ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Feb 6, 2019, 6:40 AM IST
ಬೆಂಗಳೂರು: ಸೋಲದೇವನಹಳ್ಳಿಯ ವಕೀಲ ಅಮಿತ್ ಕೇಶವಮೂರ್ತಿ ಶೂಟೌಟ್ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಅವರನ್ನು ನೇಮಕ ಮಾಡಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಕುರಿತ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಮಂಗಳವಾರ ತೀರ್ಪು ಕಾಯ್ದಿರಿಸಿತು.
ಆರೋಪಿ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ತೀರ್ಪು ಕಾಯ್ದಿರಿಸುವುದಾಗಿ ಹೇಳಿತು. ವಿಚಾರಣೆ ವೇಳೆ ಮೇಲ್ಮನವಿದಾರರ ಪರ ವಕೀಲರು ವಾದ ಮಂಡಿಸಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ನೇಮಕ ಮಾಡುವಾಗ ಸರ್ಕಾರ ಮಾರ್ಗಸೂಚಿಗಳನ್ನು ಪಾಲಿಸಿಲ್ಲ. ಹೀಗಾಗಿ ಅವರನ್ನು ಬದಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.
ನಗರದ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 2017ರ ಜ.13ರಂದು ನಡೆದ ಶೂಟೌಟ್‌ನಲ್ಲಿ ವಕೀಲ ಅಮಿತ್ ಕೇಶವಮೂರ್ತಿ ಅವರನ್ನು ಹತ್ಯೆ ಮಾಡಲಾಗಿತ್ತು. ಸಿ.ಎಚ್. ಹನುಮಂತರಾಯ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಆರೋಪಿಗಳಾದ ರಾಜೇಶ್ ಹಾಗೂ ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು 2018ರ ಮಾ.1ರಂದು ಹೈಕೋರ್ಟ್ ಏಕಸದಸ್ಯಪೀಠ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿಗಳು ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕ್ಷೇತ್ರದ ಮತದಾರರು ನನ್ನ ಜೊತೆ ಇದ್ದಾರೆ, ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಮುನವಳ್ಳಿ
ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಚಾರ್ಮಾಡಿ ಘಾಟ್: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ
ಮರೆಯಾದ ಯಕ್ಷಗಾನ ರಂಗದ ಪರಿಪೂರ್ಣ ಪೋಷಕ ಪಾತ್ರಧಾರಿ ಜಂಬೂರು ರಾಮಚಂದ್ರ ಶಾನುಭೋಗ್
ವ್ಯಾಲೆಂಟೈನ್ಸ್ ಡೇ ಬದಲು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಿ: ಪತ್ರ ವೈರಲ್