ಸಿರಿಧಾನ್ಯ, ಸಾವಯವ ಆಹಾರ ಮೇಳ ನಾಳೆಯಿಂದ

Team Udayavani, May 2, 2019, 2:59 AM IST

Udayavani Kannada Newspaper

ಬೆಂಗಳೂರು: ಗ್ರಾಮೀಣ ಕುಟುಂಬದ ವತಿಯಿಂದ ಮೇ 3 ರಿಂದ 5ರವರೆಗೆ ಕರ್ನಾಟಕ ಸಿರಿಧಾನ್ಯಗಳ ವೈಭವ ಮತ್ತು ಸಾವಯವ ಆಹಾರ ಮೇಳ ಹಮ್ಮಿಕೊಳ್ಳಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಗ್ರಾಮೀಣ ಕುಟುಂಬ ಸಂಸ್ಥೆಯ ಸಂಸ್ಥಾಪಕ ಎಂ.ಎಚ್‌.ಶ್ರೀಧರ್‌ ಮೂರ್ತಿ ಮಾತನಾಡಿ, ಲಾಲ್‌ಬಾಗ್‌ನಲ್ಲಿರುವ ಡಾ.ಮರಿಗೌಡ ಸ್ಮಾರಕ ಭವನದಲ್ಲಿ ಶುಕ್ರವಾರ ಬೆಳಗ್ಗೆ 11ಕ್ಕೆ ನಿವೃತ್ತ ನ್ಯಾಯಾಮೂರ್ತಿ ವಿ.ಗೋಪಾಲಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಚಲನಚಿತ್ರ ನಿರ್ದೇಶಕ ಬಿ.ಸುರೇಶ್‌, ತೋಟಗಾರಿಕೆ ಇಲಾಖೆ ನಿರ್ದೇಶಕ ಡಾ.ವೆಂಕಟೇಶ್‌, ರಾಷ್ಟ್ರೀಯ ನಾಟಕ ಶಾಲೆ ನಿರ್ದೇಶಕ ಸಿ.ಬಸವಲಿಂಗಯ್ಯ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು. 2019ರ ಗ್ರಾಮೀಣ ಕುಟುಂಬ ವಿಶೇಷ ಪ್ರಶಸ್ತಿಗೆ ಪರಿಸರ ತಜ್ಞ ಡಾ.ನಾಗೇಶ ಹೆಗಡೆ ಭಾಜನರಾಗಿದ್ದಾರೆ.

ಸಾವಯವ ಕೃಷಿಕರಾದ ಮತ್ತು ಸಿರಿಧಾನ್ಯ ಬೆಳೆಗಾರರಾದ ಲಕ್ಷ್ಮೀನಾರಾಯಣ್‌, ಜಗದೀಶ್‌ ಬರದೂರು, ಮಡಿವಾಳಪ್ಪ ತೋಟಗಿ, ಕೃಷ್ಣಪ್ಪ ಸಿ.ಪಿ., ನಾರಾಯಣ ರಾವ್‌ ಕುಲಕರ್ಣಿ, ಬಾಲನ್‌, ಸಿರಿಧಾನ್ಯ ಆಹಾರ ತಯಾರಕ ಅರುಣ ಪ್ರಸನ್ನ, ಭೀಮೇಶ್‌ ಹಾಗೂ ಮಾಲೂರು ವಿಜಯಕುಮಾರ್‌ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಮೇ 4ರಂದು ಬೆಳಗ್ಗೆ 11ಕ್ಕೆ ಸಿರಿಧಾನ್ಯ ಹಾಗೂ ಕಾಡು ಕೃಷಿ ಕುರಿತು ಮಲ್ಲಿಕಾರ್ಜುನ ಹೊಸಪಾಳ್ಯ, ಲಕ್ಷ್ಮೀನಾರಾಯಣ್‌ ಹಾಗೂ ಕೃಷ್ಣಪ್ಪ ಸಿ.ಪಿ ತರಬೇತಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ರಶ್ಮಿ ಮತ್ತು ಸುನೀತಾ ಸಿರಿಧಾನ್ಯಗಳ ಅಡುಗೆ ಕುರಿತು ಮಾಹಿತಿ ನೀಡಲಿದ್ದಾರೆ.

ಅಂದು ಸಿರಿಧಾನ್ಯ ಅಡುಗೆ ಸ್ಪರ್ಧೆ ನಡೆಯಲಿದೆ. ಮನೆಯಲ್ಲಿಯೇ ವೈವಿಧ್ಯಮಯವಾಗಿ ಸಿದ್ಧಪಡಿಸಿಕೊಂಡು ಬಂದ ಸಿರಿಧಾನ್ಯ ಅಡುಗೆಗಳಲ್ಲಿ ಆಯ್ದ ಮೂರು ಸ್ಪರ್ಧಿಗಳ ವಿಭಿನ್ನ ಸಿರಿಧಾನ್ಯಗಳ ಅಡುಗೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಮೇ 5ರಂದು ಬೆಳಗ್ಗೆ 11ಕ್ಕೆ ಸಿರಿಧಾನ್ಯಗಳು ಮತ್ತು ಆರೋಗ್ಯದ ಕುರಿತು ಡಾ.ಖಾದರ್‌ ಸಂವಾದ ನಡೆಸಿಕೊಡಲಿದ್ದಾರೆ. ನಂತರ ನಡೆಯುವ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌ ವಹಿಸಲಿದ್ದಾರೆ. ಶಶಿಧರ ಹಾಗೂ ಬಾಲಾಜಿ ಗೋಷ್ಠಿ ನಡೆಸಿಕೊಡಲಿದ್ದಾರೆ ಎಂದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.