ಗುರುಕುಲ ಮಾದರಿ ರಂಗ ಶಿಕ್ಷಣಕ್ಕೆ ಸಜ್ಜು

Team Udayavani, Jan 2, 2019, 1:47 AM IST

x-18.jpg

ಬೆಂಗಳೂರು: ಗ್ರಾಮೀಣ ಯುವ ಸಮೂಹವನ್ನು ವೃತ್ತಿ ರಂಗಭೂಮಿಯತ್ತ ಸೆಳೆಯುವ ಸಲುವಾಗಿ ಕರ್ನಾಟಕ ನಾಟಕ ಅಕಾಡೆಮಿ, ಈಗ “ಗುರುಕುಲ ಮಾದರಿಯ ರಂಗ ಶಿಕ್ಷಣ’ಕ್ಕೆ ಮುಂದಾಗಿದೆ. ಗುರುಕುಲ ಮಾದರಿಯ ರಂಗ ಶಿಕ್ಷಣ ನೀಡುವ ಸಲುವಾಗಿ ಯೋಜನೆ ರೂಪಿಸಿರುವ ನಾಟಕ ಅಕಾಡೆಮಿ, ವೃತ್ತಿ ರಂಗಭೂಮಿ ಬಗ್ಗೆ ಆಸಕ್ತಿ ಇರುವ ಗ್ರಾಮೀಣ ಭಾಗದ ಯುವ ಸಮುದಾಯದ ಹುಡುಕಾಟ ನಡೆಸಿದೆ. ಉತ್ತರ ಕರ್ನಾಟಕ ಭಾಗದಲ್ಲಿರುವ ವೃತ್ತಿ ರಂಗಭೂಮಿಯ ನಾಟಕ ಕಂಪನಿಗಳಲ್ಲಿ ಅಭ್ಯರ್ಥಿಗಳಿಗೆ ತರಬೇತಿ ಸಿಗಲಿದೆ.

ವೃತ್ತಿ ರಂಗಭೂಮಿಯಲ್ಲಿ ತೊಡಗಿಕೊಳ್ಳುವ ಯುವ ಸಮೂಹ ಪ್ರಮಾಣ ದಿನೇದಿನೆ ಕ್ಷೀಣಿಸುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ನಾಟಕ ಅಕಾಡೆಮಿ ಗುರುಕುಲ ಮಾದರಿಯ ರಂಗ ಕಲಿಕೆಗೆ ರೂಪು-ರೇಷೆ ಹಾಕಿಕೊಂಡಿದೆ. ರಂಗ ಶಿಕ್ಷಣ ಕಲಿಸಲು ಕೆಲವು ಮಾನದಂಡಗಳನ್ನು ರೂಪಿಸಲಾಗಿದ್ದು ಸಂದರ್ಶನ ಸಹ ಇರಲಿದೆ. ಇದರಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆಯಾಗಲಿದ್ದು ಅವರಿಗೆ 10 ಸಾವಿರ ರೂ. ಮಾಸಿಕ ಶಿಷ್ಯ ವೇತನ ಸಹ ನಾಟಕ ಅಕಾಡೆಮಿ ನೀಡಲಿದೆ.

15 ಅಭ್ಯರ್ಥಿಗಳಿಗೆ ಅವಕಾಶ: ಗುರುಕುಲ ಮಾದರಿಯ ಕಲಿಕೆಗೆ ಕೇವಲ 15 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಆಯ್ಕೆ ಯಾದ ಅಭ್ಯರ್ಥಿಗಳನ್ನು ಉತ್ತರ ಕರ್ನಾಟಕ ಭಾಗದ ನಾಟಕ ಕಂಪನಿಗಳಿಗೆ ಕಳುಹಿಸಿ ಕೊಡಲಾಗುವುದು. ಇದು ಯಶಸ್ವಿಯಾದರೆ ಮುಂದಿನ ವರ್ಷದಿಂದ 30 ಅಭ್ಯರ್ಥಿಗಳಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ರಂಗ ಶಿಕ್ಷಣದಡಿ ನಟನೆ ಜತೆಗೆ ರಂಗಸಜ್ಜಿಕೆ ಸಿದ್ಧಪಡಿಸುವಿಕೆ, ಹಾರ್ಮೋನಿಯಂ, ಪ್ರಸಾದನ ಸೇರಿ ವೃತ್ತಿ ರಂಗಭೂಮಿ ಕುರಿತಾದ ಹಲವು ಮಜಲುಗಳನ್ನು ಕಲಿಯಲಿದ್ದಾರೆ. ನಾಡಿನ ವಿವಿಧೆಡೆ ಸುಮಾರು 26 ನೋಂದಾಯಿತ ನಾಟಕ ಕಂಪನಿಗಳಿದು,ª ಇವುಗಳಲ್ಲಿ ಕೆಲವು ವೃತ್ತಿ ರಂಗಭೂಮಿ ಚಟುವಟಿಕೆಯಲ್ಲಿ ಸಕ್ರಿಯವಾಗಿವೆ. 15ಕ್ಕೂ ಹೆಚ್ಚು ನಾಟಕ ಕಂಪನಿಗಳು ಬೇಸಿಗೆ ಕಾಲದಲ್ಲಿ ಮಾತ್ರ ನಾಟಕವನ್ನು ಪ್ರದರ್ಶಿಸುತ್ತಿದ್ದು, ಇನ್ನೂ ಕೆಲವು ನಾಟಕ ಕಂಪನಿಗಳು ವರ್ಷ ಪೂರ್ತಿ ನಾಟಕ ಪ್ರದರ್ಶಿಸುತ್ತವೆ. ವರ್ಷ ಪೂರ್ತಿ ಪ್ರದರ್ಶಿಸುವ ನಾಟಕ ಕಂಪನಿಗಳಿಗೆ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಳುಹಿಸಿ ಕೊಡಲಾಗುವುದು.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯಲ್ಲಿ ಚಿತ್ತರಗಿಯ ಗಂಗಾಧರ ಶಾಸ್ತ್ರೀ ನಾಟಕ ಕಂಪನಿ, ಜೇವರ್ಗಿಯ ರಾಜಣ್ಣ ನಾಟಕ ಕಂಪನಿ ಮತ್ತು ಶೇಖ್‌ ಮಾಸ್ತರ್‌ ನಾಟಕ ಕಂಪನಿಗಳು ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ನಾಟಕ ಅಕಾಡೆಮಿ ತಿಳಿಸಿದೆ.

ಧಾರವಾಡದಲ್ಲಿ ಆಯ್ಕೆ ಪ್ರಕ್ರಿಯೆ: ಗುರುಕುಲ ಮಾದರಿಯ ರಂಗ ಕಲಿಕೆ ಕೇವಲ ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಮಾತ್ರ ಸೀಮಿತವಾಗಿದೆ. ನಾಟಕ ಅಕಾಡೆಮಿ ವೃತ್ತಿರಂಗ ಭೂಮಿ ಬಗ್ಗೆ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಜ.10 ಅರ್ಜಿ ಸಲ್ಲಿಸಲು ಕೊನೇ ದಿನವಾಗಿದೆ. ಹಲವು ಸಂಖ್ಯೆಯಲ್ಲಿ ಯುವ ರಂಗಾಸಕ್ತರು ಅರ್ಜಿ ಸಲ್ಲಿಸಿದ್ದು, ಆಯ್ಕೆ ಪ್ರಕ್ರಿಯೆ ಧಾರವಾಡಲ್ಲಿ ನಡೆಯಲಿದೆ. ಮೂವರು ಸದಸ್ಯರುಳ್ಳ ಆಯ್ಕೆ ಸಮಿತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ನಾಟಕ ಅಕಾಡೆಮಿ ಹಿರಿಯ ಅಧಿಕಾರಿ ಗಳು ಹೇಳಿದ್ದಾರೆ. 

ವೃತ್ತಿ ರಂಗಭೂಮಿ ಇತ್ತೀಚಿನ ದಿನಗಳಲ್ಲಿ ಅಪಾಯದ ಅಂಚಿಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಗುರುಕುಲ ಮಾದರಿಯ ಶಿಕ್ಷಣ ನೀಡಲು ಯೋಜನೆ ರೂಪಿಸಲಾಗಿದೆ.  
ಜೆ.ಲೋಕೇಶ್‌, ನಾಟಕ ಅಕಾಡೆಮಿ ಅಧ್ಯಕ್ಷ

 ●ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.