ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ..!
Team Udayavani, Dec 7, 2021, 10:45 AM IST
ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗ ದಿಂದ ವಾಪಸ್ ಪಡೆದ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.
ತಾ.ಪಂ,ಜಿ.ಪಂ.ಗಳಿಗೆ ಗಡಿ ನಿರ್ಣಯಿಸಲು ಮತ್ತು ಮೀಸಲಾತಿ ನಿಗದಿಪಡಿಸಲು ಪ್ರತ್ಯೇಕವಾಗಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಜಾರಿಗೆ ತರಲಾಗಿರುವ “ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ- 2021 ಪ್ರಶ್ನಿಸಿ ಸ್ವತಃ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಇದನ್ನೂ ಓದಿ:- ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್
ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿದರು. ವಿಚಾರಣೆಯನ್ನು 2022 ಜ.18ಕ್ಕೆ ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ