ಸಿಎಂ ಸಲಹೆಗಾರರ ಕೊಠಡಿಯಲ್ಲಿ ಬೆಂಕಿ

Team Udayavani, Dec 11, 2019, 3:06 AM IST

ಬೆಂಗಳೂರು: ಬಹುಮಹಡಿ ಕಟ್ಟಡದಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಇ-ಆಡಳಿತ ವಿಭಾಗದ ಸಲಹೆಗಾರರಾದ ಬೇಳೂರು ಸುದರ್ಶನ ಅವರ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ನೂಟ್‌ನಿಂದ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.

ಬಹುಮಹಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 232ರಲ್ಲಿ ಬೆಳಗ್ಗೆ 9.50ರ ಸುಮಾರಿಗೆ ಕಚೇರಿ ಕರ್ತವ್ಯಕ್ಕೆ ಹಾಜರಾದ ಮಹಿಳಾ ಸಿಬ್ಬಂದಿಯೊಬ್ಬರು, ಕೊಠಡಿಯ ಬಾಗಿಲು ತೆರೆದು ವಿದ್ಯುತ್‌ ಸ್ವಿಚ್‌ ಒತ್ತಿದ್ದಾರೆ. ಆಗ ಇದ್ಕಕಿದ್ದಂತೆ ಟ್ಯೂಬ್‌ಲೈಟ್‌ಗಳನ್ನು ಅಳವಡಿಸಿದ್ದ ಜಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದೆ.

ಗಾಬರಿಗೊಂಡ ಅವರು ಕೊಠಡಿಯಿಂದ ಹೊರಬಂದು ಅವಘಡದ ಬಗ್ಗೆ ಇತರೆ ಸಿಬ್ಬಂದಿಗೆ ತಿಳಿಸಿ, ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ. ಕೂಡಲೇ ವಾಹನದೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಕಡತಗಳಿಗೂ ಹಾನಿಯಾಗಿಲ್ಲ. ಶಾರ್ಟ್‌ ಸರ್ಕ್ನೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವುದು ಗೊತ್ತಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ