Fraud: ಹೋಟೆಲ್‌ ಫ್ರಾಂಚೈಸಿ ನೀಡುವುದಾಗಿ ವಂಚನೆ


Team Udayavani, Feb 8, 2024, 12:52 PM IST

Fraud: ಹೋಟೆಲ್‌ ಫ್ರಾಂಚೈಸಿ ನೀಡುವುದಾಗಿ ವಂಚನೆ

ಬೆಂಗಳೂರು: ಹೋಟೆಲ್ ಫ್ರಾಂಚೈಸಿ ನೀಡುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಇಡ್ಲಿ ಗುರು ಹೋಟೆಲ್ ಮಾಲೀಕ ಸೇರಿ ನಾಲ್ವರ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಈ ಸಂಬಂಧ ಕಾಮಾಕ್ಷಿಪಾಳ್ಯ ನಿವಾಸಿ ಚೇತನ್‌ ಎಂಬವರು ನೀಡಿದ ದೂರಿನ ಮೇರೆಗೆ ಇಡ್ಲಿ ಗುರು ಹೋಟೆಲ್ ಮಾಲೀಕ ಕಾರ್ತಿಕ್‌ ಬಿ.ಶೆಟ್ಟಿ, ಅವರ ಪತ್ನಿ ಮಂಜುಳಾ, ಕಾರ್ತಿಕ್‌ ತಂದೆ ಬಾಬು ಶೆಟ್ಟಿ ಹಾಗೂ ಹೋಟೆಲ್ ಸಿಬ್ಬಂದಿ ದಿವಾಕರ್‌ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಎಫ್ ಐಆರ್‌ ದಾಖಲಿಸಿದ್ದಾರೆ. 2022ರ ಅಕ್ಟೋಬರ್‌ನಲ್ಲಿ ದೂರುದಾರ ಚೇತನ್‌ ಮಾಗಡಿ ಮುಖ್ಯರಸ್ತೆಯ ಕೊಟ್ಟಿಗೆಪಾಳ್ಯದಲ್ಲಿರುವ ಇಡ್ಲಿಗುರು ಕಚೇರಿಗೆ ಭೇಟಿ ನೀಡಿ, ಸಂಸ್ಥೆಯ ಬಗ್ಗೆ ಕಾರ್ತಿಕ್‌ನಿಂದ ಮಾಹಿತಿ ಪಡೆದುಕೊಂಡರು. ‌

ಈ ವೇಳೆ ಆರೋಪಿಗಳು ತಿಂಗಳಿಗೆ 50 ಸಾವಿರ ರೂ. ಸಂಪಾದಿಸಬಹುದು ಎಂದು ತಿಳಿಸಿ, ಆರಂಭದಲ್ಲಿ ನಮ್ಮ ಹೋಟೆಲ್‌ ಫ್ರಾಂಚೈಸಿ ನೀಡುವುದಾಗಿ ಚೇತನ್‌ಗೆ ನಂಬಿಸಿದ್ದರು. ಅದಕ್ಕಾಗಿ ಠೇವಣಿ ರೂಪದಲ್ಲಿ 3 ಲಕ್ಷ ರೂ. ಪಡೆದಿದ್ದಾರೆ ಎಂದು ಚೇತನ್‌ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಹೋಟೆಲ್‌ಗಾಗಿ ಬಾಡಿಗೆ ಅಂಗಡಿ ಖಾಲಿ ಮಾಡಿಸಿದ್ದ ಚೇತನ್‌: ಆರೋಪಿಗಳ ಸಲಹೆ ಮೇರೆಗೆ ಚೇತನ್‌, ತಮ್ಮ ಮನೆಯ ನೆಲಮಹಡಿಯಲ್ಲಿದ್ದ 9 ಸಾವಿರ ರೂ. ಬಾಡಿಗೆ ಬರುತ್ತಿದ್ದ ಅಂಗಡಿಯನ್ನು ಖಾಲಿ ಮಾಡಿಸಿದ್ದರು. ಈ ಜಾಗದಲ್ಲಿ ಇಡ್ಲಿಗುರು ನಡೆಸಲು ಕಾರ್ತಿಕ್‌ ಒಪ್ಪಿಕೊಂಡಿದ್ದರು. ಹೀಗಾಗಿ ಅಂಗಡಿಯನ್ನು ಹೋಟೆಲ್‌ ನಡೆಸಲು ಬೇಕಾದ ವಿನ್ಯಾಸಕ್ಕೆ ಬದಲಾಯಿಸಲಾಗಿತ್ತು. ಅದಕ್ಕೆ ಎರಡು ಲಕ್ಷ ರೂ. ವ್ಯಯಿಸಲಾಗಿತ್ತು. ಆದರೆ, ಆರೋಪಿಗಳು ಹೋಟೆಲ್‌ನ ಬದಲಾಗಿ ಫ‌ುಡ್‌ ಕಾರ್ಟ್‌(ಮೊಬೈಲ್‌ ಕ್ಯಾಂಟಿನ್‌) ತಂದು ನಿಲ್ಲಿಸಿ ಸ್ವಲ್ಪ ದಿನಗಳ ಬಳಿಕ ಅಂದು ಕೊಂಡಂತೆ ವ್ಯಾಪಾರ ಆಗುತ್ತಿಲ್ಲ. ಬೇರೆಡೆ ವ್ಯಾಪಾರ ಮಾಡೋಣ ಎಂದಿದ್ದ ಆರೋಪಿಗಳು, ನಂತರ ಶೇ.10 ಕಮಿಷನ್‌ ನೀಡುವುದಾಗಿ ನಂಬಿಸಿದ್ದರು. ಆದರೆ, ಯಾವುದೇ ಕಮಿಷನ್‌ ನೀಡದೆ, ನಿಗದಿತ ಅಂಗಡಿಯಲ್ಲಿ ಹೋಟೆಲ್‌ ನಡೆಸದೆ, ಹೋಟೆಲ್‌ಗಾಗಿ ಅಂಗಡಿಯನ್ನು ಮರು ವಿನ್ಯಾಸ ಮಾಡಿದ ಹಣ ಸೇರಿ 5 ಲಕ್ಷ ರೂ. ಆಗಿದೆ. ಈ ಬಗ್ಗೆ ಆರೋಪಿಗಳನ್ನು ವಿಚಾರಿಸಿದಾಗ ನಾಲ್ವರು ಆರೋಪಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಚೇತನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಮತ್ತೂಂದೆಡೆ ಆರೋಪಿಗಳು ಇದೇ ರೀತಿ ಹತ್ತಾರು ಮಂದಿಗೆ ವಂಚಿಸಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರಿಂದ ಶೋಧ ನಡೆದಿದೆ.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.