ಪದ್ಮನಾಭನಗರದಲ್ಲಿ ಫಾರಿನ್ ರಿಟರ್ನ್ ಅಭ್ಯರ್ಥಿ?
Team Udayavani, Apr 3, 2018, 12:33 PM IST
ಬೆಂಗಳೂರು: ಪದ್ಮಾನಭನಗರ ವಿಧಾನಸಭೆ ಕ್ಷೇತ್ರದಲ್ಲಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಸಲು ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್, ವಿದೇಶದಿಂದ ಮರಳಿರುವ ಉದ್ಯಮಿ ಎಂ.ಜಿ.ಬಾಲಾಜಿ ಎಂಬುವವರಿಗೆ ಟಿಕೆಟ್ ನೀಡಲು ಮುಂದಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೋಮವಾರ, ಬಾಲಾಜಿ ಅವರ ಸ್ವ-ವಿವರ ಪಡೆದುಕೊಂಡಿದ್ದು, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ವಿರುದ್ಧ ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಗೆ ತಾಂತ್ರಿಕ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದ ಬಾಲಾಜಿ, 1987ರಲ್ಲಿ ಅಮೆರಿಕದ ಮಿಚಿಗನ್ ವಿವಿಯಲ್ಲಿ ಪದವಿ ಪಡೆದು, ಅಮೆರಿಕ ಕನ್ನಡ ಕೂಟದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು.
ನಂತರ ಭಾರತಕ್ಕೆ ಬಂದು ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಎಐಸಿಸಿ ಮಟ್ಟದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 2009ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡು ವೀಕ್ಷಕರಾಗಿ, ತೆಲಂಗಾಣ ರಾಜ್ಯಕ್ಕೆ ಎಐಸಿಸಿ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ
Bengaluru: ಬಸ್ ಕಂಡಕ್ಟರ್, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ
Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್ ದುರ್ಮರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.