ನಾಲ್ವರು ಮನೆಗಳ್ಳರ ಬಂಧನ: ಚಿನ್ನಾಭರಣ ವಶ


Team Udayavani, Jan 23, 2019, 6:27 AM IST

nalvara.jpg

ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಪತ್ತೆಹಚ್ಚಿ ಕಳವು ಮಾಡುತ್ತಿದ್ದ ನಾಲ್ವರು ಆರೋಪಗಳನ್ನು ಬಂಧಿಸಿರುವ ಉತ್ತರ ವಿಭಾಗದ ಪೊಲೀಸರು, 2.30 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಮತ್ತು ಮನೆಗಳತನಕ್ಕೆ ಬಳಸಿದ ಮೋಟಾರು ಬೈಕ್‌ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನದ ಶಾಂತಿ ಗ್ರಾಮದ ಗಣೇಶ (39), ತಿಪಟೂರಿನ ಕುಮಾರ (30), ಕೆಂಗೇರಿಯ ರಿಯಾಜ್‌ ಅನೀಫ್ (33) ಹಾಗೂ ನಂದಿನಿ ಲೇಔಟ್‌ನ ಹಲ್ತಾಪ್‌ ಸಯೀದ್‌ ಅಬ್ದುಲ್ಲಾ (30) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಶ್ರೀರಾಂಪುರ ಪೊಲೀಸರು ಹೇಳಿದ್ದಾರೆ.

ಶ್ರೀರಾಂಪುರದ ಜಕ್ಕರಾಯನ ಕೆರೆಯ ನಿವಾಸಿ ಅರ್ಮಗಂ ಎಂಬುವವರು ಕಳೆದ ಜ.16 ರಂದು ಮನೆಗೆ ಬೀಗ ಹಾಕಿ ಕೊಂಡು ತಮಿಳುನಾಡಿಗೆ ತೆರಳಿದ್ದಾಗ ಮನೆ ಬೀಗ ಮುರಿದು ಒಳ ನುಗ್ಗಿದ್ದ ಆರೋಪಿಗಳಾದ ಗಣೇಶ್‌, ಕುಮಾರ್‌ ಹಾಗೂ ರಿಯಾಜ್‌ ಬಿರುವಿನಲ್ಲಿ ಇಟ್ಟಿದ್ದ 60 ಗ್ರಾಂ ತೂಕದ 1 ಲಕ್ಷ 80 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಶ್ರೀರಾಮಪುರದ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿ. ಶಿವಾಜಿರಾವ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಹಳೇ ಪ್ರಕರಣಗಳು ಪತ್ತೆ: ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಶ್ರೀರಾಂಪುರ ಪೊಲೀಸ್‌ ಠಾಣೆಗಳಲ್ಲಿ ನಡೆದಿರುವ ಕೆಲವು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳಾದ ಡಿ. ಗಣೇಶ್‌ ಮತ್ತು ಕುಮಾರ್‌ ಈ ಹಿಂದೆ ಶೇಷಾದ್ರಿಪುಂರ ಮತ್ತು ಶ್ರೀರಾಮಪುರ ಪೊಲೀಸ್‌ ಠಾಣೆಗಳಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಬಂಧನಗೊಂಡು ಬಿಡುಗಡೆಯಾಗಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಆಭರಣ ಕಳವು ಆರೋಪಿ ಬಂಧನ

ಚಿನ್ನಾಭರಣ ಕಳವು ಆರೋಪಿ ಸಯೆದ್‌ ಅಬ್ದುಲ್ಲಾ (31) ಎಂಬುವನ್ನು ಬಂಧಿಸಿರುವ ನಂದಿನಿ ಲೇಔಟ್‌ ಪೊಲೀಸರು, ಆತನಿಂದ 1.50 ಲಕ್ಷ ರೂ. ಬೆಳೆಬಾಳುವ ಚಿನ್ನಾಭರಣ ಮತ್ತು ಮನೆಗಳತ್ತನಕ್ಕೆ ಬಳಸಿದ ಮೋಟಾರು ಬೈಕ್‌ ಅನ್ನು ವಶಕ್ಕೆ ಪಡಿಸಿದ್ದಾರೆ. ಆರೋಪಿ ನಂದಿನಿ ಲೇಔಟ್‌ನ ನಿವಾಸಿ ಜಯಮ್ಮ ಎಂಬುವವರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿರುವುದು ಈ ವೇಳೆ ಬೆಳಕಿಗೆ ಬಂದಿದೆ.

ಜಯಮ್ಮ ಅವರು ಜ.15 ರ ಮಧ್ಯಾಹ್ನದ ವೇಳೆ ತಮ್ಮ ಸಂಬಂಧಿಕರ ಮನೆಗೆ ತೆರಳಿರುವುದನ್ನು ಅರಿತಿದ್ದ ಆರೋಪಿ ಮನೆ ಬೀಗ ಮುರಿದು ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಲ್ಲೇಶ್ವರ ಉಪ ವಿಭಾಗದ ಎಸಿಪಿ ವಿ.ಧನಂಜಯ ನೇತೃತ್ವದಲ್ಲಿ ನಂದಿನಿ ಲೇಔಟ್‌ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.