ನಗರದ ಶಾಲಾ ಮಕ್ಕಳ ಸುರಕ್ಷತೆ ಸಮಿತಿ ರಚನೆ

Team Udayavani, Sep 10, 2019, 3:02 AM IST

nagarada

ಬೆಂಗಳೂರು: ನಗರದಲ್ಲಿ ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪ ಪೊಲೀಸ್‌ ಆಯುಕ್ತ (ಡಿಸಿಪಿ)ಗಳನ್ನು ಒಳಗೊಂಡ ಕ್ಷೇತ್ರವಾರು ಸಮಿತಿ ರಚನೆಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ನಿರ್ದೇಶಿಸಿದ್ದಾರೆ.

ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಪ್ರಾಯೋಗಿಕ ಪರಿಹಾರಗಳನ್ನು ರೂಪಿಸುವ ಉದ್ದೇಶದಿಂದ ಸಚಿವರು, ಸೋಮವಾರ ನಗರ ಪೊಲೀಸ್‌ ಆಯುಕ್ತರು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ನಿಮ್ಹಾನ್ಸ್‌ ಸಂಸ್ಥೆಯ ಪ್ರತಿನಿಧಿಗಳ ಸಭೆ ಕರೆದು, ಅಗತ್ಯ ಸಲಹೆ ಸ್ವೀಕರಿಸಿ, ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆಯಾ ಡಿಸಿಪಿಗಳನ್ನು ಒಳಗೊಂಡ ಕ್ಷೇತ್ರವಾರು ಸಮಿತಿಗಳನ್ನು ಕೂಡಲೇ ರಚನೆ ಮಾಡಿ, ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೆಂಗಳೂರು ನಗರ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿವ ಕ್ಷೇತ್ರವಾರು ಶಾಲಾ ದತ್ತಾಂಶ ತಯಾರಿಸಿ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಮಗ್ರ ಯೋಜನೆಯನ್ನು ರೂಪಿಸಬೇಕು. ರಾಜ್ಯಾದ್ಯಂತ ಶಿಕ್ಷಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆಗಳ ಸಮನ್ವಯ ಸಮಿತಿಗಳು ಕನಿಷ್ಠ ತಿಂಗಳಿಗೊಮ್ಮೆ ಸಭೆ ಸೇರಿ ರ್ಯಾಗಿಂಗ್‌ ನಿಯಂತ್ರಣ, ಡ್ರಗ್‌ ಹಾವಳಿ, ಲೈಂಗಿಕ ಶೋಷಣೆ ಸೇರಿದಂತೆ ಹಲವು ಪ್ರಾಯೋಗಿಕ ಸಮಸ್ಯೆಗಳಿಗೆ ಕೂಡಲೇ ಪರಿಹಾರ ದೊರಕಿಸುವ ಕ್ರಮವಾಗಬೇಕು ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಎಲ್ಲ ಶಾಲೆಗಳು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ(ಪಬ್ಲಿಕ್‌ ಸೇಫ್ಟಿ ಆಕ್ಟ್) ಬರುವ ರೀತಿಯಲ್ಲಿ ಕಾನೂನು ತಿದ್ದುಪಡಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಮ್ಹಾನ್ಸ್‌ ಸಂಸ್ಥೆಯು ಸಿದ್ಧಪಡಿಸಿರುವ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನಗೊಳಿಸುವ ಕುರಿತಂತೆ ಕ್ರಿಯಾಯೋಜನೆಯನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ರೂಪಿಸಬೇಕು. ಸರ್ಕಾರ ಉದ್ದೇಶಿಸಿರುವ ಬ್ಯಾಗ್‌ ರಹಿತ ದಿನಗಳಂದು ಮಕ್ಕಳ ಸುರಕ್ಷಣೆಯ ಕುರಿತಂತೆ ಬೋಧನಾ ಅಂಶಗಳನ್ನು ಅಡಕಗೊಳಿಸಿ ಸಮಗ್ರ ಚಟುವಟಿಕೆ ಆಧಾರಿತ ಪಠ್ಯಕ್ರಮ ರೂಪಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆ.ಜಿ.ಜಗದೀಶ್‌, ಸರ್ವಶಿಕ್ಷಾಅಭಿಯಾನದ ಯೋಜನಾ ನಿರ್ದೇಶಕ ಡಾ.ಟಿ.ಎಂ.ರೇಜು, ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.