ಕಾರುಗಳಿಗೆ ಬೆಂಕಿ ಪ್ರಕರಣ: ವಾಯುಸೇನೆಯಿಂದ ತನಿಖೆ

Team Udayavani, Feb 27, 2019, 6:00 AM IST

karugalige.jpg

ಬೆಂಗಳೂರು: ಯಲಹಂಕ ವಾಯುನೆಲೆ ಸಮೀಪದ ಪಾರ್ಕಿಂಗ್‌ ಸ್ಥಳದಲ್ಲಿ ನಡೆದ ಬೆಂಕಿ ಅವಘಡ ರಾಷ್ಟ್ರ ಮತ್ತು ರಾಜ್ಯಕ್ಕೆ ಸಂಬಂಧಿಸಿದೆ. ಹಾಗಾಗಿ, ಆರೋಪ-ಪ್ರತ್ಯಾರೋಪ ಬಿಟ್ಟು ಈ ರೀತಿ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಕೋರಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಪೊಲೀಸ್‌ ವಾರ್ಷಿಕ ಕ್ರೀಡಾಕೂಟದ ಸಮಾರೋಪದಲ್ಲಿ ಮಾತನಾಡಿದರು. ಈಗಾಗಲೇ ಕೇಂದ್ರದ ರಕ್ಷಣಾ ಸಚಿವರು, ರಾಜ್ಯದ ಮುಖ್ಯಮಂತ್ರಿಗಳು ಘಟನೆ ಕುರಿತು ಚರ್ಚೆ ನಡೆಸಿದ್ದಾರೆ.

ಭಾರತೀಯ ವಾಯು ಸೇನೆ ಅಧಿಕಾರಿಗಳು ಆಂತರಿಕ ತನಿಖೆ ನಡೆಸಿದ್ದಾರೆ. ಒಟ್ಟಾರೆ ಎರಡು ತನಿಖಾ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ. ದುರ್ಘ‌ಟನೆಯಲ್ಲಿ ಕಾರು ಕಳೆದುಕೊಂಡವರಿಗೆ ವಿಮೆ, ದಾಖಲಾತಿ ಕೊಡಿಸಬೇಕಿದೆ ಎಂದರು.

ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಕ್ರೀಡಾ ಕೂಟಗಳಲ್ಲಿ ಭಾಗಿಯಾಗುವುದು ಒಳ್ಳೆಯ  ಬೆಳವಣಿಗೆ ಕ್ರೀಡಾ ಕೂಟಗಳಲ್ಲಿ ಭಾಗಿಯಾಗುವುದರಿಂದ ಪೊಲೀಸ್‌ ಸಿಬ್ಬಂದಿ ಕೂಡ ಕೆಲ ಹೊತ್ತು ಕೆಲಸದೊತ್ತಡದಿಂದ ನಿರಾಳರಾಗುತ್ತಾರೆ. ಮಹಿಳೆಯರಿಗೂ ಕ್ರೀಡೆ  ಅವಶ್ಯ ಎಂದು ಹೇಳಿದರು.

ಇದೇ ವೇಳೆ ಕೆಎಸ್‌ಆರ್‌ಪಿ ಕ್ರೀಡಾಂಗಣ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ರಾಣಿ ಅಬ್ಬಕ್ಕ ಮಹಿಳಾ ಬ್ಯಾರಕ್‌ ಲೋಕಾರ್ಪಣೆಗೊಳಿಸಲಾಯಿತು. ಹಾಗೆಯೇ ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ವಿಜೇತರಾದ ಪುರುಷ ಮತ್ತು ಮಹಿಳಾ ತಂಡಕ್ಕೆ ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರ ಪತ್ನಿ ಆಶಾ ಪಾಟೀಲ್‌ ಅವರು ಬಹುಮಾನ ವಿತರಿಸಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು, ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಇತರರಿದ್ದರು.

ಬಂಡೀಪುರ ಅಭಯಾರಣ್ಯದಲ್ಲಿ ಕಾಣಿಸಿಕೊಂಡಿರುವ ವ್ಯಾಪಕ ಬೆಂಕಿ ನಂದಿಸಲು ಸೇನಾ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಅದನ್ನು ಸಮರ್ಥವಾಗಿ ನಿರ್ವಹಿಸುತ್ತವೆ. 
-ಎಂ.ಬಿ. ಪಾಟೀಲ್‌, ಗೃಹ ಸಚಿವ 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.