ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ; ಬಿಬಿಎಂಪಿ ಉಪ ಆಯುಕ್ತರ ವಿರುದ್ಧ ಎಫ್ ಐಆರ್
Team Udayavani, Mar 24, 2022, 10:45 AM IST
ಬೆಂಗಳೂರು: ರಾಜ್ಯ ಬೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಗೆ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಮಹಾಲಕ್ಷ್ಮೀ ಲೇಔಟ್ನ ನಿವಾಸಿ ಬೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ 49 ವರ್ಷದ ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಬಿಬಿಎಂಪಿ ಆಡಳಿತ ವಿಭಾಗ ದ ಅಧಿಕಾರಿ ಯೋಗೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ “ನಾನು ಕೆಲಸ ಮಾಡುವ ಕಚೇರಿಗೆ ಆಗಮಿಸಿ ವ್ಯವಸ್ಥಾಪಕ ನಿರ್ದೇಶಕರ ಪ್ರಭಾರ ಸ್ಥಾನ ಕೊಡಬೇಕು ಎಂದು ಅಸಭ್ಯವಾಗಿ ವರ್ತಿಸಿದ್ದಾನೆ. ಆಗ ಕಚೇರಿಯ ಸಿಬ್ಬಂದಿ ಕರೆಸಿ ಸರ್ಕಾರ ಆದೇಶ ಸ್ವೀಕೃತಿ ಬಂದಿರುವ ಬಗ್ಗೆ ವಿಚಾರಿಸಿದಾಗ, ಬಂದಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ಈ ರೀತಿ ವರ್ತಿಸದಂತೆ ಹೇಳಿದಕ್ಕೆ, ಮದ್ಯಪಾನ ಮಾಡಿಕೊಂಡು ಬಂದಿದ್ದ ಆರೋಪಿ ಯೋಗೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಮೈ- ಕೈ ಮುಟ್ಟಿ ಅತ್ಯಾಚಾರ ಮಾಡುವುದಾಗಿ ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳ ಬೇಕು’ ಎಂದು ದೂರಿನಲ್ಲಿ ಸಂತ್ರಸ್ತೆ ಒತ್ತಾಯಿಸಿದ್ದಾರೆ. ಮತ್ತೂಂದೆಡೆ ಈ ಆರೋಪವನ್ನು ತಳ್ಳಿ ಹಾಕಿರುವ ಯೋಗೇಶ್, “ಸರ್ಕಾರದಿಂದ ಈಗಾಗಲೇ ಬೋವಿ ಅಭಿವೃದ್ಧಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕ ಪ್ರಭಾರಿ ಆಗಿ ತಮ್ಮನ್ನು ನಿಯೋಜಿಸಿ 2 ತಿಂಗಳಾಗಿದೆ. ಆದರೆ, ಸರ್ಕಾರದ ಆದೇಶ ಸ್ವೀಕರಿಸಿ ಆ ಹುದ್ದೆ ಯಲ್ಲಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ’ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ