ಉಂಗುರ ಖರೀದಿಗೆ ಬಂದು,ಕೆ.ಜಿ.ಗಟ್ಟಲೆ ಚಿನ್ನ ಲೂಟಿ

ಕೆಲಸಗಾರನಿಗೆ ಪಿಸ್ತೂಲ್‌ ತೋರಿಸಿ, ಬೆದರಿಕೆ ಹಾಕಿ ಚಿನ್ನಾಭರಣ ಮಳಿಗೆ ದರೋಡೆ

Team Udayavani, Sep 22, 2020, 12:13 PM IST

bng-tdy-3

ಸಾಂದರ್ಭಿಕ ಚಿತ್ರ

ಬೆಂಗಳೂರು: ಹಾಡಹಗಲೇ ಆಭರಣಗಳ ಮಳಿಗೆಗೆ ನುಗ್ಗಿರುವ ಇಬ್ಬರು ದುಷ್ಕರ್ಮಿಗಳು, ಮಳಿಗೆಯ ಕೆಲಸಗಾರನಿಗೆ ಪಿಸ್ತೂಲ್‌ ತೋರಿಸಿ ಹೆದರಿಸಿ ಒಂದೂವರೆ ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ, 3.96 ಲಕ್ಷ ರೂ. ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಜಾಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಲಹಳ್ಳಿಯ ಎಂಇಎಸ್‌ ರಸ್ತೆಯ ವಿನೋದ್‌ ಬ್ಯಾಂಕರ್ಸ್‌ ಅಂಡ್‌ ಜ್ಯುವೆಲರ್ಸ್‌ ಮಳಿಗೆಯಲ್ಲಿ ಭಾನುವಾರ ಈ ಸಿನಿಮೀಯ ಮಾದರಿ ದರೋಡೆ ನಡೆದಿದೆ. ದರೋಡೆಯಾದ ಚಿ®ದ ‌° ಮಳಿಗೆಯಲ್ಲಿ ರಾಹುಲ್‌ ಸಂಜಯ್‌ ಭಾಯ್‌ ಶಾ ಎಂಬಾತ ಕೆಲಸ ಮಾಡುತ್ತಾನೆ. ಭಾನುವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಮಳಿಗೆಗೆ ಬಂದ ಇಬ್ಬರು ಆರೋಪಿಗಳು ಉಂಗುರ ಬೇಕಿದೆ ಎಂದು ತಿಳಿಸಿದ್ದಾರೆ. ರಾಹುಲ್‌ ಉಂಗುರ ತರಲು ಸೇಫ್ ಲಾಕರ್‌ ಕೊಠಡಿಗೆ ತೆರಳುತ್ತಿದ್ದಂತೆ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳಿಬ್ಬರು ಚಾಕು ಹಾಗೂ ಪಿಸ್ತೂಲ್‌ ತೋರಿಸಿ ಕಿರುಚಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಅಷ್ಟೇ ಅಲ್ಲದೆ ತಮ್ಮ ಬಳಿಯಿದ್ದ ಟೇಪ್‌ನಿಂದ ರಾಹುಲ್‌ನ ಎರಡೂ ಕೈಗಳಿಗೂ ಕಟ್ಟಿ ಹಾಕುವ ಮಾದರಿಯಲ್ಲಿಸುತ್ತಿದ್ದಾರೆ. ಜತೆಗೆ, ಆತನ ಬಾಯಿಯನ್ನೂ ಟೇಪ್‌ನಿಂದ ಸುತ್ತಿದ್ದು, ಒಬ್ಟಾತ ಪಿಸ್ತೂಲ್‌ನಿಂದ ಹೆದರಿಸುತ್ತಿದ್ದರೆ ಮತ್ತೂಬ್ಬ ಸೇಫ್ ಲಾಕರ್‌ನಲ್ಲಿದ್ದ ಮೂರು ಕೆ.ಜಿ 450 ಗ್ರಾಂ ಚಿನ್ನದ ಆಭರಣಗಳು,715 ಗ್ರಾಂ ಬೆಳ್ಳಿ ಆಭರಣಗಳು,3.96 ಸಾವಿರ ರೂ. ನಗದು ಹಣವನ್ನು ಬ್ಯಾಗ್‌ಗೆ ತುಂಬಿಕೊಂಡಿದ್ದಾನೆ. ಪುನಃ ಇಬ್ಬರು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ರಾಹುಲ್‌ ಕಾಲುಗಳನ್ನು ಆರೋಪಿಗಳು ಕಟ್ಟಿ ಹಾಕಿರಲಿಲ್ಲ. ಹೀಗಾಗಿ ಆರೋಪಿಗಳು ಹೋದ ತಕ್ಷಣ ಹೊರಗೆ ಬಂದಾಗ ಸ್ಥಳೀಯರು ನೆರವಿಗೆ ಬಂದರು ಎಂದು ರಾಹುಲ್‌ ತಿಳಿಸಿದ್ದಾನೆಂದು ಪೊಲೀಸರು ಹೇಳಿದರು.

ಆರೋಪಿಗಳು ತಿಂಗಳ ಹಿಂದೆಯೇ ಸಂಚು ರೂಪಿಸಿ ದರೋಡೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೋವಿಡ್ ಹಿನ್ನೆಲೆಯಲ್ಲಿ ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್‌ ಸಹ ಧರಿಸಿ ಮಳಿಗೆಗೆ ಬಂದಿರುವುದರಿಂದ ಅವರ ಮುಖಗಳು ಅಸ್ಪಷ್ಟವಾಗಿವೆ. ಮಳಿಗೆಯ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಡ್ವಾನ್ಸ್‌ಕೊಟ್ಟು ಹೋಗಿದ್ದ ಆರೋಪಿಗಳು : ಚಿನ್ನಾಭರಣ ದರೋಡೆ ಮಾಡಿರುವ ಇಬ್ಬರು ಆರೋಪಿಗಳು ಆ. 20ರಂದು ಮಳಿಗೆಗೆ ಬಂದು ಚಿನ್ನದ ಸರಬೇಕೆಂದುಕೇಳಿ ಅದನ್ನು ಮಾಡಿಕೊಡಲು ಸಾವಿರ ರೂ. ಅಡ್ವಾನ್ಸ್‌ ನೀಡಿ ಹೋಗಿದ್ದರು. ಅದರಂತೆ, ಸೆ. 20ರಂದು ಅಂಗಡಿಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಬಂದು ಚಿನ್ನದ ಸರ ಕೇಳಿದರು. ಅದನ್ನು ತೋರಿಸುತ್ತಲೇ ಉಂಗುರ ಬೇಕು ಎಂದರು. ಅದನ್ನು ತರಲು ಒಳ ಹೋದಾಗ ಪಿಸ್ತೂಲ್‌ ತೋರಿಸಿ ಕೊಲ್ಲುವ ಬೆದರಿಕೆ ಹಾಕಿ ಲೂಟಿ ಮಾಡಿದ್ದಾರೆ’ ಎಂದು ರಾಹುಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.