Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 


Team Udayavani, May 1, 2024, 2:47 PM IST

10

ಬೆಂಗಳೂರು: ಸಿಲಿಕಾನ್‌ ಸಿಟಿ ಫ್ಲೈ ಓವರ್‌ಗಳು ಈಗ ಕಸದ ತೊಟ್ಟಿಗಳಾಗಿ ಮಾರ್ಪ ಡುತ್ತಿವೆ. ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಬಂದು ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ತುಂಬಿದ ಕಸ ಬಿಸಾಡಿ ಮುಂದೆ ಹೋಗುವ ಪ್ರವೃತ್ತಿ ಕಂಡು ಬಂದಿದೆ. ಜತೆಗೆ ಬಿಯರ್‌, ಬ್ರಾಂದಿ, ವಿಸ್ಕಿ ಬಾಟಲಿಗಳನ್ನು ಬಿಸಾಕಿ ಹೋಗುತ್ತಿದ್ದು, ರಾತ್ರಿ ವೇಳೆ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.

ಒಂದು ಕಡೆ ಆಧುನಿಕ ಯಂತ್ರಗಳ ಬಳಕೆ ಮಾಡಿ ಬಿಬಿಎಂಪಿ ಸಿಬ್ಬಂದಿ ಮೇಲ್ಸೇತುವೆಗಳನ್ನು ಪ್ರತಿದಿನ ಸ್ವತ್ಛಗೊಳಿಸುತ್ತಾರೆ. ಆದರೆ, ಅವರು ಸ್ವತ್ಛಗೊಳಿಸಿ ಮುಂದೆ ಸಾಗುತ್ತಿದ್ದಂತೆ ಇತ್ತ ಎಲ್ಲೆಂದರಲ್ಲಿ ಕಸ ರಾಶಿ ರಾಶಿಯಾಗಿ ಬಿದ್ದಿರುತ್ತದೆ. ಈಗಾಗಲೇ ಬೆಂಗಳೂರಿನ ಹಲವು ವಾರ್ಡ್‌ಗಳಲ್ಲಿ ಎಲ್ಲೆಂದರಲ್ಲಿÉ ಬ್ಲಾಕ್‌ ಸ್ಪಾಟ್‌ಗಳು ಸೃಷ್ಟಿಯಾಗುತ್ತಿದ್ದು, ಅವುಗಳ ಮಧ್ಯೆಯೇ ಈಗ ಜೆಪಿ ನಗರದ ದಾಲಿ¾ಯಾ ಸರ್ಕಲ್‌ ಮೇಲ್ಸೇತುವೆ ಮತ್ತು ಈಜಿಪುರದ ನಿರ್ಮಾಣ ಹಂತದ ಮೇಲ್ಸೇತುವೆ ಸೇರಿದಂತೆ ರಾಜಧಾನಿ ವ್ಯಾಪ್ತಿಯ ಹಲವು ಫ್ಲೈ ಓವರ್‌ಗಳಲ್ಲಿ ಕಸ ಎಸೆದು ಹೋಗುವ ಪ್ರವೃತ್ತಿ ಮುಂದುವರಿದಿದೆ.

ಜೆಪಿ ನಗರದ 4ನೇ ಹಂತದಲ್ಲಿರುವ ದಾಲಿ¾ ಯಾ ಸರ್ಕಲ್‌ನ ಮೇಲ್ಸೇತುವೆಯಲ್ಲಿ ಪ್ಲಾಸ್ಟಿಕ್‌ನಿಂದ ತುಂಬಿದ ಕಸಗಳನ್ನು ಹಾಕಲಾಗುತ್ತಿದೆ. ರಾತ್ರಿ ದ್ವಿಚಕ್ರವಾಹನದಲ್ಲಿ ಕಸವನ್ನು ಬಿಸಾಡಿ ಹೋಗು ತ್ತಾರೆ. ಈ ಪ್ರದೇಶದ ರಸ್ತೆ ಬದಿ ಯಲ್ಲಿರುವ ಮರಗಳ ಮಧ್ಯೆ ಕೂಡ ರಾಶಿಗಟ್ಟಲೆ ಕಸ ಬೀಳುತ್ತಿದೆ. ಈ ಅವ್ಯವಸ್ಥೆ ಹಲವು ದಿನಗಳಿಂದ ನಡೆಯುತ್ತಲೇ ಇದೆ ಎಂದು ಜೆ.ಪಿ.ನಗರ 4ನೇ ಹಂತದ ನಿವಾಸಿ, ಐಟಿ ಉದ್ಯೋಗಿ ಕಿರಣ್‌ ಕುಮಾರ್‌ ದೂರುತ್ತಾರೆ.

ಕೋಟ್ಯಂತರ ರೂ. ವೆಚ್ಚ ಮಾಡಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗಿದೆ. ಆದರೆ ಮೇಲ್ಸೇತುವೆಗಳು ಕೂಡ ದಿನೇ ದಿನೆ ಕಸದ ತೊಟ್ಟಿಗಳಾಗುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ ಎಂದು ಕಸ ಹಾಕುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಈಜಿಪುರದ ಮೇಲ್ಸೇತುವೆ ನಿರ್ಮಾಣದ ಸ್ಥಳವು ಕೂಡ ಹಲವು ವರ್ಷಗಳಿಂದ ಡಂಪಿಂಗ್‌ ಯಾರ್ಡ್‌ ಆಗಿ ನಿರ್ಮಾಣವಾಗಿದೆ.

ಸಿಸಿ ಕ್ಯಾಮೆರಾ ಅಳವಡಿಸಲು ಪಾಲಿಕೆ ಚಿಂತನೆ :

ಮಷಿನ್‌ ಸ್ವೀಪರ್‌ ಬಳಕೆ ಮಾಡಿ ಮೇಲ್ಸೇತುವೆಗಳನ್ನು ಸ್ವತ್ಛ ಮಾಡಲಾಗುತ್ತದೆ. 25ಕ್ಕೂ ಅಧಿಕ ಮಷಿನ್‌ಗ‌ಳನ್ನು ಸ್ವತ್ಛತಾ ಕಾರ್ಯಕ್ಕೆ ಬಳಸಲಾಗುತ್ತಿದೆ. ಆದರೂ ರಾತ್ರಿ ವೇಳೆ ಕೆಲವು ಮೇಲ್ಸೇತುವೆಗಳ ಮೇಲೆ ಮೋಟಾರು ಬೈಕ್‌ನಲ್ಲಿ ಬಂದು ಕಸಹಾಕಿ ಹೋಗುತ್ತಿರುವುದು ಬಿಬಿಎಂಪಿ ಗಮನಕ್ಕೆ ಬಂದಿದೆ ಎಂದು ಹಿರಿಯ ಅಧಿಕಾರಿ ಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಪಾಲಿಕೆ ಕೂಡ ಹೆಚ್ಚಿನ ಗಮನ ನೀಡಿದ್ದು, ಫ್ಲೈ ಓವರ್‌ಗಳ ಮೇಲೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವ ಚಿಂತನೆಯಲ್ಲಿದೆ ಎಂದು ತಿಳಿಸಿದ್ದಾರೆ.

ಮೇಲ್ಸೇತುವೆ ಸೇರಿದಂತೆ ಮತ್ತಿತರ ಕಡೆ ಕಸ ಬಿಸಾಡುವ ಪ್ರವೃತ್ತಿ ಕಂಡು ಬಂದಿದೆ. ಕೆಲವು ದೇಶಗಳಲ್ಲಿ ಪೊಲೀಸರು ಕಸಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ. ಆದರೆ, ನಮ್ಮಲ್ಲಿ ಆ ವ್ಯವಸ್ಥೆಯಿಲ್ಲ. ಬಿಬಿಎಂಪಿ ಆ ವ್ಯವಸ್ಥೆಯನ್ನು ಅಳವಡಿಕೆ ಮಾಡಿಕೊಳ್ಳಲು ಮುಂದಾಗಬೇಕು.-ಯಲ್ಲಪ್ಪ ರೆಡ್ಡಿ, ಹಿರಿಯ ಪರಿಸರವಾದಿ   

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.