Fight: ಕ್ರಿಕೆಟ್ ಆಡುವ ವಿಚಾರಕ್ಕೆ ಗಲಾಟೆ: ಆರೋಪಿ ವಶಕ್ಕೆ
Team Udayavani, Sep 3, 2023, 11:59 AM IST
ಬೆಂಗಳೂರು: ಕ್ರಿಕೆಟ್ ಆಡುವ ವಿಚಾರಕ್ಕೆ ಯುವಕರ ಗುಂಪೊಂದು ಪರಿಚಿತ ಯುವಕನಿಗೆ ಬ್ಯಾಟ್ನಿಂದ ಹಲ್ಲೆ ನಡೆಸಿರುವ ಘಟನೆ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವೆಂಕಟಾಪುರ ನಿವಾಸಿ ಲಿಖಿತ್(21) ಹಲ್ಲೆಗೊಳಗಾದ ಯುವಕ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದನೆ. ಈ ಸಂಬಂಧ ಶಿವು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದರು.
ಹಲ್ಲೆಗೊಳಗಾದ ಲಿಖಿತ್ ಹಾಗೂ ಆರೋಪಿಗಳು ಪರಸ್ಪರ ಪರಿಚಿತರು. ಶುಕ್ರವಾರ ಸಂಜೆ ವೆಂಕಟಾಪುರದ ಕಾರ್ಮೆಲ್ ಕಾನ್ವೆಂಟ್ ಬಳಿ ಕ್ರಿಕೆಟ್ ಆಡುತ್ತಿದ್ದರು. ಆಗ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಈ ವೇಳೆ ಶಿವು ಹಾಗೂ ಆತನ ಸಹಚರರು ಕ್ರಿಕೆಟ್ ಬ್ಯಾಟ್ನಿಂದ ಲಿಖಿತ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಮುಂದಾದ ಲಿಖೀತ್ನನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ
Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್ ಕುಣಿಕೆ ಬಿಗಿದು ಸಾವು