ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಬಿಜೆಪಿಗೆ ಸೇರ್ಪಡೆ
Team Udayavani, Feb 4, 2018, 6:10 AM IST
ಬೆಂಗಳೂರು: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗೂಳಿಹಟ್ಟಿ ಶೇಖರ್ ಅವರಿಗೆ ಬಿಜೆಪಿ ಧ್ವಜನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ, ಜಯಪ್ರಕಾಶ್ ಹೆಗ್ಡೆ, ಚಿತ್ರದುರ್ಗದ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್, ಮಾಜಿ ಸಂಸದ ಜಿ.ಎಸ್.ಬಸವರಾಜ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮುಖಂಡ ಲೋಕೇಶ್ವರ್ ಉಪಸ್ಥಿತರಿದ್ದರು.
ಗೂಳಿಹಟ್ಟಿ ಶೇಖರ್ ಈ ಹಿಂದೆ ಹೊಸದುರ್ಗ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಸಚಿವರಾಗಿದ್ದರು. ನಂತರ ಯಡಿಯೂರಪ್ಪ ವಿರುದ್ಧ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದ ಪಕ್ಷೇತರರ ಶಾಸಕರು ತಿರುಗಿಬಿದ್ದಾಗ ಗೂಳಿಹಟ್ಟಿ ಶೇಖರ್ ಸಹ ಅವರ ಜತೆಗೂಡಿದ್ದರು. ಆ ಸಂದರ್ಭದಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ನಡೆದಾಗ ಬಟ್ಟೆ ಹರಿದುಕೊಂಡ ಪ್ರಸಂಗವೂ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ