್ನೆಲೆ ಗಾಯಕಿ ಸುಶ್ಮಿತಾ (26) ಭಾನುವಾರ ತಡರಾತ್ರಿ...

  • ಬೆಂಗಳೂರು: ವಿಶ್ವದಾದ್ಯಂತ ಚೀನಾದ ಕೊರೊನಾ ವೈರಸ್‌ ಸದ್ದು ಮಾಡುತ್ತಿದೆ. ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ, ಅಷ್ಟೇ ಅಪಾಯಕಾರಿ ರೇಬಿಸ್‌ ಬಗ್ಗೆ...

  • ಬೆಂಗಳೂರು: ಯಕ್ಷಗಾನ ಹಾಗೂ ಮೂಡಲಪಾಯ ಕಲೆಯನ್ನು ಉಳಿಸಿ-ಬೆಳೆಸಿದವರು ಹಳ್ಳಿಗಾಡು ಪ್ರದೇಶಗಳಲ್ಲಿ ಬಹಳಷ್ಟು ಮಂದಿ ಇದ್ದಾರೆ. ಅಂತಹವರ ಸೇವೆಯನ್ನು ನೆನೆಯುವ ಕಾರ್ಯಕ್ಕೆ...

  • ಬೆಂಗಳೂರು: ಚಲಿಸುತ್ತಿದ್ದ ಬಸ್‌ನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರ ಜತೆ ಅನುಚಿತವಾಗಿ ವರ್ತಿಸಿದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನನ್ನು ಸಂತ್ರಸ್ತೆಯ ಸಂಬಂಧಿಕರೇ...

  • ಬೆಂಗಳೂರು: ಆನಂದ ರಾವ್‌ ವೃತ್ತದಲ್ಲಿರುವ ವಿದ್ಯುತ್‌ ವಿತರಣಾ ಕೇಂದ್ರದ ಆವರಣದಲ್ಲೇ ಆಕಸ್ಮಿಕ ಬೆಂಕಿಯಿಂದ 20 ಎಂವಿಎ ಸಾಮರ್ಥ್ಯದ ಎರಡು ಟ್ರಾನ್ಸ್‌ಫಾರ್ಮರ್‌ಗಳು...

ಹೊಸ ಸೇರ್ಪಡೆ