ಸಿಇಸಿ ನೇಮಕಕ್ಕೆ “ಕೊಲಿಜಿಯಂ’ ವ್ಯವಸ್ಥೆ ಬೇಕು: ಎಸ್.ವೈ ಖುರೇಷಿ
Team Udayavani, Mar 18, 2018, 6:10 AM IST
ಬೆಂಗಳೂರು: ಭಾರತದ ಮುಖ್ಯ ಚುನಾವಣಾ ಆಯುಕ್ತರನ್ನು ನೇರವಾಗಿ ಕೇಂದ್ರ ಸರ್ಕಾರ ನೇಮಕ ಮಾಡುವ ಬದಲು “ಕೊಲಿಜಿಯಂ’ ವ್ಯವಸ್ಥೆ ಜಾರಿಗೆ ತರಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಪ್ರತಿಪಾದಿಸಿದ್ದಾರೆ.
ಫೋರಂ ಫಾರ್ ಡೆಮಾಕ್ರಸಿ ಆ್ಯಂಡ್ ಕಮ್ಯುನಲ್ ಅಮಿಟಿ-ಕರ್ನಾಟಕ (ಎಫ್ಡಿಸಿಎ) ಹಾಗೂ ಸೇಂಟ್ ಜೋಸೆಫ್ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಯೋಗದಲ್ಲಿ ಶನಿವಾರ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ “ಚುನಾವಣಾ ಸುಧಾರಣೆಗಳು ಮತ್ತು ಸಾಂವಿಧಾನಿಕ ಮಾದರಿಗಳು’ ವಿಚಾರಸಂಕಿರಣದಲ್ಲಿ ಮಾತನಾಡಿದ ಆವರು, ವಿಶ್ವದ ಅತ್ಯಂತ ಬಲಿಷ್ಠ ಚುನಾವಣಾ ಆಯೋಗದ ನಮ್ಮದು. ಆದರೆ, ಅತ್ಯಂತ ದುರ್ಬಲ ನೇಮಕಾತಿ ವ್ಯವಸ್ಥೆ ಅದು ಹೊಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನ್ಯಾಯಮೂರ್ತಿಗಳ ನೇಮಕಾತಿಗೆ ಕೊಲಿಜಿಯಂ ಇದೆ. ಅದೇ ರೀತಿ ಸಾಂವಿಧಾನಿಕ ಸಂಸ್ಥೆ ಅಲ್ಲದಿದ್ದರೂ ಕೇಂದ್ರ ಮುಖ್ಯ ಮಾಹಿತಿ ಆಯುಕ್ತರು, ಕೇಂದ್ರ ವಿಚಕ್ಷಣಾ ಆಯುಕ್ತರ ನೇಮಕಾತಿಗೆ ಸ್ವತಂತ್ರ ಸಮಿತಿ ಇರುತ್ತದೆ. ಕೇಂದ್ರ ಗೃಹ ಸಚಿವಾಲಯದ ಒಂದು ವಿಭಾಗವಾಗಿರುವ ಸಿಬಿಐ ಮುಖ್ಯಸ್ಥರ ನೇಮಕಾತಿಗೆ ಪ್ರಧಾನಿ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ಸಮಿತಿ ಇರುತ್ತದೆ. ಆದರೆ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ನೇಮಕ ಮಾತ್ರ ನೇರವಾಗಿ ಸರ್ಕಾರ ಮಾಡುತ್ತದೆ. ನಾನೂ ಸಹ ಇದೇ ದುರ್ಬಲ ವ್ಯವಸ್ಥೆಯ ಫಲಾನುಭವಿ. ಈ ರೀತಿಯ ಸರ್ಕಾರದ ನೇಮಕಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕಾಗಿದೆ. ರಾಷ್ಟ್ರದ ಹಿತ ಮತ್ತು ಚುನಾವಣಾ ಆಯೋಗ ಎಂಬ ಸಾಂವಿಧಾನಿಕ ಸಂಸ್ಥೆಯ ರಕ್ಷಣೆಗೆ ಇದು ಅವಶ್ಯಕ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ