ರೈತರ ಸಾಲ ಮನ್ನಾ ಜಾಣ ನಡೆ


Team Udayavani, May 18, 2018, 6:00 AM IST

17bnp-12.jpg

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್‌.ಯಡಿಯೂರಪ್ಪ ವಿಧಾನಸೌಧ ಪ್ರವೇಶಿಸಿದ  ಬೆನ್ನಲ್ಲೇ ಸಾಲಮನ್ನಾ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ರಾಷ್ಟ್ರೀಕೃತ ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಮನ್ನಾ ಹಾಗೂ ನೇಕಾರರ ಒಂದು ಲಕ್ಷ ರೂ. ಸಾಲ ಮನ್ನಾ ಸಂಬಂಧ ಎರಡು ದಿನಗಳಲ್ಲಿ ಆದೇಶ ಹೊರಡಿಸುವುದಾಗಿ ಪ್ರಕಟಿಸಿದ್ದಾರೆ.

ಜತೆಗೆ, ರಾಜ್ಯದಲ್ಲಿ ಜನಾದೇಶ ಗೌರವಿಸಿ ಬಿಜೆಪಿ ಅಧಿಕಾರ ನಡೆಸಲು ಬಿಡಬೇಕು ಎಂಬ ಭಾವನೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಹಲವಾರು ಶಾಸಕರಲ್ಲಿದೆ ಎಂದು “ಬಾಂಬ್‌’ ಹಾಕಿದ ಅವರು ಆತ್ಮಸಾಕ್ಷಿ ಮತಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ನಾಡಿನ ಅನ್ನದಾತರು ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕುಗಳಲ್ಲಿ ಮಾಡಿರುವ ಬೆಳೆ ಸಾಲ ಒಂದು ಲಕ್ಷ ರೂ. ಹಾಗೂ ನೇಕಾರರ ಒಂದು ಲಕ್ಷ ರೂ. ಸಾಲ ಮನ್ನಾ ಮಾಡುವ ಬಗ್ಗೆ ಮುಖ್ಯ ಕಾರ್ಯದರ್ಶಿ ಜತೆ ಚರ್ಚಿಸಿದ್ದೇನೆ. ಒಂದೆರಡು ದಿನಗಳಲ್ಲಿ ಅಂಕಿ-ಸಂಖ್ಯೆ ಮಾಹಿತಿ ನೀಡುವುದಾಗಿ ಮುಖ್ಯ ಕಾರ್ಯದರ್ಶಿಯವರು ತಿಳಿಸಿದ್ದಾರೆ. ನಂತರ ಅಧಿಕೃತ ಆದೇಶ ಹೊರಡಿಸಲಾಗುವುದು. ನಾನು ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯದ ಜನತೆ ಆರ್ಶೀವಾದ ಬಿಜೆಪಿ ಮೇಲಿದೆ. ಹದಿನೈದು ದಿನಗಳ ಕಾಲ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಅವಕಾಶ ನೀಡಿದ್ದಾರೆ. ಆದರೆ, ಅಷ್ಟರೊಳಗೆ ನಾನು ಬಹುಮತ ಸಾಬೀತುಪಡಿಸಲಿದ್ದೇನೆ ಎಂದು ತಿಳಿಸಿದರು.

ಬಹುಮತ ಸಾಬೀತಿನ ನಂತರವೇ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡುವುದಾಗಿ ತಿಳಿಸಿದ ನೂತನ ಸಿಎಂ ಯಡಿಯೂರಪ್ಪ, ಬೃಹತ್‌ ಸಮಾರಂಭ ಮಾಡಿ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೇರಿ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳು ಆ ಸಮಾರಂಭಕ್ಕೆ ಹಾಜರಾಗಲಿದ್ದಾರೆ ಎಂದು ಹೇಳಿದರು.

ಮೈತ್ರಿಗೆ ಆಕ್ರೋಶ:
ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿಕೂಟದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಅನೈತಿಕ ಒಪ್ಪಂದದ ಮೂಲಕ ಜನಾದೇಶಕ್ಕೆ ವಿರುದ್ಧವಾಗಿ ಸರ್ಕಾರ ರಚಿಸಲು ಎರಡೂ ಪಕ್ಷಗಳು ಪ್ರಯತ್ನ ನಡೆಸುತ್ತಿವೆ ಎಂದು ದೂರಿದರು. ಅಲ್ಲದೆ, ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಾನು, ರಾಜ್ಯದ ಆರು ಕೋಟಿ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿ ಬೆಂಬಲಿಸಿದ ರೈತರು, ದಲಿತ ಹಾಗೂ ಹಿಂದುಳಿದ ಸಮುದಾಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ನಾನೇನೂ ಉತ್ತರಿಸೋದಿಲ್ಲ:
ಬಹುಮತ ಸಾಬೀತು ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ್ಯಾಯಾಲಯಕ್ಕೆ ಹೋಗಿವೆ. ಆ ಬಗ್ಗೆ ನಾನೇನೂ ಮಾತನಾಡಲು ಹೋಗಿಲ್ಲ. ನನಗೆ ನ್ಯಾಯಾಂಗದ ಬಗ್ಗೆ ಗೌರವವವಿದೆ ಎಂದು ಹೇಳಿದರು. ಸಂಪುಟ ಪುನಾರಚನೆ, ಬಹುಮತ ಸಾಬೀತುಪಡಿಸಲು ಸಂಖ್ಯಾಬಲ ಹೊಂದಿಸಿಕೊಳ್ಳುವಿಕೆ, ಕಾಂಗ್ರೆಸ್‌-ಜೆಡಿಎಸ್‌ ಆರೋಪ, ಬಹುಮತ ಹೊಂದಿರುವ ಮೈತ್ರಿಕೂಟಕ್ಕೆ ಆಹ್ವಾನ ನೀಡದಿರುವುದು ಮತ್ತಿತರ ಪ್ರಶ್ನೆಗಳಿಗೆ ಯಾವುದೇ ಉತ್ತರ ನೀಡದ ಯಡಿಯೂರಪ್ಪ ಅವರು, ಮುಂದೆ ಎಲ್ಲವೂ ನಿಮಗೇ ಗೊತ್ತಾಗಲಿದೆ ಎಂದಷ್ಟೇ ಹೇಳಿ ನಿರ್ಗಮಿಸಿದರು.

ಬಸವರಾಜ ಬೊಮ್ಮಾಯಿ, ಸಿ.ಎಂ.ಉದಾಸಿ, ಹರತಾಳು ಹಾಲಪ್ಪ, ಡಿ.ಎಸ್‌.ವೀರಯ್ಯ, ಎಸ್‌.ಆರ್‌.ವಿಶ್ವನಾಥ್‌ ಉಪಸ್ಥಿತರಿದ್ದರು.ಆದರೆ, ಪ್ರಮಾಣ ವಚನ ಸಮಾರಂಭದಲ್ಲಿದ್ದ ಕೆ.ಎಸ್‌. ಈಶ್ವರಪ್ಪ, ಶ್ರೀರಾಮುಲು, ಆರ್‌.ಅಶೋಕ್‌, ಗೋವಿದ ಕಾರಜೋಳ, ಸಿ.ಟಿ.ರವಿ ಸೇರಿದಂತೆ ಪಕ್ಷದ ನಾಯಕರು ವಿಧಾನಸೌಧ ಸಮ್ಮೇಳನ ಸಭಾಂಗಣದ ಪತ್ರಿಕಾಗೋಷ್ಠಿಗೆ ಹಾಜರಾಗಿರಲಿಲ್ಲ.

ಮೆಟ್ಟಿಲು ಮುಟ್ಟಿ ನಮಸ್ಕರಿಸಿದ ಬಿಎಸ್‌ವೈ
ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಯಡಿಯೂರಪ್ಪ, ವಿಧಾನಸೌಧ ದ್ವಾರದ ಮೆಟ್ಟಿಲುಗಳಿಗೆ ನಮಸ್ಕರಿಸಿ ಒಳ ಪ್ರವೇಶಿಸಿದರು. ನಂತರ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಯವರ ಕಚೇರಿಯಲ್ಲೂ ಪೂಜೆ ಸಲ್ಲಿಸಿ ಪೂರ್ವಾಭಿಮುಖವಾಗಿ ಆಸೀನರಾದರು. ಸಿದ್ದರಾಮಯ್ಯ ಅವರು ದಕ್ಷಿಣಾಭಿಮುಖವಾಗಿ ಆಸೀನರಾಗುತ್ತಿದ್ದರು. ಸಿದ್ದರಾಮಯ್ಯ ಅವರು ತೆಗೆಸಿದ್ದ ಪಶ್ಚಿಮದ್ವಾರವನ್ನು ಬಿಎಸ್‌ವೈ ಮುಚ್ಚಿಸಿದರು.

ಜ್ಯೋತಿಷಿ ಸಲಹೆ
ಮುಖ್ಯಮಂತ್ರಿಯಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವಂತೆ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಜ್ಯೋತಿಷಿಯೊಬ್ಬರು ಸಲಹೆ ನೀಡಿದ್ದರು. ಅದರಂತೆ ಬೆಳಗ್ಗೆ ಸಂಜಯನಗರದ ರಾಧಾಕೃಷ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿ ರಾಜಭವನಕ್ಕೆ ಆಗಮಿಸಿ ಶುಭ ಮಿಥುನ ಲಗ್ನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪಂಚಮದಲ್ಲಿ ಗುರು ದೃಷ್ಟಿ ಇರುವುದರಿಂದ ಒಳ್ಳೆಯದಾಗಲಿದೆ. ಪ್ರಮಾಣ ವಚನ ನಂತರ ಗುರುಗಳ ದರ್ಶನ ಮಾಡಿ ಎಂದು ಎಂದು ಜ್ಯೋತಿಷಿ ಸಲಹೆ ನೀಡಿದ್ದರು. ಹೀಗಾಗಿಯೇ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದರು ಎಂದು ಹೇಳಲಾಗಿದೆ.

ಲಕ್ಕಿ ಕಾರ್‌ ಬಳಕೆ
ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಹೊಸ ಕಾರು ಬದಲು 2008ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಬಳಕೆ ಮಾಡುತ್ತಿದ್ದ ಹೋಂಡಾ ಸಿಆರ್‌ವಿ ಕಾರನ್ನೇ ಹತ್ತಿದರು. ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಗೆ ತಾವು ಬಳಸುತ್ತಿದ್ದ ಕಾರು ಎಲ್ಲಿದೆ ಹುಡುಕಿ ಎಂದು ಹೇಳಿ ಅದೇ ಕಾರು ತರಿಸಿಕೊಂಡರು. ಅದು ಯಡಿಯೂರಪ್ಪ ಅವರಿಗೆ ಲಕ್ಕಿ ಕಾರ್‌ ಆಗಿತ್ತು ಎಂದು ತಿಳಿದುಬಂದಿದೆ.

ಆತ್ಮಸಾಕ್ಷಿ ಮತ ಮನವಿ ಯಾಕೆ?
ಹಿಂದೊಮ್ಮೆ ಇಂದಿರಾಗಾಂಧಿಯವರು ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಆತ್ಮಸಾಕ್ಷಿ ಮತಕ್ಕೆ ಕರೆ ನೀಡಿದ್ದರು. ಆಗ, ಅವರ ಕರೆಗೆ ಯಶಸ್ಸು ಸಿಕ್ಕಿತ್ತು. ಅದೇ ರೀತಿ ಇಂದು ನಾನು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕ ಸ್ನೇಹಿತರಿಗೆ ಆತ್ಮಸಾಕ್ಷಿ ಮತ ನೀಡುವಂತೆ ಕೋರುತ್ತೇನೆ ಎಂದರು. ರಾಜಕೀಯವಾಗಿ ಇದು ತಂತ್ರಗಾರಿಕೆ ಎಂದೇ ಹೇಳಲಾಗುತ್ತಿದೆ. ಆಪರೇಷನ್‌ ಕಮಲ ಮೂಲಕ ಬಿಜೆಪಿ ಶಾಸಕರ ಖರೀದಿಗೆ ಮುಂದಾಗಿದೆ. ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಕಾಂಗ್ರೆಸ್‌-ಬಿಜೆಪಿ ಆರೋಪ ಮಾಡಿರುವುದರಿಂದ “ಆತ್ಮಸಾಕ್ಷಿ’ ಮತ ಹೆಸರಿನಲ್ಲಿ ಶಾಸಕರನ್ನು ಸೆಳೆದು ತಿರುಗೇಟು ನೀಡಲು ಬಿಜೆಪಿ ಕಾರ್ಯಕರ್ತಂತ್ರ ರೂಪಿಸಿದೆ. ಹೀಗಾಗಿಯೇ ಯಡಿಯೂರಪ್ಪ ಆತ್ಮಸಾಕ್ಷಿ ಮತ ನೀಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಒಂದೇ ನಿರ್ಣಯ
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಯಡಿಯೂರಪ್ಪ ಆವರು ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಸಿ 14ನೇ ವಿಧಾನಸಭೆ ವಿಸರ್ಜಿಸುವ ಒಂದು ಸಾಲಿನ ನಿರ್ಣಯ ಮಾತ್ರ ತೆಗೆದುಕೊಂಡರು. ನಂತರ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಜತೆ ಸಮಾಲೋಚನೆ ನಡೆಸಿ ಕಾನೂನು ಸುವ್ಯವಸ್ಥೆ, ಆರ್ಥಿಕ ಸ್ಥಿತಿಗತಿ, ಇಲಾಖಾವಾರು ಮುಖ್ಯಸ್ಥರ ಬಗ್ಗೆ ಮಾಹಿತಿ ಪಡೆದುಕೊಂಡರು.

ರೈತರು, ದೇವರ ಹೆಸರಲ್ಲಿ ಪ್ರಮಾಣ ವಚನ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜೂಬಾಯ್‌ ವಾಲಾ ಯಡಿಯೂರಪ್ಪ ಅವರಿಗೆ ಪ್ರಮಾಣ ಬೋಧಿಸಿದರು. ಹಸಿರು ಶಾಲು ಹಾಕಿಕೊಂಡು ದೇವರು ಹಾಗೂ ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ಯಡಿಯೂರಪ್ಪ ವಿಜಯದ ಸಂಕೇತ ಬೀರಿದರು.

ಬಿಎಸ್‌ವೈ ದಿನಚರಿ ಹೀಗಿತ್ತು
* ಬೆಳಗ್ಗೆ ದೇವಾಲಯದಲ್ಲಿ ಪೂಜೆ
* ರಾಜಭವನದಲ್ಲಿ  ಪ್ರಮಾಣ ವಚನ
* ವಿಧಾನಸೌಧಕ್ಕೆ ಆಗಮನ
* ಮುಖ್ಯಮಂತ್ರಿ ಕಚೇರಿಯಲ್ಲಿ ಪೂಜೆ
* ಮುಖ್ಯ ಕಾರ್ಯದರ್ಶಿ ಜತೆ ಸಭೆ
* ಕಾನೂನು ಸುವ್ಯವಸ್ಥೆ, ಅಧಿಕಾರಿಗಳ ಬಗ್ಗೆ ಮಾಹಿತಿ
* ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ
* ಬಿಜೆಪಿ ಕಚೇರಿಯಲ್ಲಿ ಮುಖಂಡರ ಜತೆ ಸಮಾಲೋಚನೆ
* ಸಿದ್ಧಗಂಗಾ ಮಠಕ್ಕೆ ಭೇಟಿ ಶ್ರೀಗಳ ಆಶೀರ್ವಾದ
* ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ, ಮುಖಂಡರ ಜತೆ ಚರ್ಚೆ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.