ಪ್ರವಾಹ ಪರಿಸ್ಥಿತಿಗೆ ಪ್ರಧಾನಿ ಸ್ಪಂದಿಸದೇ ಇರುವುದು ರಾಜ್ಯಕ್ಕೆ ಅವಮಾನ : ದಿನೇಶ್ ಗುಂಡೂರಾವ್
Team Udayavani, Sep 7, 2019, 3:58 PM IST
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದರೂ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಏನನ್ನೂ ಹೇಳದೆ ಇದದ್ದು ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಪ್ರತಿಕಾಗೋಷ್ಟಿಯಲ್ಲಿ ಮಾತಾಡಿದ ಅವರು ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆಯಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ಯಾವ ಮಾತನ್ನು ಹೇಳದೇ ಇರುವುದು ನಮ್ಮ ರಾಜ್ಯಕ್ಕೆ ಮಾಡಿದ ಅವಮಾನ ಎಂದರು.
ರಷ್ಯಾಗೆ ಹೋಗಿ 1 ಬಿಲಿಯನ್ ನೆರವು ನೀಡುವ ಪ್ರಧಾನಿ ನಮ್ಮದೇ ದೇಶದ ಜನರು ಪ್ರವಾಹದಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಅವರ ಬಗ್ಗೆ ಸಾಂತ್ವನ ಹೇಳುವ ಸೌಜನ್ಯ ತೋರಿಸದೇ ಇರುವುದು ದುರ್ದೈವ. ರಾಜ್ಯ ಬಿಜೆಪಿ ನಾಯಕರು ಪ್ರಧಾನಿಯನ್ನು ಮಾತನಾಡಿಸದಷ್ಟು ಅಸಹಾಯಕರಾಗಿರುವುದು ಕನಿಕರ ಬರುತ್ತದೆ. ರಾಜ್ಯ ಸರ್ಕಾರ ತಕ್ಷಣ ಸರ್ವ ಪಕ್ಷಗಳ ಸಭೆ ಕರೆದು ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಬೇಕು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ಬೇಕಾದರೆ ಗೋ ಮಾಂಸ ತಿನ್ನಲಿ, ಆದರೆ ವಕೀಲಿಕೆ ಮಾಡಬೇಡಿ: ಛಲವಾದಿ ನಾರಾಯಣಸ್ವಾಮಿ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು
ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್ ಮಿತ್ರ’ರು