ಕರುಣಾನಿಧಿ ಆರೋಗ್ಯ ವಿಚಾರಿಸಿದ ದೇವೇಗೌಡ
Team Udayavani, Aug 4, 2018, 6:10 AM IST
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ಚೆನ್ನೈಗೆ ತೆರಳಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.
ಕರುಣಾನಿಧಿ ಚಿಕಿತ್ಸೆ ಪಡೆಯುತ್ತಿರುವ ಚೆನ್ನೈನ ಆಸ್ಪತ್ರೆಗೆ ತೆರಳಿದ ದೇವೇಗೌಡರು ಕರುಣಾನಿಧಿ ಅವರನ್ನು ನೋಡಿದರಲ್ಲದೆ, ಅವರ ಪುತ್ರ ಸ್ಟಾಲಿನ್ ಬಳಿ ಆರೋಗ್ಯದ ಕುರಿತು ಮಾಹಿತಿ ಪಡೆದರು. ಅಲ್ಲದೆ, ಕನಿಮೋಳಿ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರುಣಾನಿಧಿ ಅವರ ಆರೋಗ್ಯ ಸುಧಾರಿಸಿ ಅವರು 100 ವರ್ಷ ಕಾಲ ಬಾಳಲಿ ಎಂದು ಹಾರೈಸುತ್ತೇನೆ. ಅತ್ಯಂತ ಹಿರಿಯ ನಾಯಕರಾಗಿರುವ ಕರುಣಾನಿಧಿ ಅವರು, ಕೇಂದ್ರದಲ್ಲಿ ಅನೇಕ ಮೈತ್ರಿ ಸರ್ಕಾರಗಳೊಂದಿಗೆ ಕೈಜೋಡಿಸಿದ್ದು, ತಾವು ಪ್ರಧಾನಿಯಾಗಿದ್ದಾಗಲೂ ಬೆಂಬಲ ಸೂಚಿಸಿದ್ದರು. ಹೀಗಾಗಿ ಅವರ ಆರೋಗ್ಯ ವಿಚಾರಿಸುವುದು ನನ್ನ ಜವಾಬ್ದಾರಿಯಾಗಿತ್ತು. ಹೀಗಾಗಿ ಬಂದಿದ್ದೇನೆ ಎಂದರು.
ಕರುಣಾನಿಧಿ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಬೇಕು ಎಂದುಕೊಂಡಿದ್ದೆ. ಆದರೆ, ಸೋಕು ಕಾರಣದಿಂದಾಗಿ ವೈದ್ಯರು ಕರುಣಾನಿಧಿ ಅವರು ಚಿಕಿತ್ಸೆ ಪಡೆಯುತ್ತಿರುವ ಸ್ಥಳಕ್ಕೆ ಹೋಗಲು ಅವಕಾಶ ಕೊಡಲಿಲ್ಲ. ಹೀಗಾಗಿ ದೂರದಿಂದಲೇ ಅವರನ್ನು ಕಂಡು ಮಕ್ಕಳ ಬಳಿ ಆರೋಗ್ಯ ವಿಚಾರಿಸಿದ್ದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ