ವಿದೇಶ ಪ್ರವಾಸ ನೆಪದಲ್ಲಿ ವಂಚನೆ: ಎಫ್ಐಆರ್‌

Team Udayavani, May 18, 2018, 12:02 PM IST

ಬೆಂಗಳೂರು: ವಿದೇಶ ಪ್ರವಾಸ ನೆಪದಲ್ಲಿ ಟ್ರಾವೆಲ್ಸ್‌ ಏಜನ್ಸಿಯೊಂದು ಜನರಿಂದ ಲಕ್ಷಾಂತರ ರೂ. ಹಣ ಕಟ್ಟಿಸಿಕೊಂಡು ವಂಚಿಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಕಾಮರಾಜ್‌ ಎಂಬುವವರು ಎಚ್‌ಎಸ್‌ಆರ್‌ ಲೇಔಟ್‌ನ ಟೂರ್‌ ಏಜೆನ್ಸಿ ಮಾಲೀಕ ಗಿರೀಶ್‌ ವಿರುದ್ಧ ನೀಡಿದ ದೂರಿನ ಅನ್ವಯ ಎಚ್‌ಎಸ್‌ಆರ್‌ ಲೇ ಔಟ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಈ ಏಜನ್ಸಿ ವಿದೇಶ ಪ್ರವಾಸದ ನೆಪದಲ್ಲಿ  20ಕ್ಕೂ ಅಧಿಕ ಮಂದಿಯಿಂದ 25  ಸಾವಿರ ರೂ. ಮತ್ತು ಅದಕ್ಕೂ ಹೆಚ್ಚಿನ ಮೊತ್ತ ಪಡೆದುಕೊಂಡು ವಂಚಿಸಿದೆ ಎಂಬ ಆರೋಪವಿದೆ. ಈ ಕುರಿತು ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಕಾಮರಾಜ್‌, ಕೆಲ ದಿನಗಳ ಹಿಂದೆ  ವಿದೇಶ ಪ್ರವಾಸ ಕೈಗೊಳ್ಳಲು ಟೂರ್‌ ಪ್ಯಾಕೇಜ್‌ ನೀಡುವ ಏಜೆನ್ಸಿಗಳ ಮಾಹಿತಿಗೆ ಅನ್‌ಲೈನ್‌ಲ್ಲಿ ಸರ್ಚ್‌ ಮಾಡುತ್ತಿದ್ದಾಗ ಟೂರ್‌  ಏಜೆನ್ಸಿಯೊಂದರ ಲಿಂಕ್‌ ಸಿಕ್ಕಿತ್ತು.

ಅದರಲ್ಲಿ ಅವರು ನೋಂದಣಿ ಮಾಡಿದ್ದು, ಬಳಿಕ ಏಜೆನ್ಸಿಯವರು ದೂರವಾಣಿ ಕರೆ ಮೂಲಕ ಕಾಮರಾಜ್‌ರನ್ನು ಸಂಪರ್ಕಿಸಿ ಮೇ 23 ರಿಂದ ಮೇ 29ರವರೆಗೆ ಸಿಂಗಾಪುರ್‌ ಮತ್ತು ಮಲೇಶಿಯಾ ಪ್ರವಾಸಕ್ಕೆ 53 ಸಾವಿರ ರೂ.ನ ಪ್ಯಾಕೇಜ್‌ ಇದೆ ಎಂದು ನಂಬಿಸಿದ್ದಾರೆ.

ಅಲ್ಲದೆ, ಈ ಕುರಿತು ಮಾತುಕತೆ ನಡೆಸಿದ ಬಳಿಕ ವೀಸಾ ಪಡೆದುಕೊಳ್ಳಲು 25 ಸಾವಿರ ರೂ. ಮೊದಲೇ ಪಾವತಿಸಬೇಕು ಎಂದು ಹೇಳಿ ಹಣ ಪಡೆದುಕೊಂಡಿದ್ದಾರೆ. ಇದಾದ ಕೆಲ ದಿನಗಳಲ್ಲಿ ವೀಸಾ ಸಂಬಂಧ ಗಿರೀಶ್‌ಗೆ ಕರೆ ಮಾಡಿದಾಗ ಮೊಬೈಲ್‌ ಸ್ವಿಚ್‌ ಆಫ್ ಬಂದಿದೆ. ಹೀಗಾಗಿ ವಂಚನೆಯಾಗಿರುವ ಸಂಬಂಧ ಅನುಮಾನಗೊಂಡು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಅತ್ತ ಸರ್ಕಾರ ಮಾರ್ಚ್‌ 5ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ಗೆ ಸಜ್ಜಾಗುತ್ತಿದ್ದರೆ, ಇತ್ತ ಸ್ಥಳೀಯ ಸಂಸ್ಥೆಗಳು ಬೆಂಗಳೂರಿಗೆ ಏನೇನು ಅವಶ್ಯಕತೆ ಇದೆ ಎಂಬುದರ...

  • ಬೆಂಗಳೂರು: ನಗರದ ಪಾರಂಪರಿಕ ಕಟ್ಟಡಗಳು ಹಾಗೂ ಪರಿಸರ ಸಂರಕ್ಷಣೆ ಉದ್ದೇಶದಿಂದ ತಜ್ಞರ ಸಮಿತಿ ರಚನೆ ಮಾಡಲು ಪಾಲಿಕೆ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಕೃಷ್ಣರಾಜೇಂದ್ರ...

  • ಬೆಂಗಳೂರು: ಮಹಿಳೆಯೊಬ್ಬರ ಮನೆಗೆ ನುಗ್ಗಿ ದಾಂಧಲೆಗೆ ಮುಂದಾಗಿ, ಅವರ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ್ದ ಆರೋಪಿ ಶ್ರೀನಿವಾಸ ಅಲಿಯಾಸ್‌ ಸೀಗಡಿ...

  • ಬೆಂಗಳೂರು: ಜನಪ್ರತಿನಿಧಿಗಳು ಮತ್ತು ಅಧಿ ಕಾರಿಗಳಿಗೆ ನೈತಿಕತೆ, ಶಿಸ್ತು ಅಗತ್ಯ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ಚುಂಚಶ್ರೀ ಬಳಗ ಭಾನುವಾರ ಜ್ಞಾನ ಜ್ಯೋತಿ...

  • ಯಲಹಂಕ: ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿಯ ಮಾದಾದರ, ಸಿದ್ದನಹೊಸಹಳ್ಳಿ ಮತ್ತು ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ "ಮಾದನಾಯಕನಹಳ್ಳಿ...

ಹೊಸ ಸೇರ್ಪಡೆ

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

  • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...

  • ಚಡಚಣ: ಮನೆಗೊಂದು ಶೌಚಾಲಯ ಎಷ್ಟು ಮುಖ್ಯವೋ ಅಷ್ಟೇ ಗ್ರಾಮಕ್ಕೊಂದು ಗ್ರಂಥಾಲಯ ಮುಖ್ಯ. ಗ್ರಾಮದಲ್ಲಿ ಗ್ರಂಥಾಲಯವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ...