ಫೋರ್ಟಿಸ್‌ನಿಂದ ಹೆಪಟೈಟಿಸ್‌ ಜಾಗೃತಿ ಅಭಿಯಾನ


Team Udayavani, Aug 21, 2018, 12:01 PM IST

fortis-logo.jpg

ಬೆಂಗಳೂರು: ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಕನ್ನಿಂಗ್‌ಹ್ಯಾಂ ರಸ್ತೆಯ ಫೋರ್ಟಿಸ್‌ ಆಸ್ಪತ್ರೆ, ಹೆಪಟೈಟಿಸ್‌ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಂಡಿತ್ತು. ಈ ಅಭಿಯಾನದ ಅಂಗವಾಗಿ ಆಸ್ಪತ್ರೆಯಿಂದ 100 ಮಂದಿ ಪೊಲೀಸ್‌ ಸಿಬ್ಬಂದಿಗೆ ಹೆಪಟೈಟಿಸ್‌ ಲಸಿಕೆಯ ಮೂರು ಶಾಟ್‌ಗಳನ್ನು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನೀಡಲಾಯಿತು.

ಆಸ್ಪತ್ರೆಯ ಪಚನಾಂಗ ರೋಗಶಾಸ್ತ್ರ ಮತ್ತು ಪಿತ್ತಜನಕಾಂಗ ರೋಗಶಾಸ್ತ್ರ ಸಲಹಾ ತಜ್ಞ ಡಾ. ಶ್ರೀನಿವಾಸ ಡಿ. ಅವರು ಮಾತನಾಡಿ, ಹೈಪಟೈಟಿಸ್‌ ಸದ್ದಿಲ್ಲದೆ ಕೊಲ್ಲುವ ರೋಗವಾಗಿದೆ. ಅಲ್ಲದೆ, ಬಹಳ ಬೇಗನೆ ಹರಡುವ ರೋಗವಾಗಿದೆ. ಅತ್ಯಂತ ಕನಿಷ್ಟ ಪ್ರಮಾಣದ ರಕ್ತದಿಂದಲೇ ರೋಗದ ಸೋಂಕು ಹರಡಬಹುದೆಂದು ತಿಳಿದುಬಂದಿದೆ ಎಂದರು.

ಭಾರತದಲ್ಲಿ ಈ ಕಾಯಿಲೆ ಹೆಚ್ಚಾಗಿ ಕಂಡುಬಂದರೂ ಹೆಪಟೈಟಿಸ್‌ ಲಸಿಕೆ ಕುರಿತು ಜಾಗೃತಿ ಕೊರತೆ ಇದೆ. ಕರ್ತವ್ಯ ಮತ್ತು ವ್ಯಸ್ಥ ಜೀವನ ಶೈಲಿಗಳ ನಡುವೆ ಜನರು ಆರೋಗ್ಯ ತಪಾಸಣೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ನಿರ್ಲಕ್ಷಿಸುತ್ತಾರೆ. ಇದರಿಂದ ಗಂಭೀರ ಪಿತ್ತಜನಕಾಂಗ ಸಂಬಂಧಿ ರೋಗಗಳಾದ ಸಿರಾಸಿಸ್‌ ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು. ರೋಗ ಹರಡುವುದನ್ನು ತಡೆಯಲು ಹೆಚ್ಚಿನ ಗಮನಹರಿಸಬೇಕಾಗಿದೆ.

ನಮ್ಮ ಆಸ್ಪತ್ರೆಯಲ್ಲಿ ಈ ಬಗ್ಗೆ ಕೈಲಾದಷ್ಟು ಅತ್ಯುತ್ತಮ ಸೇವೆಯನ್ನು ಸಮುದಾಯಕ್ಕೆ ನೀಡಲು ಇಚ್ಛಿಸುತ್ತೇವೆ. ಈ ಅಭಿಯಾನದ ಮೂಲಕ ರೋಗದ ಹಾಜರಿ ಮತ್ತು ಅದನ್ನು ತಡೆಯುವ ಬಗ್ಗೆ ಜನರಿಗೆ ಜಾಗೃತಿ ನೀಡಲು ಬದ್ಧವಾಗಿದ್ದೇವೆ. ದೇಶದಲ್ಲಿ 52 ದಶಲಕ್ಷ ಜನರ ಮೇಲೆ ಪರಿಣಾಮ ಬೀರಿದ್ದು, ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ ಎಂದು ಅವರು ವಿವರಿಸಿದರು.

ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಮಾತನಾಡಿ, ಭಾರತದಲ್ಲಿ ದೊಡ್ಡ ಸಂಖ್ಯೆಯ ಹೆಪಟೈಟಿಸ್‌ ಪ್ರಕರಣಗಳು ಇದ್ದು, ಈ ರೋಗ ಹರಡುವುದನ್ನು ತಡೆಯುವುದಕ್ಕಾಗಿ ತಕ್ಷಣ ಕ್ರಮ ಕೈಗೊಳ್ಳಬೇಕಿದೆ. ಈ ರೋಗ ಕುರಿತು ಫೋರ್ಟಿಸ್‌ ಜಾಗೃತಿ ಅಭಿಯಾನದಲ್ಲಿ ಸಹಯೋಗ ಹೊಂದಲು ಹೆಪಟೈಟಿಸ್‌ ಲಸಿಕೆ ಪ್ರಾಮುಖ್ಯತೆ ಕುರಿತು ನಾಗರಿಕರಲ್ಲಿ ಎಚ್ಚರಿಕೆ ಮೂಡಿಸಲು ನಾವು ಹರ್ಷಿಸುತ್ತೇವೆ ಎಂದರು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.