ಕೊರೊನಾ ಕುಗ್ಗಿದರೆ ಕರಗದ ಹಿಗ್ಗು


Team Udayavani, Mar 12, 2020, 3:09 AM IST

corona

ಬೆಂಗಳೂರು: ನಗರದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಏ.8ರಂದು ನಿಗದಿಯಾಗಿರುವ ಕರಗ ಮಹೋತ್ಸವ ಆಚರಿಸುವುದೋ ಬೇಡವೋ ಎಂಬ ಕುರಿತು ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ಕೊರೊನಾ ಹಾಗೂ ಕಾಲರಾ ರೋಗದ ಪ್ರಕರಣಗಳು ದಾಖಲಾಗುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರಗ ಮಹೋತ್ಸವ ಆಚರಣೆ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬುಧವಾರ ಮೇಯರ್‌ ಎಂ.ಗೌತಮ್‌ಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಸದಸ್ಯರ ತುರ್ತು ಸಭೆ ನಡೆಸಲಾಯಿತು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಕರಗ ಮಹೋತ್ಸವ ಏ.8ಕ್ಕೆ ಪ್ರಾರಂಭವಾಗಿ 9ದಿನಗಳ ಕಾಲ ನಡೆಯಲಿದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಸಂಪೂರ್ಣ ಸ್ವಚ್ಛತೆ ಆದ್ಯತೆ ನೀಡಲಾಗುತ್ತಿದೆ. ನೀರು ಶೇಖರಣೆ ಮಾಡುವ ಟ್ಯಾಂಕರ್‌ಗಳ ಸ್ವಚ್ಛತೆ, ಬ್ಲ್ಯಾಕ್‌ಸ್ಪಾಟ್‌ಗಳ ತೆರವು, ಕರಗ ಮಹೋತ್ಸವ ಸಾಗುವ ರಸ್ತೆಗಳ ಸ್ವಚ್ಛತೆ ಸೇರಿದಂತೆ ಹಲವು ಮುಂಜಾಗ್ರತೆಯ ಬಗ್ಗೆ ಚರ್ಚೆ ಮಾಡಲಾಗಿದೆ.

ಈ ಸಂಬಂಧ ಜಲಮಂಡಳಿ, ಬೆಸ್ಕಾಂ ಸಂಸ್ಥೆಗಳೊಂದಿಗೂ ಚರ್ಚೆ ಮಾಡಲಾಗುವುದು. ಸದ್ಯಕ್ಕೆ ಕರಗ ನಡೆಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಕೊರೊನಾ ವೈರಸ್‌ನ ಭೀತಿ ಇರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನೋಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಸಾಂಪ್ರದಾಯದಂತೆ ಪ್ರತಿ ವರ್ಷ ಕರಗ ಮಹೋತ್ಸವದ ದಿನದಂದೇ ಬಿಬಿಎಂಪಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಗುವುದು. ಈ ಹಿಂದಿನ ವರ್ಷ ಚುನಾವಣೆ ನೀತಿ ಸಂಹಿತೆಯಿಂದ ಆಚರಣೆ ವಿಳಂಬವಾಗಿತ್ತು. ಈ ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಲಭ್ಯತೆ ಹಾಗೂ ಪರಿಸ್ಥಿತಿ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸ ಲಾಗುವುದು ಎಂದು ಮಾಹಿತಿ ನೀಡಿದರು.

ದೇವಾಲಯ, ಸುತ್ತಲ ಸ್ವಚ್ಛತೆ ಪರಿಶೀಲನೆ ಇಂದು: ಮೇಯರ್‌ ಎಂ. ಗೌತಮ್‌ಕುಮಾರ್‌ ಮಾತನಾಡಿ, ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಹಾಗೂ ಕೊರೊನಾ, ಕಾಲರಾದಂತ ರೋಗಗಳಿಂದ “ಮಹೋತ್ಸವ’ಕ್ಕೆ ಅಡ್ಡಿಯಾಗದ ರೀತಿಯಲ್ಲಿ ಮುಂಜಾಗ್ರತೆ ವಹಿಸಲಾಗುವುದು.

ಕರಗ ಭಾವನಾತ್ಮಕ ವಿಚಾರವಾಗಿದ್ದು, ಸುರಕ್ಷತೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತೇವೆ. ಈ ಸಂಬಂಧ ಗುರುವಾರ (ಮಾ.12) ಬೆಳಗ್ಗೆ 7 ಗಂಟೆಗೆ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ ಹಾಗೂ ಕರಗ ಮಹೋತ್ಸವ ಸಾಗುವ ಹಾದಿಯ ಪರಿಶೀಲನೆ ಮಾಡಲಾಗುವುದು ಈ ರಸ್ತೆಗಳಲ್ಲಿ ಕಸ, ರಸ್ತೆಗುಂಡಿ, ಒಳಚರಂಡಿ ನೀರು ಸೋರಿಕೆ ಸೇರಿ ಯಾವುದಾರು ಸಮಸ್ಯೆಗಳಿದ್ದರೆ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಪಿ.ಆರ್‌.ರಮೇಶ್‌ ಮಾತನಾಡಿ, ಸಂದರ್ಭ ನೋಡಿಕೊಂಡು ಮಹೋತ್ಸವದ ಮೆರವಣಿಗೆಗೆ ಯೋಜನೆ ರೂಪಿಸಲಾಗುವುದು. ಕೊರೊನಾ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾದರೆ ಅಥವಾ ಪರಿಸ್ಥಿತಿ ಕೈಮೀರಿದರೆ ಮೋಹತ್ಸವವನ್ನು ದೇವಸ್ಥಾನದ ಆವರಣಕ್ಕೆ ಸೀಮಿತಗೊಳಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಚಿಕ್ಕಪೇಟೆ ಶಾಸಕ ಉದಯ್‌ ಗರುಡಾಚಾರ್‌, ಆಡಳಿತ ಪಕ್ಷದ ನಾಯಕ ಮುನೀಂದ್ರಕುಮಾರ್‌, ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌, ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌, ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಕೊರೊನಾಗೆ ಔಷಧ ಇದೆ!: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಭೆ ಸಮಾರಂಭಗಳನ್ನು ಮುಂದೂಡುವಂತೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸೂಚಿಸಿದೆ. ಈ ಮಧ್ಯೆ ಕರಗ ಮಹೋತ್ಸವ ಆಚರಣೆಯ ಸಿದ್ಧತೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ವಿಧಾನ ಪರಿಷತ್‌ ಸದಸ್ಯ ಪಿ.ಆರ್‌.ರಮೇಶ್‌, ಕೊರೊನಾ ವೈರಸ್‌ ಏನು ವಿಶೇಷವಲ್ಲ.

ಕೇರಳದಲ್ಲಿ ಕೊರೊನಾ ಸೋಂಕಿತ ಮಹಿಳೆ ಈಗಾಗಲೇ ಗುಣಮುಖರಾಗಿದ್ದಾರೆ. ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದರೆ ಯಾವುದೇ ತೊಂದರೆ ಇಲ್ಲ. ಕೊರೊನಾ ವೈರಸ್‌ಗೆ ಔಷಧ ಇದೆ ಎಂದು ಹೇಳಿ ಅಚ್ಚರಿ ಮೂಡಿಸಿದರು. ಇದಕ್ಕೆ ಪತ್ರಕರ್ತರು ಔಷಧ ಯಾವುದು ಹೇಳಿ ಎಂದು ಪ್ರಶ್ನಿಸಿದಾಗ, ನಾನು ಹೇಳಿದ್ದು ಆ ರೀತಿ ಅಲ್ಲ ಎಂದು ನುಣುಚಿಕೊಂಡರು.

ಟಾಪ್ ನ್ಯೂಸ್

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು!

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

araga

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಅಧಿಕಾರಿಗಳ ವಿರುದ್ಧ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

ಅಮೃತ ನಗರೋತ್ಥಾನ: ವೈಟ್‌ ಟಾಪಿಂಗ್‌ಗೆ ಗರಿಷ್ಠ ಮೊತ್ತ?

ಅಮೃತ ನಗರೋತ್ಥಾನ: ವೈಟ್‌ ಟಾಪಿಂಗ್‌ಗೆ ಗರಿಷ್ಠ ಮೊತ್ತ?

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ದ್ತಯುಇಕಮನಬವಚಷಱ

ಖರ್ಗೆದ್ವಯರಿಗಾಗಿ ದತ್ತ ದೇಗುಲದಲ್ಲಿ ಪೂಜೆ

ಎರತಯುಇಕಜನಬವಚಷ

ಶಿಕ್ಷಣ ಇಲಾಖೆ ಆದೇಶ ಹಿಂಪಡೆಯಲು ಆಗ್ರಹ

ಯುಇಒಇಉಯತರದಸಅ

ಪ್ರಥಮ ಪ್ರಜೆ ಆಯ್ಕೆಗೆ ಮೀನಮೇಷ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹಗ್ದ್ಗುಯಹಗ

ಪ್ರಧಾನಿ-ಆದಿತ್ಯನಾಥರಿಂದ ಕಾಶಿ ಕ್ಷೇತ್ರ ವಿಶ್ವ  ಪ್ರಸಿ ದ್ಧ : ಡಾ| ಚಂದ್ರಶೇಖರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.