ರಾಜಕೀಯದಿಂದ ಮಾನವೀಯತೆ ನಿರ್ಧಾರ

Team Udayavani, Jul 2, 2018, 11:34 AM IST

blore-3.jpg

ಬೆಂಗಳೂರು: ರಾಜಕೀಯ ಧರ್ಮವು ಮಾನವೀಯತೆಯನ್ನು ನಿರ್ಧರಿಸುವ ಈ ಕಾಲಘಟ್ಟದಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಅವರ ಬರಹಗಳು ಲೇಖಕರಿಗೆ ಮುಖ್ಯವಾಗುತ್ತವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಹೇಳಿದ್ದಾರೆ.

ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಟ್ರಸ್ಟ್‌ನಿಂದ ಭಾನುವಾರ ಭಾರತೀಯ ವಿದ್ಯಾಭವನದಲ್ಲಿ ಹಮ್ಮಿಕೊಂಡಿದ್ದ ಮಾಸ್ತಿ ಪ್ರಶಸ್ತಿ ಹಾಗೂ ಮಾಸ್ತಿ ಕಥಾ-ಕಾದಂಬರಿ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಆಧುನಿಕ ಯುಗದಲ್ಲಿ ರಾಜಕೀಯ ಧರ್ಮವು ಮಾನವೀಯ ಮೌಲ್ಯಗಳನ್ನು ಅಳೆಯುತ್ತಿದೆ. ಬದುಕಿನ ಮೌಲ್ಯಗಳನ್ನು ರಾಜಕಾರಣ ನಿರ್ಧರಿಸುತ್ತಿರುವ ಸಂದರ್ಭದಲ್ಲಿ ಅಂತಃಕರಣ ಪ್ರೀತಿಸುವ ಮಾಸ್ತಿ ಅವರ ಕೃತಿಯಲ್ಲಿರುವ ಪಾತ್ರಗಳು ಬಹು ಮುಖ್ಯವಾಗುತ್ತವೆ. ಮಾಸ್ತಿ ಅವರಿಂದ ಹಾಗೂ ಅವರ ಬರಹಗಳಿಂದ ಇವತ್ತಿನ ಲೇಖಕರು ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.

ಅನ್ಯ ಸಂಸ್ಕೃತಿಯ ಬಗ್ಗೆ ಪ್ರೀತಿ ಮೂಡಿಸಿಕೊಳ್ಳಿ: ಸಾಹಿತಿ ಡಾ.ಕೆ.ವಿ.ತಿರುಮಲೇಶ್‌ ಮಾತನಾಡಿ, ಬೇರೆ ಕಾಲಘಟ್ಟ ಹಾಗೂ ಸಂಸ್ಕೃತಿಗಳನ್ನು ತಿಳಿಯುವುದರಿಂದ ನಮ್ಮನ್ನು ನಾವು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಅನ್ಯ ಸಂಸ್ಕೃತಿಗಳ ಬಗ್ಗೆ ನಮಗೆ ಪರಿಚಯವಿಲ್ಲದಿದ್ದರೆ ನಮ್ಮನ್ನು ನಾವು ಮುಖಾಮುಖೀಯಾಗಲು ಸಾಧ್ಯವಿಲ್ಲ. ವಿಚಾರಗಳನ್ನು ತಿಳಿಯುವ ಕುತೂಹಲ ಬೆಳೆಸಿಕೊಂಡರೆ ಹೊಸ ಪ್ರಪಂಚ ನಮ್ಮದೆರು ತೆರೆದುಕೊಳ್ಳುತ್ತದೆ. ಬೇರೆ ಸಂಸ್ಕೃತಿ, ಬೇರೆ ಕಾಲಘಟ್ಟದ ಬಗ್ಗೆ ತಿಳಿಯುವ ಕುತೂಹಲದಿಂದ ವಿದೇಶಿ ಪಾತ್ರಗಳನ್ನೇ ನನ್ನ ಬರಹಗಳಲ್ಲಿ ಹೆಚ್ಚಾಗಿ ತಂದಿದ್ದೇನೆ.  ಇದರಿಂದ ಬೇರೆ ಭಾಷೆ, ಸಂಸ್ಕೃತಿಗಳ ಬಗ್ಗೆ ಅಭಿಮಾನವೂ ಬೆಳೆದಿದೆ ಎಂದು ತಿಳಿಸಿದರು

 ಮಾಸ್ತಿ ಪ್ರಶಸ್ತಿಯಲ್ಲಿ ಅಪಸ್ವರವಿಲ್ಲ: ವಿಮರ್ಶಕ  ಡಾ.ಸಿ.ಎನ್‌.ರಾಮಚಂದ್ರನ್‌ ಮಾತನಾಡಿ, ಕಳೆದ 25
ವರ್ಷದಿಂದ ನೀಡುತ್ತಿರುವ ಮಾಸ್ತಿ ಪ್ರಶಸ್ತಿ ಆಯ್ಕೆಯಲ್ಲಿ ಇದುವರೆಗೂ ಅಪಸ್ವರ ಎದ್ದಿಲ್ಲ. ಬಹುತೇಕ ದೊಡ್ಡ ಪ್ರಶಸ್ತಿಗಳ ಆಯ್ಕೆ ಹಾಗೂ ಪ್ರದಾನದ ಸಮಾರಂಭದಲ್ಲಿ ಒಡಕಿನ ಮಾತುಗಳು ಕೇಳಿಬರುತ್ತವೆ. ಆದರೆ, ಮಾಸ್ತಿ ಹೆಸರಿನ ಈ ಪ್ರಶಸ್ತಿಯ ಬಗ್ಗೆ ಎಂದಿಗೂ ಭಿನ್ನಾಭಿಪ್ರಾಯಗಳು ಕೇಳಿ ಬಂದಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಇದೇ ಸಂದರ್ಭದಲ್ಲಿ ಡಾ.ಕೆ.ವಿ.ತಿರುಮಲೇಶ್‌, ಡಾ.ಸಿದ್ದಲಿಂಗ ಪಟ್ಟಣ್ಣಶೆಟ್ಟಿ, ಡಾ.ಬಿ.ಎಲ್‌.ವೇಣು, ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಹಾಗೂ ಪ್ರೊ. ಎಂ.ಆರ್‌.ಕಮಲ ಅವರಿಗೆ ತಲಾ 25 ಸಾವಿರ ನಗದು ಒಳಗೊಂಡ ಮಾಸ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್‌.ಎನ್‌.ಸೇತುರಾಂ ಅವರಿಗೆ ಮಾಸ್ತಿ ಕಥಾ ಪುರಸ್ಕಾರ, ತೇಜಸ್ವಿನಿ ಹೆಗಡೆ, ಚೀಮನಹಳ್ಳಿ ರಮೇಶಬಾಬು ಹಾಗೂ ನಿವೇದಿತ ಪ್ರಕಾಶನಕ್ಕೆ ಮಾಸ್ತಿ ಕಾದಂಬರಿ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌, ವಿಮರ್ಶಕರಾದ ಡಾ.ಎಂ.ಎಸ್‌.ಆಶಾದೇವಿ, ಎಸ್‌. ಆರ್‌.ವಿಜಯಶಂಕರ್‌, ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಟ್ರಸ್ಟ್‌ನ ಮಾವಿನಕೆರೆ ರಂಗನಾಥನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.