ತೋಟಗಾರಿಕಾ ವಿದ್ಯಾರ್ಥಿಗಳ ಧರಣಿ

Team Udayavani, Jun 28, 2018, 3:19 PM IST

blore-2.jpg

ಬೆಂಗಳೂರು: ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ಖಾಸಗಿ ಕಾಲೇಜುಗಳ ಆರಂಭಕ್ಕೆ ಒಪ್ಪಿಗೆ ಸೂಚಿಸಿರುವ ಹಾಗೂ ತೋಟಗಾರಿಕಾ ಸಹಾಯಕರಿಗೆ ಸಹಾ ಯಕ ತೋಟಗಾರಿಕಾ ಅಧಿಕಾರಿಯಾಗಿ ಮುಂಬಡ್ತಿ ನೀಡುತ್ತಿರುವುದನ್ನು ವಿರೋಧಿಸಿ ತೋಟಗಾರಿಕಾ ವಿಶ್ವವಿದ್ಯಾನಿಲಯ ವ್ಯಾಪ್ತಿಯ ರಾಜ್ಯದ 10 ಕಾಲೇಜುಗಳ ವಿದ್ಯಾರ್ಥಿಗಳು ಜೂ.27ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ನಗರದ ವಿದ್ಯಾರಣ್ಯಪುರದಲ್ಲಿರುವ ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಆರಂಭಿಸಿದರು. 

ಪ್ರತಿಭಟನಾನಿರತರನ್ನು ಉದ್ದೇಶಿಸಿ ವಿದ್ಯಾರ್ಥಿ ಎಸ್‌.ಶಿವಪ್ರಸಾದ್‌ ಮಾತನಾಡಿ, ಖಾಸಗಿ ತೋಟಗಾರಿಕಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲ ಸೌಕರ್ಯಗಳ ಕೊರತೆಯಿದೆ. ಅಲ್ಲದೆ, ಕರ್ನಾಟಕ ಕೃಷಿ ವಿಶ್ವವಿದ್ಯಾಲಯಗಳ ಕಾಯ್ದೆ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳ ಪರೀಕ್ಷಾ ನೀತಿಯನ್ನು ಖಾಸಗಿ ಕಾಲೇಜುಗಳು ಅಳವಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಮಾರ್ಚ್‌ ತಿಂಗಳಲ್ಲಿ ನಡೆದ ತೊಟಗಾರಿಕಾ ವಿಶ್ವವಿದ್ಯಾಲಯದ ಮಂಡಳಿಯ 43ನೇ ಸಭೆಯಲ್ಲಿ ಮೂರು ಹೊಸ ಖಾಸಗಿ ಕಾಲೇಜುಗಳ ಸಂಯೋಜನೆಗೆ ನೀಡಿರುವ ಒಪ್ಪಿಗೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. 
 
ತೋಟಗಾರಿಕಾ ಇಲಾಖೆಯಲ್ಲಿ ಎಸ್‌ಎಸ್‌ ಎಲ್‌ಸಿ ಅರ್ಹತೆ ಹೊಂದಿರುವ ತೋಟಗಾರಿಕಾ ಸಹಾಯಕರಿಗೆ ಕೇವಲ 3 ಅಥವಾ 5 ವರ್ಷಗಳ ಸೇವಾವಧಿ ಆಧಾರದಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ ಹುದ್ದೆಗೆ ಮುಂಬಡ್ತಿ ನೀಡಲು
ಇಲಾಖೆ ಮುಂದಾಗಿದೆ. ಇದರಿಂದಾಗಿ ವಿಜ್ಞಾನ ವಿಷಯದಲ್ಲಿ ಪದವಿ ಪೂರ್ವ ಶಿಕ್ಷಣ ಪೂರೈಸಿ ತೋಟಗಾರಿಕಾ ವಿಷಯದಲ್ಲಿ 4 ವರ್ಷಗಳ ಸ್ನಾತಕ ಪದವಿ ಪಡೆದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕ ವಾಗುತ್ತದೆ ಎಂದು ಆರೋಪಿ ಸಿದರು. ಬಾಗಲಕೋಟೆಯ ತೋಟಗಾರಿಕಾ ವಿವಿ ಮುಖ್ಯ ಕ್ಯಾಂಪಸ್‌ ನಲ್ಲೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಕುಲಪತಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.