ಕೋವಿಡ್ ಸೋಂಕು ಹಿನ್ನೆಲೆ- ಪರಪ್ಪನ ಅಗ್ರಹಾರಕ್ಕೆ ಗೃಹ ಸಚಿವ ಬಸವರಾಜ ಭೇಟಿ

ಕಾರಾಗೃಹದಲ್ಲಿ ಕೋವಿಡ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಿ- ಬೊಮ್ಮಾಯಿ ಸೂಚನೆ

Team Udayavani, Apr 29, 2021, 9:10 PM IST

88978hjhjhk

ಬೆಂಗಳೂರು : ರಾಜ್ಯದ ಕಾರಾಗೃಹಗಳಲ್ಲಿ ಕೋವಿಡ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದರು.

ರಾಜ್ಯದ ಕಾರಾಗೃಹಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ಗುರುವಾರ  ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಸಚಿವರು, ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳು ಕುರಿತು ಪರಿಶೀಲನೆ ನಡೆಸಿದರು.

ಕಾರಾಗೃಹಕ್ಕೆ ಭೇಟಿ ನೀಡಿದ ಬಳಿಕ ಕಾರಾಗೃಹದ ಆಸ್ಪತ್ರೆಗೆ ಭೇಟಿ ನೀಡಿದರು‌.  100 ಹಾಸಿಗೆಯ ಆಸ್ಪತ್ರೆಯಲ್ಲಿನ ವೈದ್ಯಕೀಯ ವ್ಯವಸ್ಥೆಗಳನ್ನು ಅವಲೋಕಿಸಿದರು. ಕಾರಾಗೃಹದ ವೈದ್ಯಾಧಿಕಾರಿಗಳಿಂದ ಅಲ್ಲಿನ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆಗಳ ಕುರಿತು ಮಾಹಿತಿ ಪಡೆದರು. ಸೋಂಕು  ಕಾರಾಗೃಹದಲ್ಲಿನ ಇತರ ಕೈದಿಗಳಿಗೆ ಹರಡದಂತೆ ಕಟ್ಟೆಚ್ಚರವಹಿಸುವಂತೆ ವೈದ್ಯಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ನಂತರ ಕಾರಾಗೃಹದಲ್ಲಿನ ಬಾನುಲಿ ಕೇಂದ್ರಕ್ಕೆ ಭೇಟಿ ನೀಡಿದರು.  ಈ ಸಂದರ್ಭದಲ್ಲಿ ಬಾನೂಲಿ ಮೂಲಕ ಕಾರಾಗೃಹದ ಎಲ್ಲ ಕೈದಿಗಳನ್ನು ಉದ್ದೇಶಿಸಿ ಮಾತನಾಡಿದರು.  ಕೋವಿಡ್ ಎರಡನೆಯ ಅಲೆಯ ವಿರುದ್ಧ ನಮ್ಮ ಹೋರಾಟ ಸಾಗುತ್ತಿದೆ.  ಈ ಸೋಂಕು ತಗುಲದಂತೆ ಮುನ್ನೆಚ್ವರಿಕೆ ವಹಿಸಿ ಎಂದು ಅವರು ಕೈದಿಗಳಿಗೆ  ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕೈದಿಗಳ ಜತೆ ಸಮಾಲೋಚನೆ ನಡೆಸಿದರು.  ಅವರ ಅಹವಾಲುಗಳನ್ನು ಆಲಿಸಿದರು. ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡುತ್ತಿರುವ ಕುರಿತು ಕೈದಿಗಳಿಗೆ ಸಚಿವರು ಮಾಹಿತಿ ನೀಡಿದರು.  ಕೈದಿಗಳ ಅಹವಾಲುಗಳನ್ನು ಆಲಿಸಿ ಅವುಗಳನ್ನು ಬಗೆಹರಿಸುವ ಸಂಬಂಧ ಮಂಡಳಿಯೊಂದನ್ನು ರಚಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ರಾಜ್ಯದಲ್ಲಿ ಒಟ್ಟು 49 ಕಾರಾಗೃಹ ಗಳಿವೆ.  ಅವುಗಳಲ್ಲಿ 240 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ.  ಕೋವಿಡ್ ರೋಗ ಲಕ್ಷಣಗಳು ಕಂಡುಬಂದ ಕೈದಿಗಳನ್ನು ತಕ್ಷಣವೇ ತಪಾಸಣೆಗಳ ಪಡಿಸಲಾಗುತ್ತಿದೆ. ಸೋಂಕು ತಗುಲಿರುವ ಕೈದಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೋವಿಡ್ ನಿಂದ ಗುಣಮುಖರಾದ ನಂತರವೇ ಅವರನ್ನು ಕೇಂದ್ರ ಕಾರಾಗ್ರಹಕ್ಕೆ ಕರೆಸಿಕೊಡಲಾಗುತ್ತಿದೆ.  ಹೊಸ ಕೈದಿಗಳು ಕಾರಾಗ್ರಹಕ್ಕೆ ಬಂದರೆ ಅವರನ್ನು 14 ದಿನಗಳ ಕಾಲ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತಿದೆ. ನಂತರ ಅವರನ್ನು ಆರ್ ಟಿ ಪಿ ಸಿ ಆರ್ ಟೆಸ್ಟಿಗೆ ಒಳಪಡಿಸಲಾಗುತ್ತದೆ.  ಟೆಸ್ಟ್ನಲ್ಲಿ ನೆಗೆಟಿವ್ ವರದಿ ಬಂದ ನಂತರವಷ್ಟೇ ಅವರಿಗೆ ಕಾರಾಗೃಹ ದೊಳಗೆ  ಪ್ರವೇಶ ಅವಕಾಶ ಕಲ್ಪಿಸಲಾಗುತ್ತಿದೆ. ಈ ರೀತಿ ಎಲ್ಲ ಕಾರಾಗೃಹಗಳಲ್ಲಿ ಕೋವಿಡ್ ವಿಚಾರವಾಗಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ವಿವರಿಸಿದರು.

ಕಾರಾಗೃಹ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೋವಿಡ್ ವಿರುದ್ಧ ಹೋರಾಟಕ್ಕೆ 5 ಕೋಟಿ : ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ ಕೋವಿಡ್  ಹೋರಾಟಕ್ಕೆ ಬೇಕಾದ ಅಗತ್ಯ ವೈದ್ಯಕೀಯ ಉಪಕರಣ ಮತ್ತು ಸೋಂಕು ನಿವಾರಕ ಔಷಧೋಪಚಾರಗಳಿಗಾಗಿ  5 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಸಿದ್ದಪಡಿಸಲಾಗುತ್ತಿದೆ. ಎರಡು ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಐದು ಕೋಟಿಗೆ ಹೆಚ್ಚಿಸಲಾಗಿದೆ.  ಎಸ್ ಡಿ ಆರ್ ಎಫ್ ನಿಧಿ ಅಡಿ ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಬಸವರಾಜ್ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.