ಅವತಿಂಕಾ ಪಾತ್ರಕ್ಕೆ ಡಬ್ಬಿಂಗ್ ಮಾಡಿಸದಂತೆ ಹೈ ನಿರ್ದೇಶನ
Team Udayavani, Jun 6, 2017, 12:42 PM IST
ಬೆಂಗಳೂರು: “ರಾಜು ಕನ್ನಡ ಮೀಡಿಯಂ’ ಚಿತ್ರದ ನಟಿ ಅವಂತಿಕಾ ಶೆಟ್ಟಿ ಅವರ ಪಾತ್ರಕ್ಕೆ ಬೇರೊಬ್ಬರಿಂದ ಡಬ್ಬಿಂಗ್ ಮಾಡಿಸದಂತೆ ಚಿತ್ರದ ನಿರ್ಮಾಪಕರಿಗೆ ಸೋಮವಾರ ಹೈಕೋರ್ಟ್ ನಿರ್ದೇಶನ ನೀಡಿದೆ.
ಚಿತ್ರದ ನಿರ್ಮಾಪಕರು ತಮ್ಮ ಪಾತ್ರಕ್ಕೆ ಮೂರನೇ ವ್ಯಕ್ತಿಯಿಂದ ಡಬ್ಬಿಂಗ್ ಮಾಡಿಸದಂತೆ ಆದೇಶಿಸಬೇಕು ಎಂದು ಅವಂತಿಕಾ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ಪಾತ್ರಕ್ಕೆ ಡಬ್ಬಿಂಗ್ ಮಾಡಿಸದಂತೆ ನಿರ್ದೇಶನ ನೀಡಿತು.
ಈ ಬಗ್ಗೆ ಚಿತ್ರ ನಿರ್ಮಾಪಕರು ಮುಚ್ಚಳಿಕೆ ಪತ್ರ ನೀಡುವಂತೆಯೂ ತಾಕೀತು ಮಾಡಿತು. ನಟಿಯ ಅರ್ಜಿ ಬಗ್ಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿ ಚಿತ್ರ ನಿರ್ಮಾಕಪರಿಗೆ ಸೂಚಿಸಿ, ಜೂ.21ಕ್ಕೆ ವಿಚಾರಣೆ ಮುಂದೂಡಿದೆ. ಅವತಿಂಕಾ ಶೆಟ್ಟಿ ಪರ ವಕೀಲರು ವಾದಿಸಿ, ರಾಜು ಕನ್ನಡ ಮೀಡಿಯಂ ಚಿತ್ರದಲ್ಲಿ ನಟಿಸುವ ಸಂಬಂಧ ಚಿತ್ರದ ನಿರ್ಮಾಪಕ ಹಾಗೂ ತಮ್ಮ ಕಕ್ಷಿದಾರರ ನಡುವೆ 14 ಲಕ್ಷ ರೂ. ಸಂಭಾವನೆಗೆ ಒಪ್ಪಂದವಾಗಿದೆ.
ಆದರೆ ಚಿತ್ರೀಕರಣದ ಕೊನೆಯ ಹಂತದಲ್ಲಿ, ನಟಿಯನ್ನು ಕಡೆಗಣಿಸಿ ಅವರ ಪಾತ್ರಕ್ಕೆ ಬೇರೊಬ್ಬರಿಂದ ಡಬ್ಬಿಂಗ್ ಮಾಡಿಸಲಾಗುತ್ತಿದೆ. ಇದರಿಂದ ತಮ್ಮ ಕಕ್ಷಿದಾರರ ವೃತ್ತಿಜೀವನಕ್ಕೆ ತೊಂದರೆಯಾಗಲಿದೆ. ಹೀಗಾಗಿ ಅವರ ಪಾತ್ರದ ಡಬ್ಬಿಂಗ್ ನಡೆಸದಂತೆ ತಡೆ ನೀಡಬೇಕು ಎಂದು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ