ದುಬಾರಿ ಬೈಕ್‌ ಕದಿಯುತ್ತಿದ್ದ ಐವರ ಸೆರೆ

Team Udayavani, Jul 8, 2018, 2:44 PM IST

dubaari.jpg

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌, ಕೆಟಿಎಂ ಡ್ನೂಕ್‌ ರೀತಿಯ ದುಬಾರಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ತಮಿಳುನಾಡಿನ ಅಂಬೂರ್‌ ಗ್ಯಾಂಗ್‌ನ ಐವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡಿನ ವೇಲೂರು ಜಿಲ್ಲೆಯ ಅಂಬೂರ್‌ ಟೌನ್‌ನ ಮೊಹಮ್ಮದ್‌ ಮುಜಾಹಿದ್‌ (24), ಮುಸ್ತಾಕಿನ್‌ (19), ಇಸ್ತಿಯಾಜ್‌ (25), ನೂರ್‌ ಮೊಹಮ್ಮದ್‌ (21) ಮತ್ತು ಜುಲ್ಫಿಕರ್‌ ಅಲಿ (20) ಬಂಧಿತರು. ನಸುಕಿನ 3 ಗಂಟೆ ಸುಮಾರಿಗೆ ಕಾರಿನಲ್ಲಿ ನಗರಕ್ಕೆ ಬರುತ್ತಿದ್ದ ಆರೋಪಿಗಳು, ತಮಿಳುನಾಡಿಗೆ ಹತ್ತಿರ ಇರುವ ಮಡಿವಾಳ, ಎಚ್‌ಎಸ್‌ಆರ್‌ ಲೇಔಟ್‌, ಬಂಡೆಪಾಳ್ಯ, ಪರಪ್ಪನ ಅಗ್ರಹಾರ ಭಾಗಗಳಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದರು ಎಂದು ಆಗ್ನೇಯ ವಿಭಾಗದ ಡಿಸಿಪಿ ಡಾ. ಬೋರಲಿಂಗಯ್ಯ ಹೇಳಿದರು.

ಆರೋಪಿಗಳಿಂದ 75 ಲಕ್ಷ ರೂ. ಮೌಲ್ಯದ 46 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 15 ರಾಯಲ್‌ ಎನ್‌ಫೀಲ್ಡ್‌, 13 ಕೆಟಿಎಂ ಡ್ನೂಕ್‌, 10 ಪಲ್ಸರ್‌,7 ಯಮಹಾ ಆರ್‌15 ಹಾಗೂ ಒಂದು ಹೊಂಡಾ ಶೈನ್‌ ವಾಹನ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಬಂಡೆಪಾಳ್ಯ ಮತ್ತು ಪರಪ್ಪನ ಅಗ್ರಹಾರ ಹಾಗೂ ಎಚ್‌ಎಸ್‌ಆರ್‌ ಲೇಔಟ್‌ ಠಾಣೆಗಳಲ್ಲಿ ದಾಖಲಾಗಿದ್ದ 21 ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದರು.

ಕೇವಲ 15 ಸಾವಿರಕ್ಕೆ ಮಾರಾಟ: ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳನ್ನು ಕದ್ದೊಯ್ಯುತ್ತಿದ್ದ ಆರೋಪಿಗಳು ತಮಿಳುನಾಡಿನ ವಿದ್ಯಾರ್ಥಿಗಳು, ಯುವಕರಿಗೆ ಕೇವಲ 15ರಿಂದ 20 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಅಂಬೂರು, ವೇಲೂರು ಭಾಗದ ಕಾಲೇಜು ವಿದ್ಯಾರ್ಥಿಗಳನ್ನು ಪರಿಚಯಸಿಕೊಳ್ಳುತ್ತಿದ್ದ ಆರೋಪಿಗಳು ಅವರಿಗೆ ಬೇಕಿರುವ ಬೈಕ್‌ ಕಳವು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಹಿಂದೆ ತಮಿಳುನಾಡಿನ ಅಂಬೂರು ಮೂಲದ ಮಾಸ್ಟರ್‌ಮೈಂಡ್ ಒಬ್ಬ ಕೆಲಸ ಮಾಡುತ್ತಿದ್ದು, ಈತ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳ ಬೇಡಿಕೆಗೆ ತಕ್ಕಂತೆ ಬೈಕ್‌ಗಳನ್ನು ಬಂಧಿತರ ಮೂಲಕ ನಗರದಲ್ಲಿ ಕಳವು ಮಾಡಿಸುತ್ತಿದ್ದ. ಕದ್ದ ಬೈಕ್‌ಗಳಿಗೆ ತಮಿಳುನಾಡು ನೋಂದಣಿಯ ನಕಲಿ ನಂಬರ್‌ ಪ್ಲೇಟ್‌, ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು. ತಮಿಳುನಾಡು ಪೊಲೀಸರು ಹೆಚ್ಚಾಗಿ ವಾಹನ ಪರಿಶೀಲನೆ ಮಾಡದಿರುವುದೇ ಆರೋಪಿಗಳಿಗೆ ವರದಾನವಾಗಿತ್ತು ಎಂದು ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಪೇದೆಗಳಿಗೆ ಸಿಕ್ಕಿ ಬಿದ್ದ ಕಳ್ಳರು: ಜೂನ್‌ 26ರಂದು ರಾತ್ರಿ 9 ಗಂಟೆ ಸುಮಾರಿಗೆ ಎಚ್‌ಎಸ್‌ಆರ್‌ ಲೇಔಟ್‌ನ ಪೇದೆಗಳಾದ ರಾಜಶೇಖರ್‌, ನಿಂಗಪ್ಪ ಅರಮನೆ, ಮಾಲತೇಶ್‌ ಹಾಗೂ ಸತೀಶ್‌ ಗಸ್ತಿನಲ್ಲಿದ್ದರು. ಈ ವೇಳೆ ಎರ್ಟಿಗಾ ಕಾರಿನಲ್ಲಿ ಬಂದ ಆರೋಪಿಗಳು ಅನುಮಾನಸ್ಪದವಾಗಿ ಓಡಾಡುತ್ತಿದ್ದರು.

ಕಾರು ತಡೆಯಲು ಯತ್ನಿಸಿದಾಗ ನಿಲ್ಲಿಸಿದೆ ಪರಾರಿಯಾಗಿದ್ದರು. ಹಿಂಬಾಲಿಸಿದ ಸಿಬ್ಬಂದಿ, ಆರೋಪಿಗಳ ಕಾರು ಅಡ್ಡಗಟ್ಟಿ, ವಿಚಾರಣೆ ನಡೆಸಿದಾಗ ಬೈಕ್‌ಗಳ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳನ್ನು ಹಿಡಿದ ನಾಲ್ವರು ಪೇದೆಗಳಿಗೆ ಡಿಸಿಪಿ ಡಾ ಬೋರಲಿಂಗಯ್ಯ ಅವರು ತಲಾ ಹತ್ತು ಸಾವಿರ ರೂ. ಬಹುಮಾನ ಹಾಗೂ ಇಡೀ ತಂಡಕ್ಕೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಟಾಪ್ ನ್ಯೂಸ್

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Shobha

Lokasabha Poll: ಎಸ್‌ಟಿಎಸ್‌ ಕ್ಷೇತ್ರದಲ್ಲಿ ಲೀಡ್‌ ಕೊಟ್ಟು ಪಾಠ ಕಲಿಸಿದ್ದೀರಿ- ಶೋಭಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.