ಇನ್ಮುಂದೆ ಹತ್ತು ನಿಮಿಷಗಳಲ್ಲಿ ಸಿಗಲಿದೆ ಪ್ರಮಾಣ ಪತ್ರ!

Team Udayavani, Jul 22, 2017, 8:15 AM IST

Karnatataka-Government-Logo-650.jpg

ಶಿವಮೊಗ್ಗ: ಇನ್ಮುಂದೆ ಪಹಣಿ ಪತ್ರ, ಜಾತಿ ಪ್ರಮಾಣ ಪತ್ರ ಪಡೆಯೋಕೆ ತಿಂಗಳುಗಳ ಕಾಲ ಕಾಯಬೇಕಿಲ್ಲ. ಪ್ರಮಾಣ ಪತ್ರ ಬೇಕು ಎಂದು ಅರ್ಜಿ ಸಲ್ಲಿಸಿದ ಹತ್ತು ನಿಮಿಷದಲ್ಲಿ ಅವಶ್ಯವಿರುವ ದಾಖಲೆ ನಿಮ್ಮ ಕೈಯಲ್ಲಿರಲಿದೆ. ಹೌದು. ಇಂಥದ್ದೊಂದು ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದ್ದು ಮೊದಲಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ. ದಶಕಗಳ ಹಿಂದೆ ಪಹಣಿ, ಜಾತಿ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ಸಹಿತ ವಿವಿಧ ಸರಕಾರಿ ಸೇವೆಗಳು ಲಭ್ಯವಾಗಬೇಕಾಗಿದ್ದರೆ ತಿಂಗಳುಗಟ್ಟಲೆ ಕಾಯಬೇಕಿತ್ತು. ‘ಸಕಾಲ’ ಯೋಜನೆಯಿಂದ ಈ ಸೇವೆಗಳು ಹತ್ತಾರು ದಿನಗಳಲ್ಲಿ ಲಭ್ಯವಾಗುತ್ತಿದ್ದವು. ಈಗ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅಗತ್ಯ ದಾಖಲೆ ಸಿಗುವಂತೆ ಮಾಡುವ ‘ಓಟಿಸಿ’ (ಓವರ್‌ ದಿ ಕೌಂಟರ್‌) ಯೋಜನೆ ಶೀಘ್ರದಲ್ಲಿ ಜಾರಿಗೆ ಬರಲಿದೆ. ಇದಕ್ಕೆ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಇನ್ನೊಂದೆರಡು ತಿಂಗಳಲ್ಲಿ ಇದರ ಲಾಭ ಸಾರ್ವಜನಿಕರಿಗೆ ಸಿಗಲಿದೆ. ಮೊದಲಿಗೆ ಇದು ಹೊಸನಗರ ತಾಲೂಕಿನಲ್ಲಿ ಆರಂಭವಾಗಲಿದೆ. ಶಿವಮೊಗ್ಗದ ಹಿಂದಿನ ಡಿಸಿ ವಿ. ಪೊನ್ನುರಾಜ್‌  ಕನಸಿನ ಕೂಸಾಗಿದ್ದ ಓಟಿಸಿಯ ಜಾರಿಗೆ ಇದ್ದ ಅಡೆತಡೆಗಳೆಲ್ಲ ನಿವಾರಣೆಯಾಗಿದ್ದು, ದತ್ತಾಂಶ ಪರಿಶೀಲನೆ ಕಾರ್ಯ ಕೂಡ ಬಹುತೇಕ ಪೂರ್ಣಗೊಂಡಿದೆ. 

ಏನಿದು ಓಟಿಸಿ: ಕಂದಾಯ ಇಲಾಖೆ ಸಕಾಲ ಯೋಜನೆಯಡಿ ಪ್ರಸ್ತುತ ಆದಾಯ ಪ್ರಮಾಣ ಪತ್ರ, ವಾಸ ಸ್ಥಳ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ ಸಹಿತ 35ರಿಂದ 40 ಸೇವೆ ಒದಗಿಸುತ್ತಿದೆ. ಆಯಾ ಸೇವೆಗೆ 15ರಿಂದ 40 ದಿನದ ಕಾಲಾವಕಾಶ ಇದೆ. ಕಂದಾಯ ಇಲಾಖೆಯ ಮೂಲಕ ನೀಡಲಾಗುತ್ತಿರುವ ಈ ಸೇವೆಯಲ್ಲಿ ಗ್ರಾಮ ಸಹಾಯಕರ ಪಾತ್ರ ಮಹಣ್ತೀದ್ದು. ಬೆಳೆ ನಷ್ಟ, ಬೆಳೆ ಪರಿಹಾರ ವಿತರಣೆ, ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ನಾನಾ ರೀತಿಯ ವೇತನ, ಪಡಿತರ ಅರ್ಜಿ ವಿಲೇವಾರಿ ಹೀಗೆ ಹತ್ತಾರು ಕೆಲಸಗಳನ್ನು ನಿರ್ವಹಿಸುತ್ತಿರುವ ಗ್ರಾಮ ಸಹಾಯಕರಿಗೆ ಸಕಾಲ ಯೋಜನೆಯಡಿ ಕ್ಲಪ್ತ ಸಮಯದಲ್ಲಿ ಸೇವೆ ಒದಗಿಸುವುದು ಸವಾಲಾಗಿದೆ. ಗ್ರಾಮ ಲೆಕ್ಕಿಗರ ಒಟ್ಟಾರೆ ಕೆಲಸದಲ್ಲಿ ಶೇ. 70ರಷ್ಟು ಕೆಲಸ ಸಕಾಲಕ್ಕೆ ಸಂಬಂಧಿಸಿದ್ದಾಗಿರುತ್ತದೆ.

ಇದನ್ನು ತಪ್ಪಿಸಿ ಕ್ಷಣ ಮಾತ್ರದಲ್ಲಿ ದಾಖಲೆ ಒದಗಿಸುವ ಮತ್ತು ಪದೇ ಪದೇ ಈ ಕೆಲಸ ಮಾಡಲು ಸಿಬಂದಿಗೆ ಶ್ರಮ ತಪ್ಪಿಸುವುದೇ ಈ ಯೋಜನೆಯ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಹಿಂದಿನ ಡಿಸಿ ವಿ. ಪೊನ್ನುರಾಜ್‌ ಓಟಿಸಿ ಜಾರಿಯ ಚಿಂತನೆ ನಡೆಸಿ ರಾಜ್ಯದಲ್ಲಿ ಶಿವಮೊಗ್ಗವನ್ನು ಪೈಲಟ್‌ ಜಿಲ್ಲೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಆಹಾರ ಇಲಾಖೆಯಿಂದ ವಿತರಿಸಲಾಗಿರುವ ಪಡಿತರ ಚೀಟಿಯ ದತ್ತಾಂಶವನ್ನು ಆಧರಿಸಿ ಗ್ರಾಮ ಸಹಾಯಕರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರು. ಹೀಗೆ ಸಂಗ್ರಹಿಸಲಾದ ಮಾಹಿತಿಯನ್ನು ಕ್ರೋಡೀಕರಿಸುವ ಜವಾಬ್ದಾರಿಯನ್ನು ಖಾಸಗಿ ಏಜೆನ್ಸಿಗೆ ನೀಡುವ ನಿಟ್ಟಿನಲ್ಲಿ ಟೆಂಡರ್‌ ಕರೆಯಲಾಗಿದ್ದು, ಟೆಂಡರ್‌ ಅಂತಿಮಗೊಂಡು ಕಳೆದ ವರ್ಷ ದತ್ತಾಂಶ ಕ್ರೋಡೀಕರಣ ಕಾರ್ಯಕ್ಕೆ ಜಿಲ್ಲಾದ್ಯಂತ ಚಾಲನೆ ನೀಡಲಾಗಿತ್ತು. ಭದ್ರಾವತಿ ಶೇ. 69, ಸಾಗರ ಶೇ. 72, ಶಿಕಾರಿಪುರ ಶೇ. 79, ಶಿವಮೊಗ್ಗ ಶೇ. 82, ಸೊರಬ ಶೇ. 70, ತೀರ್ಥಹಳ್ಳಿ ಶೇ.  90 ಪಡಿತರ ಚೀಟಿಯ ಮಾಹಿತಿಯನ್ನು ಮೂಲ ದಾಖಲೆಯೊಂದಿಗೆ ತಾಳೆ ಹಾಕುವ ಕೆಲಸ ಪೂರ್ಣಗೊಂಡಿದೆ.
– ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.