ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ;ನಾಲ್ವರ ದುರ್ಮರಣ

Team Udayavani, Sep 9, 2017, 6:20 AM IST

170908kpn56.jpg

ಬೆಂಗಳೂರು: ಹುಬ್ಬೆ ಮಳೆಯ ಆರ್ಭಟಕ್ಕೆ “ಸಿಲಿಕಾನ್‌ ಸಿಟಿ’ ತತ್ತರಿಸಿ ಹೋಗಿದ್ದು, ಶುಕ್ರವಾರ ರಾತ್ರಿ ಮಿನರ್ವ ವೃತ್ತದ ಬಳಿ ಕಾರಿನ ಮೇಲೆ ಮರ ಬಿದ್ದು ಒಂದೇ ಕುಟುಂಬದ ಮೂವರು ಅಸುನೀಗಿದ್ದಾರೆ. ಶೇಷಾದ್ರಿಪುರಂನ ಅಂಡರ್‌ಪಾಸ್‌ ಬಳಿ ಮೋರಿಯಲ್ಲಿ ಯುವಕನೊಬ್ಬ ಕೊಚ್ಚಿಹೋಗಿರುವುದಾಗಿ ಶಂಕಿಸಲಾಗಿದ್ದು, ಮೃತದೇಹಕ್ಕಾಗಿ ಹುಡುಕಾಟ ಆರಂಭವಾಗಿದೆ.

ಭಾರಿ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ನಗರದ ವಿವಿಧೆಡೆ 30ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಜನ ತೊಂದರೆ ಅನುಭವಿಸುವಂತಾಯಿತು. ಇದೇ ವೇಳೆ, ರಾಜ್ಯದ ಇತರೆಡೆಯೂ ಮಳೆಯಾಗಿದ್ದು, ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ 6 ಮಂದಿ ಅಸುನೀಗಿದ್ದಾರೆ.

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿತ್ತು: ಶುಕ್ರವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರಾಜಧಾನಿಯ ಜನಜೀವನ ಅಸ್ತವ್ಯಸ್ತಗೊಂಡಿತು. ಜೆ.ಸಿ.ರಸ್ತೆಯ ಮಿನರ್ವ ವೃತ್ತದಲ್ಲಿ ನಿಲುಗಡೆ ಮಾಡಿದ್ದ ಎಸ್ಟೀಮ್‌ (ಕೆಎ- 02 ಎನ್‌-0771) ಕಾರಿನ ಮೇಲೆ ಬೃಹದಾಕಾರದ ಮರ ಬಿದ್ದು, ಮರದಡಿ ಸಿಲುಕಿದ ಕಾರಿನಿಂದ ಹೊರಬರಲಾಗದೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಸುಮನಹಳ್ಳಿಯ ದಂಪತಿ ರಮೇಶ್‌ ಮತ್ತು ಭಾರತಿ ಹಾಗೂ ಆಕೆಯ ಸಹೋದರ ಜಗದೀಶ್‌ ಎಂದು ಗುರುತಿಸಲಾಗಿದೆ. ಮೂಲತಃ ತುಮಕೂರಿನವರಾದ ರಮೇಶ್‌, ಶಿವಮೊಗ್ಗದ ಭಾರತಿ ಅವರನ್ನು ವಿವಾಹವಾಗಿದ್ದರು. ಕಾರು ರಿಪೇರಿ ಹಿನ್ನೆಲೆಯಲ್ಲಿ ಸಂಜೆ ಜೆ.ಸಿ.ನಗರದ ಮಿನರ್ವ ವೃತ್ತದ ಬಳಿ ಇರುವ ಗ್ಯಾರೇಜ್‌ಗೆ ಬಂದಿದ್ದರು. ರಿಪೇರಿ ನಂತರ ಮನೆಗೆ ಹಿಂತಿರುಗುವಾಗ ಈ ದುರ್ಘ‌ಟನೆ ಸಂಭವಿಸಿದೆ.

ಮೃತ ಮೂವರೂ ಕಾರಿನ ಹಿಂಬದಿಯಲ್ಲಿ ಕುಳಿತಿದ್ದರು. ಮುಂಭಾಗದಲ್ಲಿ ದಂಪತಿಯ ಪುತ್ರ ರೋಹಿತ್‌ ಕಾರು ಚಾಲನೆ ಮಾಡುತ್ತಿದ್ದರು. ರೋಹಿತ್‌ಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭಾರತಿ ಅವರು ಹೆಬ್ಟಾಳ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮೇಶ್‌ ಸಿದ್ಧ ಉಡುಪು ಕಾರ್ಖಾನೆಯೊಂದರ ನೌಕರರಾಗಿದ್ದರು. ಮಳೆಯ ಕಾರಣ ಕಾರನ್ನು ನಿಧಾನವಾಗಿ ಚಾಲನೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಕಲಾಸಿಪಾಳ್ಯ ಠಾಣೆ ಪೊಲೀಸರು, ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೊಚ್ಚಿಹೋದ ಯುವಕ?
ಇದೇ ವೇಳೆ, ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ ಬಳಿ ಚರಂಡಿಯಲ್ಲಿ ಬಿದ್ದು ವರುಣ್‌ (18) ಎಂಬ ಯುವಕ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ವಯ್ನಾಲಿಕಾವಲ್‌ ನಿವಾಸಿ ವರುಣ್‌, ತನ್ನ ಮೂವರು ಸ್ನೇಹಿತರೊಂದಿಗೆ ಅಂಡರ್‌ಪಾಸ್‌ನಲ್ಲಿ ನಡೆದುಕೊಂಡು ಬರುತ್ತಿದ್ದರು. ಪಕ್ಕದಲ್ಲಿ ಕಾಮಗಾರಿ ನಡೆಯುತ್ತಿದ್ದು, ಚಪ್ಪಡಿಕಲ್ಲನ್ನು ತೆರೆದಿಡಲಾಗಿತ್ತು. ಇದನ್ನು ಗಮನಿಸದ ವರುಣ್‌, ಚರಂಡಿಯಲ್ಲಿ ಆಯತಪ್ಪಿ ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಮೇಯರ್‌ ಜಿ.ಪದ್ಮಾವತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತರೆಡೆ 6 ಸಾವು
ಇದೇ ವೇಳೆ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವೆಡೆಯೂ ಉತ್ತಮ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ 6 ಮಂದಿ ಅಸುನೀಗಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿಯಲ್ಲಿ ಮನೆಯ ಗೋಡೆ ಕುಸಿದು ರಾಚಪ್ಪ ಬಡಿಗೇರ (65) ಹಾಗೂ ಅವರ ಪತ್ನಿ ಸಿದ್ದವ್ವ ಬಡಿಗೇರ (60), ಜೇವೂರ ಗ್ರಾಮದಲ್ಲಿ ಕರಿಬಸಪ್ಪ ಆಕಳವಾಡಿ (68) ಹಾಗೂ ಅವರ ಪತ್ನಿ ಇಂದಿರಾಬಾಯಿ ಆಕಳವಾಡಿ (63) ಎಂಬ ವೃದ್ಧ ದಂಪತಿಗಳು ಅಸುನೀಗಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಓಜುಗುಂಟೆ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಭೂತಣ್ಣ (50) ಎಂಬುವರು ಮೃತಪಟ್ಟಿದ್ದಾರೆ. ಅವರ ಪತ್ನಿ ಪುಟ್ಟಮ್ಮ ಹಾಗೂ ಮಗ ಭೂತರಾಜ ತೀವ್ರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ನಿಂಬಲಗುಂದಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಹೊಲದಲ್ಲಿ ಕುರಿ ಕಾಯ್ದುಕೊಂಡು ರಾತ್ರಿ ಮರಳಿ ಮನೆಗೆ ಮರಳುತ್ತಿದ್ದಾಗ ಸಿಡಿಲು ಬಡಿದು ಶೇಖಪ್ಪ ಸುಂಕದ (38) ಎಂಬುವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ.

ಇಂದೂ ಮಳೆ ಸಂಭವ
ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.