ಆತ “ಉಗ್ರ’ನಲ್ಲ; ವಾಚ್‌ ವ್ಯಾಪಾರಿ


Team Udayavani, May 9, 2019, 3:08 AM IST

ata-ugra

ಬೆಂಗಳೂರು: “ಮೆಟ್ರೋ ನಿಲ್ದಾಣದಲ್ಲಿ ಶಂಕಿತ ಉಗ್ರರು’ ಎಂದು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ವಿಡಿಯೋ/ಫೋಟೋಗಳಲ್ಲಿದ್ದ ಇಬ್ಬರು ವ್ಯಕ್ತಿಗಳ ಪೈಕಿ ಒಬ್ಬ, ಪೊಲೀಸರ ಮುಂದೆ ಹಾಜರಾಗಿ, “ನಾನು ಉಗ್ರನಲ್ಲ. ಸಾಮಾನ್ಯ ನಾಗರೀಕ’ ಎಂದು ಸ್ಪಷ್ಟೀಕರಣ ನೀಡಿದ ಪ್ರಸಂಗ ಬುಧವಾರ ಸಂಜೆ ಉಪ್ಪಾರಪೇಟೆ ಪೊಲೀಸ್‌ ಠಾಣೆ ಆವರಣದಲ್ಲಿ ನಡೆಯಿತು.

ಅಲ್ಲದೆ, ಸುಮಾರು 30 ವರ್ಷಗಳಿಂದ ಮೆಜೆಸ್ಟಿಕ್‌ನ ಬಿಎಂಟಿಸಿ ಪಾದಚಾರಿ ಸುರಂಗ ಮಾರ್ಗದಲ್ಲಿ ವಾಚ್‌ ವ್ಯಾಪಾರ ಮಾಡುತ್ತಿದ್ದು, ಗಂಗೊಂಡನಹಳ್ಳಿ ನಿವಾಸಿ ರಿಯಾಜ್‌ ಅಹಮದ್‌ ಎಂದು ದಾಖಲೆಗಳ ಸಮೇತ ಪೊಲೀಸರಿಗೆ ಸ್ಪಷ್ಟಪಡಿಸಿದ್ದಾರೆ.

ಮತ್ತೊಂದೆಡೆ ತಮ್ಮನ್ನು ಶಂಕಿತ ಉಗ್ರ ಎಂದು ಬಿಂಬಿಸಿದ ದೃಶ್ಯ ಮಾಧ್ಯಮ ಹಾಗೂ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಬಹಿರಂಗ ಪಡಿಸಿದ ಮೆಟ್ರೋ ನಿಲ್ದಾಣದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಿಯಾಜ್‌ ಅಹಮದ್‌ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಕುರಿತು ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ. ಚೆನ್ನಣ್ಣನವರ್‌, ಮೇ 6ರಂದು ಸಂಜೆ 7.14ರ ಸುಮಾರಿಗೆ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದ ತಪಾಸಣಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತನೆ ತೋರಿದ ವ್ಯಕ್ತಿಯ ಫೋಟೋ ಹಾಗೂ ವಿಡಿಯೋಗಳನ್ನು ಪ್ರಸಾರ ಮಾಡಿದ ದೃಶ್ಯ ಮಾಧ್ಯಮ, ಆತನನ್ನು ಶಂಕಿತ ಉಗ್ರ ಎಂದು ಬಿಂಬಿಸಿತ್ತು. ಅದನ್ನು ಗಮನಿಸಿದ ರಿಯಾಜ್‌ ಅಹಮದ್‌, ಖುದ್ದು ಉಪ್ಪಾರಪೇಟೆ ಠಾಣೆಗೆ ಹಾಜರಾಗಿ ಸ್ಪಷ್ಟನೆ ನೀಡಿದ್ದಾರೆ ಎಂದರು.

ಟೋಪಿ ತೆಗೆದು ತಾಪಾಸಣೆ: ನಾಯಂಡಹಳ್ಳಿ ಸಮೀಪದ ಗಂಗೊಂಡನಹಳ್ಳಿಯ 1ನೇ ಕ್ರಾಸ್‌ ನಿವಾಸಿ ರಿಯಾಜ್‌ ಅಹಮದ್‌ ಸುಮಾರು 30 ವರ್ಷಗಳಿಂದ ಮೆಜೆಸ್ಟಿಕ್‌ನ ಸುರಂಗ ಮಾರ್ಗದಲ್ಲಿ ವಾಚ್‌ ರಿಪೇರಿ ಹಾಗೂ ವ್ಯಾಪಾರ ಮಾಡುತ್ತಿದ್ದು, ಎಂದಿನಂತೆ ಮೇ 6ರಂದು ಸಂಜೆ 7.14ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣಕ್ಕೆ ಹೋದಾಗ ಅಲ್ಲಿನ ಭದ್ರತಾ ಸಿಬ್ಬಂದಿ ಅವರ ಟೋಪಿ ತೆಗೆಸಿ ತಪಾಸಣೆ ನಡೆಸಿದ್ದಾರೆ. ಅದರಿಂದ ಮುಜುರಕ್ಕೊಳಗಾದ ರಿಯಾಜ್‌, ತಪಾಸಣಾ ಸ್ಥಳದಿಂದ ಸ್ವಲ್ಪ ಮುಂದೆ ಹೋಗಿ ಮೂರು ಬಾರಿ ಹಿಂದೆ ತಿರುಗಿ ನೋಡಿದ್ದು, ಅದೇ ದೃಶ್ಯವನ್ನು ಪಡೆದ ಮಾಧ್ಯಮವೊಂದು, ರಿಯಾಜ್‌ರನ್ನು ಉಗ್ರನಂತೆ ಬಿಂಬಿಸಿದೆ.

ರಿಯಾಜ್‌ ಅಹ್ಮದ್‌ ದೂರಿನಲ್ಲೇನಿದೆ?: “ನಾನು ರಿಯಾಜ್‌ ಅಹಮದ್‌ ಗಂಗೊಂಡಹಳ್ಳಿಯಲ್ಲಿ ವಾಸವಾಗಿದ್ದು, ಮೆಜೆಸ್ಟಿಕ್‌ನ ಬಿಎಂಟಿಸಿ ಸುರಂಗ ಮಾರ್ಗದ ಸಮೀಪ ರಸ್ತೆ ಬದಿ ಕೈಗಡಿಯಾರದ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದೇನೆ. ಸುಮಾರು 20ಕ್ಕೂ ಹೆಚ್ಚು ವರ್ಷಗಳಿಂದ ವ್ಯಾಪಾರದಲ್ಲಿ ತೊಡಗಿದ್ದೇನೆ.

ಹೀಗಿರುವಾಗ ನಾನು ಮೇ 7ರಂದು ಮಂಗಳವಾರ ಸಂಜೆ ವ್ಯಾಪಾರ ಮುಗಿಸಿಕೊಂಡು ಮನೆಗೆ ವಾಪಸ್‌ ಹೋಗಲು ಮೆಜೆಸ್ಟಿಕ್‌ನ ಮೆಟ್ರೋ ನಿಲ್ದಾಣಕ್ಕೆ ಹೋಗಿ, ಸಂಜೆ 5.45ರ ಸುಮಾರಿಗೆ ಮನೆಗೆ ಹೋಗಿದ್ದೇನೆ. ನಂತರ ಮನೆಯಲ್ಲಿ ಟಿವಿ ನೋಡುವಾಗ, ಮನೆ ಪಕ್ಕದ ನಿವಾಸಿ ಮೊಹಮ್ಮದ್‌ ಸೈಫ‌ುಲ್ಲಾ ಅವರು, ಸುದ್ದಿ ವಾಹಿನಿ ಒಂದರಲ್ಲಿ ನಮ್ಮನ್ನು ಭಯೋತ್ಪಾದಕನಂತೆ ತೋರಿಸುತ್ತಿದ್ದಾರೆ’ ಎಂದು ಹೇಳಿದರು.

“ನಾನು ಸಾಮಾನ್ಯ ನಾಗರಿಕನಾಗಿದ್ದು, ನನ್ನ ಪತ್ನಿ ಹಾಗೂ ಏಳು ಮಕ್ಕಳ ಜತೆ ವಾಸವಾಗಿದ್ದೇನೆ. ಟಿವಿಯಲ್ಲಿ ನನ್ನ ಬಗ್ಗೆ ಪ್ರಸಾರವಾದ ವರದಿಯಿಂದ ನನಗೆ ವಿಪರೀತ ತೊಂದರೆಯಾಗಿದ್ದು, ಕುಟುಂಬದರೂ ಆತಂಕದಲ್ಲಿದ್ದಾರೆ. ಟಿವಿಯವರು ಪೂರ್ವಾಪರ ತಿಳಿಯದೆ ವರದಿ ಬಿತ್ತಿರಿಸಿದ್ದು, ನನ್ನ ಗೌರವಕ್ಕೆ ಧಕ್ಕೆಯಾಗಿದೆ. ಈ ರೀತಿ ವರದಿ ಮಾಡಿದ ಟಿವಿ ಹಾಗೂ ಮಾಧ್ಯಮದವರಿಗೆ ಸಿಸಿ ಕ್ಯಾಮೆರಾ ದೃಶ್ಯಾವಳಿ ನೀಡಿದ ಮೇಟ್ರೋ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕು. ನನಗೆ ನ್ಯಾಯ ಕೊಡಿಸಬೇಕು’ ಎಂದು ರಿಯಾಜ್‌ ಅಹಮದ್‌ ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರಿಯಾಜ್‌ ಅಹಮದ್‌, ಮಾಧ್ಯಮವೊಂದು ನನ್ನನ್ನು ಉಗ್ರ ಎಂದು ಬಿಂಬಿಸಿದ್ದರಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ತುಂಬ ನೋವಾಗಿದೆ. ಪೂರ್ವಾಪರ ಪರಿಶೀಲಿಸದೆ, ಏಕಾಏಕಿ ಉಗ್ರ ಎಂದು ಬಿಂಬಿಸುವ ಟಿವಿಯವರಿಗೆ ಮುಂದೆ ಏನಾಗುತ್ತದೆ ಎಂಬ ಪರಿಜ್ಞಾನ ಇರುವುದಿಲ್ಲವೇ? ಒಂದು ವೇಳೆ ಏನಾದರು ಅನಾಹುತ ಸಂಭವಿಸಿದರೆ ಯಾರು ಹೊಣೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಟುಂಬಕ್ಕೆ ರಕ್ಷಣೆ ನೀಡಲು ಆಗ್ರಹ: ಕಳೆದ ವರ್ಷ ರಾಜ್ಯದ ವಿವಿಧೆಡೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ಹಬ್ಬಿತ್ತು. ಅಲ್ಲದೆ, ನಗರದ ಚಾಮರಾಜಪೇಟೆಯಲ್ಲಿ ಅಪರಿಚಿತ ವ್ಯಕ್ತಿಯನ್ನು ಸಾರ್ವಜನಿಕರು ಮಕ್ಕಳ ಕಳ್ಳ ಎಂದು ಭಾವಿಸಿ, ಥಳಿಸಿ ಕೊಂದಿದ್ದರು. ಹೀಗಾಗಿ ಅದೇ ರೀತಿ ಯಾರಾದರೂ, ರಿಯಾಜ್‌ರನ್ನು ಉಗ್ರನೆಂದು ಭಾವಿಸಿ ಹಲ್ಲೆ ನಡೆಸಿದರೆ ಯಾರು ಹೊಣೆ? ಹೀಗಾಗಿ ರಿಯಾಜ್‌ ಹಾಗೂ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಉಪ್ಪಾರಪೇಟೆ ಠಾಣೆ ಎದುರು ಜಮಾಯಿಸಿದ್ದ ರಿಯಾಜ್‌ ಅಹಮದ್‌ ಸಂಬಂಧಿಕರು ಆಗ್ರಹಿಸಿದರು.

ಮತ್ತೊಬ್ಬ ಶಂಕಿತನ ನಿಗೂಢತೆ ಬೇಧಿಸಲು ಹೊರಟ ಖಾಕಿ!: ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದ ನಡೆತೋರಿ ಕೆಲವೇ ನಿಮಿಷಗಳಲ್ಲಿ ನಾಪತ್ತೆಯಾಗಿರುವ ಶಂಕಾಸ್ಪದ ವ್ಯಕ್ತಿಯ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ!

ಮೇ 6ರಂದು ರಾತ್ರಿ 7.30ರ ಸುಮಾರಿಗೆ ಮೆಟಲ್‌ ಡಿಟೆಕ್ಟರ್‌ ಮೂಲಕ ವ್ಯಕ್ತಿ ಹಾದು ಗೋದಾಗ “ಬಿಪ್‌’ ಸದ್ದಾಗಿದೆ. ಭದ್ರತಾ ಸಿಬ್ಬಂದಿ ಬ್ಯಾಗಲ್ಲಿ ಏನಿದೆ ಎಂದು ಪ್ರಶ್ನಿಸಿದಾಗ, ಹಣವಿದೆ ಎಂದು ಹೇಳಿದ್ದ ವ್ಯಕ್ತಿ, ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಶಂಕಾಸ್ಪದ ವ್ಯಕ್ತಿ ಯಾರು ಎಂಬ ಬಗ್ಗೆ ಇದುವರೆಗೂ ಮಾಹಿತಿಯಿಲ್ಲ. ಮೆಟ್ರೋ ನಿಲ್ದಾಣ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿನ ಸಿಸಿ ಕ್ಯಾಮೆರಾ ಫ‌ೂಟೇಜ್‌ ಪರಿಶೀಲಿಸುತ್ತಿದ್ದು, ಶಂಕಿತನ ಪತ್ತೆಗೆ ವಿಶೇಷ ತಂಡ ರಚನೆಯಾಗಿದೆ.

ಶಂಕಾಸ್ಪದ ವ್ಯಕ್ತಿ ಪತ್ತೆಗೆ ಹಲವು ಆಯಾಮಗಳಲ್ಲಿ ವಿಶೇಷ ತಂಡ ತನಿಖೆ ನಡೆಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಕಡೆ ಶೋಧ ನಡೆಸುತ್ತಿದ್ದೇವೆ . ಸಂಬಂಧಪಟ್ಟ ಇಲಾಖೆಗಳ ಜತೆ ಮಾಹಿತಿಯನ್ನು ಹಂಚಿಕೊಂಡಿದ್ದೇವೆ. ಆದರೆ, ಆತನ ಬಗ್ಗೆ ನಿಖರ ಮಾಹಿತಿ ಗೊತ್ತಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.

ಸುಳ್ಳು ಸುದ್ದಿ ನಂಬಬೇಡಿ: ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ವರ್ತಿಸಿ ನಾಪತ್ತೆಯಾದ ವ್ಯಕ್ತಿ ಯಾರು ಎಂದು ತಿಳಿಯಲು ವಿಶೇಷ ತಂಡ ತನಿಖೆ ನಡೆಸುತ್ತಿದೆ. ಆತ ಮೆಟ್ರೋ ನಿಲ್ದಾಣ ಪ್ರವೇಶಿಸುವ ಮುನ್ನ ಆತನ ಬಳಿ ಶಸ್ತ್ರಾಸ್ತ್ರವಿತ್ತು. ವಸ್ತುವೊಂದನ್ನು ತೆಗೆದುಕೊಂಡು ಹೋದರೆ ಹಣ ನೀಡುವುದಾಗಿ ಮಹಿಳೆ ಒಬ್ಬರಿಗೆ ಆಮಿಷವೊಡ್ಡಿದ್ದ ಎಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಇಂತಹ ವದಂತಿಗಳನ್ನು ಸಾರ್ವಜನಿಕರು ನಂಬಬಾರದು ಎಂದು ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ನಗರದ ಮೆಟ್ರೋ ನಿಲ್ದಾಣಗಳಲ್ಲಿ ಸಾಕಷ್ಟು ಬಿಗಿಭದ್ರತೆಯಿದೆ. ಮೆಟ್ರೋ ಭದ್ರತಾ ಸಿಬ್ಬಂದಿ ಜತೆ ನಗರ ಪೊಲೀಸರು ಕೂಡ ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಭದ್ರತೆ ವಿಚಾರದಲ್ಲಿ ಹೆಚ್ಚಿನ ನಿಗಾ ವಹಿಸಿ ಅಲರ್ಟ್‌ ಆಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಹೇಳಿದರು.

ರಿಯಾಜ್‌ ಬಗ್ಗೆ ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾಗುತ್ತಿರುವುದನ್ನು ನೋಡಿದ ಕೂಡಲೆ ಅವರಿಗೆ ತಿಳಿಸಿದೆ. ನಂತರ ಡಿಸಿಪಿ ಅವರಿಗೆ ದೂರು ನೀಡಲಾಗಿದೆ. ಸತ್ಯಾಸತ್ಯತೆ ಪರಿಶೀಲಿಸದೆ ಒಬ್ಬ ವ್ಯಕ್ತಿ ಬಗ್ಗೆ ಅಪಪ್ರಚಾರ ಮಾಡುವ ಹಕ್ಕು ಯಾವ ಮಾಧ್ಯಮಕ್ಕೂ ಇಲ್ಲ.
-ಮೊಹಮ್ಮದ್‌ ಸೈಫ‌ುಲ್ಲಾ, ರಿಯಾಜ್‌ ಸ್ನೇಹಿತರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.