ಲಾಲ್ಬಾಗ್ನಲ್ಲಿ ತಾರಾ ಮೆರುಗು
Team Udayavani, Aug 12, 2018, 12:11 PM IST
ಬೆಂಗಳೂರು: ಲಾಲ್ಬಾಗ್ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನದಲ್ಲಿ ಶನಿವಾರ ಚಿತ್ರ ರಂಗದ ಗಣ್ಯರಿಗಾಗಿಯೇ ವಿಶೇಷ ಆಹ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ನಟ ದೊಡ್ಡಣ್ಣ, ರಾಜ್ಲೈನ್ ವೆಂಕಟೇಶ್, ವಿ.ಮನೋಹರ್, ಟಿ.ಎಸ್.ನಾಗಾಭರಣ, ಚಂದನ್ ಶೆಟ್ಟಿ, ನಟಿ ರೂಪಿಣಿ ಸೇರಿ ಹಲವು ಹಿರಿತೆರೆ ಮತ್ತು ಕಿರುತೆರೆ ಕಲಾವಿದರು, ನಿರ್ಮಾಪಕರು, ನಿರ್ದೇಶಕರ ಆಗಮಿಸಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಕೂಡ ಪಾಲ್ಗೊಂಡಿದ್ದರು. ಶನಿವಾರ ಸುಮಾರು 30 ಸಾವಿರಕ್ಕೂ ಹೆಚ್ಚು ವಯಸ್ಕರು ಹಾಗೂ 5 ಸಾವಿರ ಮಕ್ಕಳು ಭೇಟಿ ನೀಡಿದ್ದು, ಸುಮಾರು 22.9 ಲಕ್ಷ ರೂ. ಹಣ ಸಂಗ್ರಹವಾಗಿದೆ. ಒಟ್ಟಾರೆ ಆಗಸ್ಟ್ 4ರಿಂದ 11ರ ವರೆಗೆ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಭೇಟಿ ನೀಡಿದ್ದು ಒಟ್ಟು 95 ಲಕ್ಷ ರೂ. ಸಂಗ್ರಹವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ