ಗ್ರಾಪಂ ನೌಕರರಿಗೆ ರಾಜ್ಯ ಸರ್ಕಾರದಿಂದಲೇ ವೇತನ

Team Udayavani, Mar 3, 2018, 6:35 AM IST

ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಬಹುದಿನ ಬೇಡಿಕೆಯಾದ ರಾಜ್ಯ ಸರ್ಕಾರದಿಂದಲೇ ವೇತನವನ್ನು ನೇರ ಬ್ಯಾಂಕ್‌ ಖಾತೆಗೆ ಪಾವತಿ ಮಾಡಬೇಕೆಂಬ ಬೇಡಿಕೆಯನ್ನು ಈಡೇರಿಸಿರುವ ಸರ್ಕಾರ ಮಾರ್ಚ್‌ 1ರಿಂದಲೇ ಆರ್‌ಟಿಜಿಎಸ್‌ ಮೂಲಕ ಬ್ಯಾಂಕ್‌ ಖಾತೆಗೆ ಜಮೆ ಮಾಡಲು ಸೂಚನೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ.ಪಾಟೀಲ್‌,ರಾಜ್ಯದ 6024 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ ಬಿಲ್‌ ಕಲೆಕ್ಟರ್‌, ಕ್ಲರ್ಕ್‌/ಡಾಟಾ ಎಂಟ್ರಿ ಆಪರೇಟರ್‌, ವಾಟರ್‌ಮನ್‌, ಪಂಪ್‌ ಆಪರೇಟರ್‌, ಪಂಪ್‌ ಮೆಕ್ಯಾನಿಕ್‌, ಜವಾನ ಮತ್ತು ಸ್ವತ್ಛತಾಗಾರರು ಸೇರಿ ಒಟ್ಟು 50,114 ನೌಕರರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳಿದರು. 

ಗ್ರಾಮ ಪಂಚಾಯಿತಿ ನೌಕರರಿಗೆ ಉದ್ಯೋಗ ಭದ್ರತೆ ಇಲ್ಲದೆ ವೇತನ ಸರಿಯಾಗಿ ಸಿಗದ ಸ್ಥಿತಿ ಇತ್ತು. ನಮ್ಮ ಸರ್ಕಾರ ಬಂದ ನಂತರ ಕಾರ್ಮಿಕ ಇಲಾಖೆ ಪ್ರಕಾರ ಕನಿಷ್ಠ ವೇತನ ನಿಗದಿಪಡಿಸಲಾಯಿತು. ಕನಿಷ್ಠ ವೇತನವೂ ಕಾಲ ಕಾಲಕ್ಕೆ ಸಿಗುತ್ತಿಲ್ಲವೆಂಬ ದೂರು ಕೇಳಿ ಬಂದಿತ್ತು. ಹೀಗಾಗಿ, ಸರ್ಕಾರದ ವತಿಯಿಂದಲೇ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಅವರಿಗೆ ಉದ್ಯೋಗ ಭದ್ರತೆಯೂ ಸಿಕ್ಕಿದಂತಾಯಿತು ಎಂದು ಹೇಳಿದರು.

ಗ್ರಾಪಂ ನೌಕರರು ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು, ನೈರ್ಮಲ್ಯ ಮತ್ತು ಪಂಚಾಯಿತಿ ಸಂಪನ್ಮೂಲ ಸಂಗ್ರಹಣೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ.

ಹೀಗಾಗಿ, ಅವರಿಗೆ ಉದ್ಯೋಗ ಭದ್ರತೆ ಹಾಗೂ ವೇತನ ಸಕಾಲದಲ್ಲಿ ಸಿಗುವಂತೆ ಮಾಡುವುದು ಸರ್ಕಾರದ ಕರ್ತವ್ಯ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ