ನಗರದ ಕಾಮಗಾರಿಗಳ ಹಣ ಪಾವತಿಗೆ ಬ್ರೇಕ್‌

ಮಾ. 28ರಿಂದ ಏ.2ರವರೆಗೆ ಸುಮಾರು 450 ಕೋಟಿ ಬಿಡುಗಡೆ

Team Udayavani, Apr 11, 2020, 11:48 AM IST

ನಗರದ ಕಾಮಗಾರಿಗಳ ಹಣ ಪಾವತಿಗೆ ಬ್ರೇಕ್‌

ಸಾಂದರ್ಭಿಕ ಚಿತ್ರ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ವಿತರಣೆ ಸ್ಥಗಿತಗೊಳಿಸಿದ ಬೆನ್ನಲ್ಲೇ ನಿಯಮ  ಬಾಹಿರ ಹಣ ಬಿಡುಗಡೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅಡಿ ಕೈಗೆತ್ತಿಕೊಂಡ ಕಾಮಗಾರಿಗಳಿಗೆ ಪಾವತಿಸಬೇಕಾದ ಹಣಕ್ಕೆ ಸರ್ಕಾರ ಬ್ರೇಕ್‌ ಹಾಕಿದೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್‌)ದ ಮೂಲಕ ನಿರ್ವಹಿಸುತ್ತಿರುವ ಬಿಬಿಎಂಪಿ ಕಾಮಗಾರಿಗಳಿಗೆ ಪಾವತಿಸಬೇಕಾದ ಹಣಕ್ಕೆ ತಡೆ ನೀಡಲಾಗಿದೆ. ನವ ನಗರೋತ್ಥಾನ ಯೋಜನೆ ಅಡಿ ಸುಮಾರು 1,800 ಕೋಟಿ ಮೊತ್ತದ ವಿವಿಧ ಪ್ರಕಾರದ ಕಾಮಗಾರಿಗಳನ್ನು ಬಿಬಿಎಂಪಿಯು ಕೆಆರ್‌ಐಡಿಎಲ್‌ಗೆ ನೀಡಿದೆ. ಆದರೆ, ಸದ್ಯದ ಮಟ್ಟಿಗೆ ಈ ಮೊತ್ತದಲ್ಲಿ ಕೈಗೆತ್ತಿಕೊಂಡ ಎಲ್ಲ ಕಾಮಗಾರಿಗಳಿಗೆ ಪಾವತಿಸಬೇಕಾದ ಹಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಸಂಬಂಧ ಈಚೆಗೆ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಕೋವಿಡ್ 19 ವೈರಸ್‌ ಹಾವಳಿಯಿಂದ ಇಡೀ ನಗರವೇ ಮಾರ್ಚ್‌ 23ರಿಂದ ಈಚೆಗೆ ಲಾಕ್‌ಡೌನ್‌ ಆಗಿದೆ. ಎಲ್ಲ ಕಾಮಗಾರಿಗಳೂ ಸ್ಥಗಿತಗೊಂಡಿವೆ. ಇದರ ನಡುವೆಯೂ ಮಾರ್ಚ್‌ ಕೊನೆಯ ವಾರದಿಂದ ಈವರೆಗೆ ಕೆಆರ್‌ಐಡಿಎಲ್‌ಗೆ ಪಾಲಿಕೆಯು ಅಂದಾಜು 450 ಕೋಟಿ ರೂ. ಪಾವತಿ ಮಾಡಿದೆ. ಈ ಪೈಕಿ ಏಪ್ರಿಲ್‌ 1ರಿಂದ ಈಚೆಗೆ 200 ಕೋಟಿಗೂ ಅಧಿಕ ಹಣವನ್ನು ಪಾವತಿಸಲಾಗಿದೆ. ಬಜೆಟ್‌ ಅನುಮೋದನೆಯಾಗದೆ ನಿಯಮಗಳನ್ನು ಉಲ್ಲಂ ಸಿ ಸುಮಾರು 200 ಕೋಟಿ ರೂ.ಗಳಷ್ಟು ಪಾವತಿಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹಣ ಪಾವತಿಗೆ ತಡೆ ನೀಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿವೆ.

ನವ ನಗರೋತ್ಥಾನದಡಿ 2019-20ನೇ ಸಾಲಿನಲ್ಲಿ ರಸ್ತೆಗಳ ಅಭಿವೃದ್ಧಿ, ಘನತ್ಯಾಜ್ಯ ನಿರ್ವಹಣೆ, 110 ಹಳ್ಳಿಗಳ ಅಭಿವೃದ್ಧಿ ಸೇರಿದಂತೆ ಕೆಆರ್‌ಐಡಿಎಲ್‌ನಿಂದ ಸುಮಾರು 300ಕ್ಕೂ ಅಧಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಿಯಮದ ಪ್ರಕಾರ ಏ. 1ರ ನಂತರದಿಂದ ಯಾವುದೇ ಪಾವತಿಯನ್ನು ಮಾಡುವಂತಿಲ್ಲ. ಆದಾಗ್ಯೂ ನಿಯಮ ಉಲ್ಲಂ ಸಿ 200 ಕೋಟಿಗೂ ಅಧಿಕ ಹಣ ಪಾವತಿ ಮಾಡಲಾಗಿದೆ.

ಕಾಮಗಾರಿಗಳೂ ಸ್ತಬ್ದ: ನಗರಾದ್ಯಂತ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಬಾಕಿ ಉಳಿದ, ಈ ವರ್ಷ ಕೈಗೊಂಡಿರುವವು ಸೇರಿದಂತೆ ಸುಮಾರು ಎಂಟು ಸಾವಿರ ಕೋಟಿಗೂ ಅಧಿಕ ಮೊತ್ತದ ಯೋಜನೆಗಳು ವಿವಿಧ ಹಂತದಲ್ಲಿದ್ದವು. ರಸ್ತೆ ವಿಸ್ತರಣೆ, ವೈಟ್‌ಟಾಪಿಂಗ್‌, ಮೇಲ್ಸೇತುವೆ, ಗ್ರೇಡ್‌ ಸಪರೇಟರ್‌ಗಳು, ಕೆರೆ ಅಭಿವೃದ್ಧಿ, ತ್ಯಾಜ್ಯನಿರ್ವಹಣೆ ಒಳಗೊಂಡಂತೆ ಲಾಕ್‌ಡೌನ್‌ ಬೆನ್ನಲ್ಲೇ ಸ್ತಬ್ದಗೊಂಡಿವೆ.ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಅವರಲ್ಲಿ ಕೆಲವರಿಗೆ ಕಾಮಗಾರಿಗಳು ನಡೆಯುತ್ತಿರುವ ಜಾಗದ ಬಳಿಯೇ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಕೆಲವರು ಸ್ವಂತ ಊರುಗಳಿಗೆ ತೆರಳಿದ್ದಾರೆ. ನೆಲವನ್ನು ಬಗೆಯುತ್ತಿರುವ ಜೆಸಿಬಿಗಳು, ಟಿಪ್ಪರ್‌ಗಳು ಆಯಾ ಜಾಗದಲ್ಲೇ ನಿಂತಿರುವುದನ್ನು ನಗರದಲ್ಲಿ ಕಾಣಬಹುದು.

ಮೆಟ್ರೋ ಅಭಿವೃದ್ಧಿ ಕಾಮಗಾರಿಯೂ ಸಗಿತ್ಥ : “ನಮ್ಮ ಮೆಟ್ರೋ’ ಎರಡನೇ ಹಂತದ ಸುಮಾರು 26 ಸಾವಿರ ಕೋಟಿ ಮೊತ್ತದ ಯೋಜನೆ ಕೂಡ ಪ್ರಗತಿಯಲ್ಲಿತ್ತು. ಗೊಟ್ಟಿಗೆರೆ-ನಾಗವಾರದ ನಡುವೆ ಸುರಂಗ ಮಾರ್ಗದ ನಾಲ್ಕು ಪ್ಯಾಕೇಜ್‌ಗಳ ಪೈಕಿ ಎರಡಕ್ಕೆ ಟೆಂಡರ್‌ ಅವಾರ್ಡ್‌ ಆಗಿದ್ದು, ಇನ್ನೇನು ಕಾಮಗಾರಿ ಕೈಗೆತ್ತಿಕೊಳ್ಳಬೇಕಿತ್ತು. ಅದೇ ರೀತಿ, ಆರ್‌.ವಿ. ರಸ್ತೆ-ಎಲೆಕ್ಟ್ರಾನಿಕ್‌ ಸಿಟಿ-ಬೊಮ್ಮಸಂದ್ರ ಮೆಟ್ರೋ ನಿರ್ಮಾಣ ಕಾರ್ಯ ನಡೆದಿತ್ತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.