ಎಚ್‌ಡಿಕೆ ಸಿಎಂ ಆಗೋದು ತಡೆಯೋಕೆ ಆಗಲ್ಲ: ದೇವೇಗೌಡ

Team Udayavani, Nov 30, 2017, 6:15 AM IST

29BNP-(22).jpg

ಬೆಂಗಳೂರು: ಈ ರಾಜ್ಯದಲ್ಲಿ ಮುಂದಿನ ಬಾರಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ.

ಇಡೀ ರಾಜ್ಯದಲ್ಲಿ ಕುಮಾರಸ್ವಾಮಿ ಬೇಕು ಎಂಬ ಕೂಗು ಎದ್ದಿದೆ. ಹೀಗಾಗಿ, ಯಾರು ಏನೇ ಹೇಳಿದರೂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಶತಸಿದ್ಧ ಎಂದು ಹೇಳಿದ್ದಾರೆ.

ನಗರದ ಪುರಭವನದಲ್ಲಿ “ಟೈಗರ್‌ ಆ್ಯಪ್‌’ ಮತ್ತು ಎಚ್‌ಡಿಕೆ ರಕ್ತದಾನ ಸಮಿತಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಇಪ್ಪತ್ತು ತಿಂಗಳು ಮುಖ್ಯಮಂತ್ರಿಯಾಗಿ ಜನರ ಮನಸ್ಸು ಗೆದ್ದಿದ್ದ ಕುಮಾರಸ್ವಾಮಿ ಮತ್ತೂಮ್ಮೆ ಮುಖ್ಯಮಂತ್ರಿಯಾಗಬೇಕು ಎಂಬುದು ರಾಜ್ಯದ ಜನರ ಆಶಯವಾಗಿದೆ ಎಂದು ತಿಳಿಸಿದರು.

ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದು ಅದು ನಾನು ಕೊಡುವ ಭಾಗ್ಯವಲ್ಲ. ರಾಜ್ಯದ ಜನರೇ ಕೊಡುವ ಭಾಗ್ಯ ಎಂದರು.

ಈ ರಾಜ್ಯದಲ್ಲಿ ಕಳೆದ ಹತ್ತು ವರ್ಷದಲ್ಲಿ ಅಧಿಕಾರ ನಡೆಸಿದ ಯಾರ್ಯಾರು ಏನು ಮಾಡಿದ್ದಾರೆ ಎಂಬುದು ಹೊರಗೆ ತೆಗೆಯುವ ಕಾಲ  ಈಗ ಬಂದಿದೆ. ಮುಂದಿನ ದಿನಗಳಲ್ಲಿ  ಎಲ್ಲವೂ ಬಹಿರಂಗವಾಗಲಿದೆ ಎಂದು ಮಾರ್ಮಿಕವಾಗಿ ನುಡಿದರು.

ಟ್ಯಾಕ್ಸಿ ಕ್ಯಾಬ್‌ ಸೇವೆ ಆರಂಭಿಸಿರುವುದು ಶ್ರೇಷ್ಠ ಕೆಲಸ. ಚಾಲಕರಿಗೆ ಕಿರುಕುಳ ತಪ್ಪಿಸಿ ಸೌಲಭ್ಯ ಕಲ್ಪಿಸಲು ಆರಂಭಿಸಿರುವುದು ಒಳ್ಳೆಯದು. ಕುಮಾರಸ್ವಾಮಿ ದೇವೇಗೌಡರ ಮಗ ಎಂಬುದು ಎಲ್ಲರಿಗೂ ಗೊತ್ತಿದೆ. ಪುತ್ರ ವಾತ್ಸಲ್ಯದಿಂದ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಟೀಕೆ ಬರಬಹುದು. ಆದರೆ, ನಾನು ಅದಕ್ಕೆ ಭಯ ಪಡೋಲ್ಲ ಎಂದು ಹೇಳಿದರು. 

ಮುಂದಿನ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರಲಿದ್ದು ದುಡಿಯುವ ಕೈಗಳಿಗೆ ಆರ್ಥಿಕ ಶಕ್ತಿ ಕಲ್ಪಿಸಲಿದೆ. ಕೂತು ತಿನ್ನುವರರನ್ನು ಹಿಂದೆ ಸರಿಸಿ ಕೆಲಸ ಮಾಡುವವರಿಗೆ ಉದ್ಯೋಗ ಕಲ್ಪಿಸಲಿದ್ದೇವೆ ಎಂದು ತಿಳಿಸಿದರು.

ಟ್ಯಾಕ್ಸಿಯ ಸಿಂಬಲ್‌ನಲ್ಲಿ ಹುಲಿ ಮುಖ ಇದೆ. ಆದರೆ, ಇದು ಯಾರನ್ನೂ ತಿನ್ನಲ್ಲ. ಲೂಟಿ ಮಾಡುವ ರಾಜಕಾರಣಿಗಳತ್ತ ಕಣ್ಣಿಡಲಿದೆ ಎಂದು ಚಟಾಕಿ ಹಾರಿಸಿದರು.

ಕಾರ್ಯಕ್ರಮದ ನಂತರ ನಮ್ಮ ಟೈಗರ್‌ ಟ್ಯಾಕ್ಸಿಯಲ್ಲಿ ಕುಳಿತು ನೂತನ ಕ್ಯಾಬ್‌ ಸೇವೆಗೆ ಚಾಲನೆ ನೀಡಿದರು. ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಓಲಾ ಹಾಗೂ ಊಬರ್‌ ಸಂಸ್ಥೆಗಳ ವಿರುದ್ಧ ಸಿಡಿದೆದ್ದ ಚಾಲಕರು ಎಚ್‌.ಡಿ.ಕುಮಾರಸ್ವಾಮಿ ನೆರವಿನೊಂದಿಗೆ ಟೈಗರ್‌ ಟ್ಯಾಕ್ಸಿ ಸೇವೆ ಆರಂಭಿಸಿದ್ದು, ಇದಕ್ಕಾಗಿ ಆ್ಯಪ್‌ ಸಹ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಕೈಗೆ‌ಟಕುವ  ದರ ಹಾಗೂ ಉತ್ತಮ ಸೇವೆ ಘೋಷವಾಕ್ಯದಡಿ ಕಾರ್ಯಾರಂಭ ಮಾಡಿದೆ.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.