ಸತ್ಯನಾರಾಯಣರಾವ್‌ ವಿರುದ್ಧ ಎಫ್ಐಆರ್‌ ದಾಖಲು

Team Udayavani, Mar 4, 2018, 6:20 AM IST

HN-Satyanarayana-Rao,-FIR,.jpg

ಬೆಂಗಳೂರು: ಕಾರಾಗೃಹ ನಿಯಮ ಉಲ್ಲಂಘಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ನಟರಾಜನ್‌ ಹಾಗೂ ಛಾಪಾ ಕಾಗದ ಹಗರಣದ ರೂವಾರಿ ಕರೀಂ ಲಾಲ್‌ ತೆಲಗಿಗೆ ಐಷಾರಾಮಿ ಜೀವನ ನಡೆಸಲು ಅವಕಾಶ ಕೊಟ್ಟಿದ್ದಾರೆಂಬ ಆರೋಪದ ಮೇಲೆ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಎಚ್‌.ಎನ್‌.ಸತ್ಯನಾರಾಯಣರಾವ್‌ ವಿರುದ್ಧ ಎಸಿಬಿ ಎಫ್ಐಆರ್‌ ದಾಖಲಿಸಿದೆ.

ನಿವೃತ್ತ ಐಎಸ್‌ ಅಧಿಕಾರಿ ವಿನಯಕುಮಾರ್‌ ನೀಡಿದ ವರದಿಯನ್ನು ಸರ್ಕಾರ ಅಂಗೀಕರಿಸಿದ ಬೆನ್ನಲ್ಲೇ ನಿವೃತ್ತ ಹಿರಿಯ ಐಪಿಎಸ್‌ ಅಧಿಕಾರಿ ಸತ್ಯನಾರಾಯಣರಾವ್‌ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು ತನಿಖೆ ಚುರುಕುಗೊಂಡಿದೆ. ಡಿ.ರೂಪಾ ವಿರುದ್ಧವೂ ಡಿಪಿಎಆರ್‌ ತನಿಖೆ ಸದ್ಯದಲ್ಲೇ ಆರಂಭವಾಗಲಿದೆ ಎಂದು ಹೇಳಲಾಗಿದೆ.

ಬಂದೀಖಾನೆಯ ಅವ್ಯವಹಾರ ಸಂಬಂಧ ಕಳೆದ ವರ್ಷ ಆ. 19ರಂದು ಆಗ ಕಾರಾಗೃಹದ ಡಿಐಜಿಯಾಗಿದ್ದ ಡಿ.ರೂಪಾ ಅಕ್ರಮ ಕುರಿತು ಆಗಿನ ಹಿರಿಯ ಅಧಿಕಾರಿ ಆಗಿದ್ದ ಸತ್ಯನಾರಾಯಣರಾವ್‌ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು ನೀಡಿದ್ದರು.

ಜೈಲಿನಲ್ಲಿನ ಎಲ್ಲ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ ಕುಮಾರ್‌ ನೇತೃತ್ವದಲ್ಲಿ ಸಮಿತಿ ರಚಿಸಿದ್ದರಿಂದ ಎಸಿಬಿ ಅಧಿಕಾರಿಗಳು ಎಫ್ಐಆರ್‌ ದಾಖಲಿಸಿರಲಿಲ್ಲ. ವಿನಯ್‌ ಕುಮಾರ್‌ ಅ. 21 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರಲ್ಲಿನ ಕೆಲ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ವರದಿಯ ಶಿಫಾರಸಿನಂತೆ ಕಾರಾಗೃಹದ ಭ್ರಷ್ಟಾಚಾರ ಕುರಿತು ಸತ್ಯನಾರಾಯಣರಾವ್‌ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಾಗೃಹ ಇಲಾಖೆ ಡಿಐಜಿಯಾಗಿದ್ದ ಡಿ. ರೂಪಾ, ಕಳೆದ ವರ್ಷ ಜುಲೈ 12ರಂದು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆಯುತ್ತಿದ್ದ ಹಗರಣಗಳ ಬಗ್ಗೆ ಕಾರಾಗೃಹದ ಅಂದಿನ ಡಿಜಿ ಸತ್ಯನಾರಾಯಣರಾವ್‌ ಅವರಿಗೆ ವರದಿ ಸಲ್ಲಿಸಿದ್ದರು. ಈ ವರದಿಗಳಲ್ಲಿ ಸತ್ಯನಾರಾಯಣರಾವ್‌ ಶಶಿಕಲಾ ನಟರಾಜನ್‌ಗೆ ಐಷಾರಾಮಿ ಸೌಲಭ್ಯ ಒದಗಿಸಲು ಎರಡು ಕೋಟಿ ಲಂಚ ಪಡೆದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದರು.

ದೂರು ನೀಡಿ ಬಹಳ ತಿಂಗಳು ಆಗಿವೆ. ತಡವಾಗಿಯಾದರೂ ಎಫ್ಐಆರ್‌ ದಾಖಲಿಸಿರುವುದಕ್ಕೆ ಸ್ವಾಗತಿಸುತ್ತೇನೆ. ಪ್ರಕರಣದ ತನಿಖೆಯಲ್ಲಿ ಸತ್ಯಾಂಶ ಬೆಳಕಿಗೆ ಬರಲಿದೆ ಎಂಬ ವಿಶ್ವಾಸವಿದೆ.
– ರೂಪಾ ಐಜಿಪಿ

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.