ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಹೈ ಸೂಚನೆ
Team Udayavani, Jun 12, 2018, 11:43 AM IST
ಬೆಂಗಳೂರು: ಬಾಲಾಪರಾಧಿಗಳ ನ್ಯಾಯ ಕಾಯಿದೆ (2000) ಮಾರ್ಗಸೂಚಿಗಳ ಅನುಷ್ಠಾನ, ಬಾಲಾಪರಾಧಿಗಳ ಹಕ್ಕುಗಳ ರಕ್ಷಣೆಗೆ ಇದುವರೆಗೂ ಕೈಗೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಹೈಕೋರ್ಟ್ ರಿಜಿಸ್ಟ್ರಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ನಡೆಸಿತು.
ವಿಚಾರಣೆ ವೇಳೆ ಹಾಜರಿದ್ದ ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ, ಬಾಲಾಪರಾಧಿಗಳ ಹಕ್ಕುಗಳ ರಕ್ಷಣೆ, ಕಾಯಿದೆಯ ಮಾರ್ಗಸೂಚಿಗಳ ಅನುಷ್ಠಾನ ಪರಿಶೀಲನೆ ಬಾಲಾಪರಾಧಿಗಳ ನ್ಯಾಯ ಸಮಿತಿ ರಚಿಸಲಾಗಿದ್ದು, ಸಭೆಗಳನ್ನು ನಡೆಸಲಾಗುತ್ತಿದೆ.
ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತು ಮುಂದಿನ ವಿಚಾರಣೆ ವೇಳೆ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿ ಜುಲೈ 4ಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ