2020ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ

Team Udayavani, Feb 26, 2019, 6:28 AM IST

2020ralli.jpg

ಬೆಂಗಳೂರು: ಹೂಡಿಕೆದಾರರನ್ನು ಆಕರ್ಷಿಸಲು 2020ರ ಜನವರಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಸರ್ಕಾರ ನಿರ್ಧರಿಸಿದೆ. ವ್ಯಾಪಾರ ಸುಧಾರಣೆಗೆ ಸಂಬಂಧಿಸಿದಂತೆ ರೂಪಿಸಿದ ಕ್ರಿಯಾ ಯೋಜನೆಗಳಿಂದ ರಾಜ್ಯದಲ್ಲಿ ಕೈಗಾರಿಕೋದ್ಯಮ ಬೆಳವಣಿಗೆಗೆ ಹಿಂದೆಂದಿಗಿಂತ ಪೂರಕ ವಾತಾವರಣ ಸೃಷ್ಟಿಯಾಗಿದೆ.

ಬೃಹತ್‌ ತಂತ್ರಜ್ಞಾನ ಕ್ಲಸ್ಟರ್‌ ವಿಭಾಗದಲ್ಲಿ ವಿಶ್ವ ಸಂಸ್ಥೆ ಪ್ರಕಟಿಸಿದ ರ್‍ಯಾಂಕಿಂಗ್‌ನಲ್ಲಿ ಬೆಂಗಳೂರಿಗೆ ನಾಲ್ಕನೇ ಲಭಿಸಿದೆ. ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ವಿಶ್ವದ ಟಾಪ್‌-5 ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದು. ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಹೂಡಿಕೆದಾರರನ್ನು ಆಕರ್ಷಿಸಲು 2020ರ ಜನವರಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಹಮ್ಮಿಕೊಂಡಿರುವ ಮೂರು ದಿನಗಳ ಅಸಿಯಾನ “ವಾಣಿಜ್ಯ ಮತ್ತು ಕೈಗಾರಿಕೆಗಳ ವ್ಯಾಪಾರ ಮೇಳ-2019’ಕ್ಕೆ ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಉದ್ಯೋಗಾವಕಾಶ ಸೃಷ್ಟಿ, ಜಾಗತಿಕ ಮಟ್ಟದ ಹೂಡಿಕೆದಾರರು ಮತ್ತು ರಾಜ್ಯದ ನಡುವೆ ಸಂಪರ್ಕ ಬೆಸೆಯುವುದು ಸೇರಿದಂತೆ ಹೂಡಿಕೆದಾರರನ್ನು ಸೆಳೆಯಲು ಈ ಸಮಾವೇಶ ಪೂರಕ ಆಗಲಿದೆ.

ಉದ್ಯಮಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ ಎಂದ ಅವರು, ಈ ನಿಟ್ಟಿನಲ್ಲಿ ಜಾಗತಿಕ ಮಟ್ಟದ ಮೂಲಸೌಕರ್ಯ, ನೀತಿಗಳನ್ನು ರೂಪಿಸಲಾಗುತ್ತಿದೆ. ಆ ಮೂಲಕ ರಾಜ್ಯವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ನಿರ್ಮಿಸುವ ಗುರಿ ಇದೆ ಎಂದು ಹೇಳಿದರು. ಈ ಹಿಂದೆ 2016ರಲ್ಲಿ ಹೂಡಿಕೆದಾರರ ಸಮಾವೇಶ ನಡೆದಿತ್ತು. 

147ರಿಂದ 77ಕ್ಕೆ ಜಿಗಿತ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಾತನಾಡಿ, 2014ರಲ್ಲಿ ಜಾಗತಿಕ ಮಟ್ಟದಲ್ಲಿ “ಈಸ್‌ ಆಫ್ ಡುಯಿಂಗ್‌ ಬ್ಯುಸಿನೆಸ್‌’ (ವ್ಯಾಪಾರಕ್ಕೆ ಅನುಕೂಲಕರ ವ್ಯವಸ್ಥೆ)ನಲ್ಲಿ 147ನೇ ರ್‍ಯಾಂಕ್‌ ಇತ್ತು. ಈಚೆಗೆ ವಿಶ್ವ ಬ್ಯಾಂಕ್‌ ಹೊರತಂದ ವರದಿಯಲ್ಲಿ 77ನೇ ಸ್ಥಾನಕ್ಕೆ ಏರಿಕೆಯಾಗಿದೆ. ದೇಶದ ಒಟ್ಟಾರೆ ವೃದ್ಧಿ ದರ (ಜಿಡಿಪಿ) ಶೇ. 7.2ರಷ್ಟಿದ್ದು, ನೆರೆಯ ಚೀನಾ ಜಿಡಿಪಿ ಶೇ. 6.2ರಷ್ಟಿದೆ ಎಂದರು. 

ರಾಜ್ಯಪಾಲ ವಜುಭಾಯಿ ವಾಲಾ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಭಾರತದ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡುಬಂದಿದ್ದರೆ, ಅದರಲ್ಲಿ ರಾಜ್ಯದ ಕೊಡುಗೆಯೂ ಇದೆ. ನಾನು ಸುಮಾರು ಐದು ವರ್ಷದಿಂದ ಇಲ್ಲಿ ನೆಲೆಸಿದ್ದೇನೆ. ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ಇಲ್ಲಿದೆ. ನಿಮಗೆ (ಉದ್ಯಮಿಗಳಿಗೆ) ಅಗತ್ಯ ಇರುವ ಸೌಕರ್ಯಗಳನ್ನು ಕೇಳುವುದು ನಿಮ್ಮ ಹಕ್ಕು; ಅದನ್ನು ಪೂರೈಸುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.  

ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಸಚಿವರಾದ ಕೆ.ಜೆ. ಜಾರ್ಜ್‌, ಡಿ.ಕೆ. ಶಿವಕುಮಾರ್‌, ಸಾ.ರಾ. ಮಹೇಶ್‌, ಸಂಸದ ಪಿ.ಸಿ. ಮೋಹನ್‌, ಮೈಸೂರಿನ ಯುವರಾಜ ಯುದುವೀರ ಒಡೆಯರ್‌, ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ, ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 

10 ಬಿಲಿಯನ್‌ ಡಾಲರ್‌ ಬಂಡವಾಳ ನಿರೀಕ್ಷೆ: ಮೂರು ದಿನಗಳ ಅಸಿಯಾನ ವ್ಯಾಪಾರ ಮೇಳದಲ್ಲಿ 10 ಬಿಲಿಯನ್‌ ಅಮೆರಿಕನ್‌ ಡಾಲರ್‌ ಬಂಡವಾಳ ಹರಿದುಬರುವ ನಿರೀಕ್ಷೆ ಇದೆ ಎಂದು ಅಸಿಯಾನ ನೋಡಲ್‌ ಅಧಿಕಾರಿ ಎಸ್‌. ಸಂಪತ್‌ ರಾಮನ್‌ ತಿಳಿಸಿದರು. ಮೇಳದಲ್ಲಿ 10 ದೇಶಗಳಿಂದ ಸುಮಾರು 130 ಪ್ರತಿನಿಧಿಗಳು ಹಾಗೂ ದೇಶದ ನಾನಾ ಭಾಗಗಳಿಂದ 600ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಮೂರೂ ದಿನಗಳಲ್ಲಿ 50ಕ್ಕೂ ಅಧಿಕ ಬಿ2ಬಿ (ಉದ್ಯಮಿಗಳ ಸಭೆ) ಸಭೆಗಳು ನಡೆಯಲಿದ್ದು, ಮೂಲಸೌಕರ್ಯ, ರಕ್ಷಣಾ ವಲಯ, ವೈಮಾನಿಕ ಕ್ಷೇತ್ರ, ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌, ಮಷಿನ್‌ ಲರ್ನಿಂಗ್‌, ಐಒಟಿ (ಇಂಟರ್‌ನೆಟ್‌ ಆಫ್ ಥಿಂಗ್ಸ್‌), ರೋಬೋಟಿಕ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ 10 ಬಿಲಿಯನ್‌ ಅಮೆರಿಕನ್‌ ಡಾಲರ್‌ ಹೂಡಿಕೆ ಆಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.

ಸರ್ಕಾರ ಸ್ಥಿರ ಮತ್ತು ಸಶಕ್ತ: ಸಮ್ಮಿಶ್ರ ಸರ್ಕಾರ ಸ್ಥಿರ ಮತ್ತು ಸಶಕ್ತವಾಗಿದೆ ಹಾಗೂ ಇರುತ್ತದೆ ಎಂದು ಕೈಗಾರಿಕೋದ್ಯಮಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಕಳೆದ ಎಂಟು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರವು ಉದ್ಯಮಿಗಳಿಗೆ ಪೂರಕವಾದ ಹಲವಾರು ಕ್ರಮಗಳನ್ನು ಕೈಗೊಂಡಿದೆ. ನಮ್ಮ ಸರ್ಕಾರ ಸ್ಥಿರ ಮತ್ತು ಸಶಕ್ತವಾಗಿದೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.