ಅಗ್ಗದ ಪ್ರಚಾರದಿಂದ ಶ್ರೇಷ್ಠತೆ ಬಾರದು

Team Udayavani, Jul 21, 2019, 3:06 AM IST

ಬೆಂಗಳೂರು: ಶ್ರೇಷ್ಠರೆಲ್ಲಾ ಜನಪ್ರಿಯರಲ್ಲ, ಜನಪ್ರಿಯರೆಲ್ಲಾ ಶ್ರೇಷ್ಠರಾಗಿರುವುದಿಲ್ಲ. ಜನಪ್ರಿಯತೆ ಅಗ್ಗದ ಪ್ರಚಾರದಿಂದಲೂ ಬರಬಹುದು. ಆದರೆ, ಶ್ರೇಷ್ಠತೆ ಬರುವುದಿಲ್ಲ ಎಂದು ಎಂದು ಹಿರಿಯ ಸುಗಮ ಸಂಗೀತ ಗಾಯಕ ವೈ.ಕೆ.ಮುದ್ದುಕೃಷ್ಣ ಅಭಿಪ್ರಾಯಪಟ್ಟರು.

ಸಾಹಿತ್ಯ ದಾಸೋಹ ವೇದಿಕೆ, ನಗರದ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕಿ ರತ್ನಾ ಮೂರ್ತಿ ಅವರ “ಭೂಮಿ ಗ್ರಹಣ’, “ಗೌರಮ್ಮನ ವಚನಗಳು’ ಮತ್ತು “ಕೀಲಿ ಕೈಯನು ತಾರೆ ಕೀಲಿ ಕೈಯ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಮ್ಮ ನಡುವೆ ಹಲವು ಲೇಖಕಿಯರು ಎಲೆಮರೆ ಕಾಯಿಯಂತೆ ಇದ್ದು, ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡಿದ್ದಾರೆ. ಅಂತಹ ಲೇಖಕಿಯರನ್ನು ಗುರುತಿಸಿ ಗೌರವಿಸುವ ಕೆಲಸ ನಡೆಯಬೇಕಾಗಿದೆ. ಪ್ರತಿಭೆಯನ್ನು ಬರವಣಿಗೆ ಮೂಲಕ ಹೊರಹಾಕುವುದು ವ್ಯಕ್ತಿಯ ಶ್ರೇಷ್ಠತೆಯನ್ನು ಬಿಂಬಿಸುತ್ತದೆ ಎಂದರು.

ಕಾವ್ಯ ರಚನೆ ಯಾವಾಗಲು ಸರಳವಿರಬೇಕು. ಹೀಗಿದ್ದಾಗ ಮಾತ್ರ ಅವುಗಳು ಹೆಚ್ಚು ಹೆಚ್ಚು ಓದುಗರನ್ನು ತಲುಪುತ್ತವೆ. ಉತ್ತಮವಾದ ಕಾವ್ಯ ರಚನೆ ಶಕ್ತಿ ಹೊಂದಿರುವ ರತ್ನಾ ಮೂರ್ತಿ ಅವರು ಶ್ರೇಷ್ಠ ಕೃತಿಗಳನ್ನು ರಚಿಸಿದ್ದಾರೆ. ಸುಮಾರು 28 ಕೃತಿಗಳನ್ನು ರಚಿಸಿದರೂ ಅವರ ಕಾವ್ಯ ಸೇವೆಯನ್ನು ಗುರುತಿಸದೇ ಇರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ರತ್ನಾ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಹೆಸರು ಮಾಡಲಿ ಎಂದು ಆಶಿಸಿದರು.

ವೇದ ವಿದ್ವಾಂಸ ಡಾ.ರ.ವಿ.ಜಹಾಗಿರ್‌ದಾರ್‌ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳಿಗೆ ವಿಶೇಷವಾದ ಸ್ಥಾನವಿದೆ. ಅದರಲ್ಲೂ ರತ್ನಾ ಮೂರ್ತಿಯವರ “ಗೌರಮ್ಮನ ವಚನ’ ರೀತಿಯ ಪುಸ್ತಕಗಳಿಗೆ ಹೆಚ್ಚು ಮನ್ನಣೆ ಇದೆ. ಅವರ ಪುಸ್ತಕಗಳು ಓದುತ್ತಿದ್ದರೆ ಆಪ್ತತೆ ಹೆಚ್ಚಾಗುತ್ತದೆ ಎಂದರು.

ಕೆಲವು ಶಾಲೆ, ಕಾಲೇಜುಗಳ ಗ್ರಂಥಾಲಯದಲ್ಲಿ ಇನ್ನೂ ಕೂಡ ಗಾಂಧೀಜಿ ಅವರ ಕುರಿತಾದ ಪುಸ್ತಕಗಳು ಇಲ್ಲ. ಇಂತಹ ಹಲವು ಮಹನೀಯರ ಪುಸ್ತಕಗಳನ್ನು ಶಾಲೆ, ಕಾಲೇಜುಗಳ ಗ್ರಂಥಾಲಯಗಳಿಗೆ ತಲುಪಿಸುವ ಕೆಲಸ ನಡೆಯಬೇಕಾಗಿದೆ ಎಂದು ಹೇಳಿದರು. ನಿವೃತ್ತ ಡಿಜಿಪಿ ಕೆ.ವಿ.ರವೀಂದ್ರನಾಥ ಠ್ಯಾಗೋರ್‌, ಲೇಖಕಿ ರತ್ನಾ ಮೂರ್ತಿ, ಗಮಕಿ ಡಾ.ಎಂ.ಆರ್‌.ಸತ್ಯನಾರಾಯಣ, ಸೀತಾರಾಮ ಹೆಗೆಡೆ ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಶೌಚಗುಂಡಿ ಸ್ವಚ್ಛ ಮಾಡುತ್ತಿದ್ದ ವೇಳೆ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೂಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇನ್‌ಫೆಂಟ್ರಿ...

  • ಬೆಂಗಳೂರು: ಸ್ವಚ್ಛ ನಗರ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆಯಲು ಬಿಬಿಎಂಪಿ ಸ್ವಚ್ಛ ಸರ್ವೆಕ್ಷಣ್‌ ಅಭಿಯಾನ ಮಾಡುತ್ತಿದ್ದರೆ ಅದಕ್ಕೆ ಪೂರಕವಾಗಿ ಸಾರ್ವಜನಿಕರ ಸ್ಪಂದನೆ...

  • ಬೆಂಗಳೂರು: ಸಮಾಜವು ಗುಲಾಮಗಿರಿಯಿಂದ ಹೊರಬರದ ಹೊರತು ಅಭಿವೃದ್ಧಿ ಸಾಧ್ಯವೇ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಅಕ್ಕನಮನೆ ದಶಮಾನೋತ್ಸವ...

  • ಬೆಂಗಳೂರು: ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡಬೇಕಾದರೆ ಕಡ್ಡಾಯವಾಗಿ ಕಸಮುಕ್ತ ನಗರವನ್ನಾಗಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾಗಿ ಸ್ವಚ್ಛತೆ...

  • ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಜೀವ ಬೆದರಿಕೆ ಬಂದಿದ್ದರೆ ಪೊಲೀಸ್‌ ಇಲಾಖೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಬಿಜೆಪಿ...

ಹೊಸ ಸೇರ್ಪಡೆ