ಅರ್ಜಿದಾರನಿಗೆ 11ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
Team Udayavani, Jan 29, 2022, 12:34 PM IST
ಬೆಂಗಳೂರು: ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರ ವಿರುದ್ಧ ವೇ ಸಿವಿಲ್ ನ್ಯಾಯಾಂಗನಿಂದನೆ ದಾವೆ ಹೂಡಿದ್ದ ಉಡುಪಿ ಜಿಲ್ಲೆ ಕಾರ್ಕಳ ಮೂಲದಜಿತೇಂದ್ರ ಕುಮಾರ್ ರಾಜನ್ ಎಂಬ ವ್ಯಕ್ತಿಗೆ ಬರೋಬ್ಬರಿ 11 ಲಕ್ಷ ರೂ. ದಂಡವಿಧಿಸಲಾಗಿದೆ.
ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಎಂ.ಜಿ. ಉಮಾ ಅವರಿದ್ದ ವಿಭಾಗೀಯ ನ್ಯಾಯಪೀಠ ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.
ಜಿತೇಂದ್ರ ಕುಮಾರ್ ರಾಜನ್ ಪ್ರತ್ಯೇಕ 11 ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಸಲ್ಲಿಸಿದ್ದರು. ಅದರಂತೆ ಒಂದೊಂದು ಅರ್ಜಿಗೆ ತಲಾ 1 ಲಕ್ಷ ರೂ.ಗಳಂತೆ ಒಟ್ಟು 11 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತವನ್ನು 8 ವಾರಗಳಲ್ಲಿ ವಕೀಲರ ಪರಿಷತ್ತಿಗೆ ಪಾವತಿಸಬೇಕು. ನಿಗದಿತ ಅವಧಿಯಲ್ಲಿ ದಂಡದ ಮೊತ್ತ ಪಾವತಿಸದಿದ್ದರೆ ಜಿಲ್ಲಾಧಿಕಾರಿಗಳು ದಂಡ ವಸೂಲಿಗೆ ಕ್ರಮಕೈಗೊಳ್ಳಬೇಕು. ದಂಡದ ಮೊತ್ತ ಪಾವತಿಯಾಗದಿದ್ದರೆ ವಕೀಲರ ಪರಿಷತ್ತು ಅರ್ಜಿದಾರರ ವಿರುದ್ಧ ನ್ಯಾಯಾಂಗನಿಂದನೆ ದಾವೆ ಹೂಡಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ
ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು ಅಪರಾಧ ನಡೆಸಿದರೆ ಕ್ಷಮೆ ಇಲ್ಲ : ಗೃಹ ಸಚಿವ ಎಚ್ಚರಿಕೆ
ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್
ಭಾರಿ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ
ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ