ಐದು ವರ್ಷದ ಸಾಧನೆ ತೃಪ್ತಿ ತಂದಿದೆ

Team Udayavani, Mar 12, 2019, 6:36 AM IST

5varshada.jpg

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಸಂಸದನಾಗಿ, ಕೇಂದ್ರ ಸಚಿವನಾಗಿ ಐದು ವರ್ಷ ನಿರ್ವಹಿಸಿದ ಕಾರ್ಯ ತೃಪ್ತಿ ತಂದಿದೆ. ಈ ಚುನಾವಣೆಗೆ ಪಕ್ಷ ಹೇಳಿದಲ್ಲಿ ಸ್ಪರ್ಧೆ ಮಾಡುವೆ. ಹಾಗೇ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಾಮರ್ಥ್ಯವನ್ನೂ ಸೃಷ್ಟಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಹೋಟೆಲ್‌ ಒಂದರಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ತಮ್ಮ ಐದು ವರ್ಷದ ಸಾಧನೆಯ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಬಿಜೆಪಿ ಚುನಾವಣೆಗೆ ಸಿದ್ಧವಾಗಿದೆ. ಪಕ್ಷದ ಕಾರ್ಯಕರ್ತರ ತಯಾರಿ, ಮತದಾರರಿಗೆ ಕೇಂದ್ರದ ಸಾಧನೆಗಳ ಕುರಿತು ತಿಳಿಸುವುದು ಹಾಗೂ ಶೇ.100ರಷ್ಟು ಮತದಾನ ಆಗುವಂತೆ ಪ್ರಯತ್ನ ನಡೆಸುವುದು ನಮ್ಮ ಗುರಿಯಾಗಿದೆ. ಐದು ತಿಂಗಳ ಹಿಂದಿನಿಂದಲೇ ಚುನಾವಣಾ ಕಾರ್ಯ ಆರಂಭಿಸಿದ್ದೇವೆ ಎಂದರು.

ಪ್ರತಿ ಭಾರಿಯೂ ಜನರಿಂದಲೇ ಮೌಲ್ಯಮಾಪನ ಮಾಡಲಾಗುತ್ತದೆ. ಐದು ವರ್ಷದ ಸಾಧನೆಯನ್ನು ಜನರ ಮುಂದೆ ತೆರೆದಿಟ್ಟಿದ್ದೇವೆ. ಚುನಾವಣಾ ಸ್ಪರ್ಧೆಗೆ ಇಳಿಯುವ ಮೊದಲು ಸಾಧನೆಯ ಪಟ್ಟಿಯನ್ನು ಜನರ ಮುಂದೆ ಇಡುವಂತೆ ಪಕ್ಷದ ಸೂಚನೆ ಇತ್ತು. ಅದರಂತೆ ಸಾಧನೆಯ ಪಟ್ಟಿಯನ್ನು ಜನರ ಮುಂದಿಟ್ಟಿದ್ದೇವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಐದು ವರ್ಷ ಕೇಂದ್ರ ಸಚಿವನಾಗಿ ರಾಜ್ಯದ ಎಲ್ಲ ಸಮಸ್ಯೆಗಳಿಗೂ ಸ್ಪಂದಿಸಿದ್ದೇನೆ. ಕೇಂದ್ರದ ಮಂತ್ರಿಯಾಗಿ ನನ್ನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬಂದಿದ್ದ 25 ಕೋಟಿ ರೂ. ಅನುದಾನದಲ್ಲಿ 22.55 ಕೋಟಿ ರೂ.ಗಳ ಸಂಪೂರ್ಣ ವಿನಿಯೋಗ ಮಾಡಿದ್ದೇವೆ. 2.45 ಕೋಟಿ ರೂ.ಗಳ ಕಾಮಗಾರಿಗೂ ಚಾಲನೆ ನೀಡಲಾಗಿದೆ. ಕ್ಷೇತ್ರದಲ್ಲಿ ಬಹು ವರ್ಷದಿಂದ ಇದ್ದ ರಕ್ಷಣಾ ಇಲಾಖೆ ವ್ಯಾಪ್ತಿಯ 24 ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ ಎಂದರು.

ಸಾಧನೆ, ಅಭಿವೃದ್ಧಿಯ ಮಾಹಿತಿ: ರಸ್ತೆ ಕಾಮಗಾರಿ, ಮೇಲ್ಸೇತುವೆ, ಅಂಡರ್‌ಪಾಸ್‌ ಸೇರಿದಂತೆ ಹಲವು ಸಮಸ್ಯೆಗಳಿಗೆ ಮುಕ್ತಿ ನೀಡಲಾಗಿದೆ. ಕರ್ನಾಟಕ ಮುಕ್ತ ವಿವಿಗೆ ಮರುಜೀವ ನೀಡಿದ್ದೇವೆ. ಸಬ್‌ಅರ್ಬನ್‌ ರೈಲು ಯೋಜನೆಗೆ ರೈಲ್ವೆ ಸಚಿವನಾಗಿದ್ದಾಗಿಂದಲೇ ರೂಪುರೇಷೆ ಸಿದ್ಧಪಡಿಸಿದ್ದು, ಈಗ ಚಾಲನೆ ಸಿಗುತ್ತಿದೆ. ಕ್ಯಾನ್ಸರ್‌ ನಿವಾರಣೆಗೆ ಪೂರಕವಾದ 395 ಔಷಧಗಳು ಜನೌಷಧ ಮಳಿಗೆಗಳಲ್ಲಿ ದೊರೆಯುವಂತೆ ಮಾಡಿದ್ದೇವೆ.

ಯಶವಂತಪುರಕ್ಕೆ ಕೇಂದ್ರಿಯ ವಿದ್ಯಾಲಯ ತಂದಿದ್ದೇನೆ. ಆದರ್ಶ ಗ್ರಾಮ ಯೋಜನೆಯಲ್ಲಿ 12 ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅತ್ಯುತ್ತಮ ಗ್ರಾಮಗಳು ಎಂಬ ಹೆಗ್ಗಳಿಕೆ ಸಿಕ್ಕಿದೆ. ಜೋಡಿ ರೈಲು ಮಾರ್ಗ, ವಿದ್ಯುದೀಕರಣ, ಬೆಂಗಳೂರು-ಮೈಸೂರು ನಡುವೆ ಹತ್ತು ಪಥದ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಮ್ಮ ಅವಧಿಯ ಸಾಧನೆಗಳು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಶಾಸಕರಾದ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸುರೇಶ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯರಾದ ಡಾ.ವೈ.ಎನ್‌.ನಾರಾಯಣ ಸ್ವಾಮಿ, ಲೇಹರ್‌ ಸಿಂಗ್‌, ಬಿಜೆಪಿ ಮುಖಂಡರಾದ ಅಶ್ವತ್ಥನಾರಾಯಣ, ನೆ.ಲ.ನರೇಂದ್ರಬಾಬು ಮೊದಲಾದವರು ಇದ್ದರು.

ಎಲ್ಲಾ ವಾರ್ಡ್‌ಗಳಲ್ಲೂ ಸಭೆ ಮಾಡಿದ್ದೇವೆ. ರೈಲ್ವೆ ಸಚಿವನಾಗಿ 21 ಹೊರ ರೈಲು ಬರುವಂತೆ ಮಾಡಿದ್ದೇನೆ. ಕಾನೂನು ಸಚಿವನಾಗಿ 100ಕ್ಕೂ ಅಧಿಕ ನಿರುಪಯುಕ್ತ ಕಾನೂನನ್ನು ತೆಗೆದುಹಾಕಿದ್ದೇನೆ. ಒಟ್ಟಾರೆಯಾಗಿ ಐದು ವರ್ಷದಲ್ಲಿ ಮಾಡಿದ ಸಾಧನೆ ತೃಪ್ತಿ ತಂದಿದೆ.
-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.