ಕೆ.ಆರ್‌. ಮಾರ್ಕೆಟ್‌ನಲ್ಲಿ ಅಕ್ರಮ ಮಳಿಗೆ: ಹೈ ತರಾಟೆ

Team Udayavani, Mar 27, 2019, 11:43 AM IST

highcourt4

ಬೆಂಗಳೂರು: ಕೃಷ್ಣ ರಾಜೇಂದ್ರ ಮಾರುಕಟ್ಟೆ ಪ್ರದೇಶದ (ಕೆ.ಆರ್‌. ಮಾರ್ಕೆಟ್‌) ಮಾರುಕಟ್ಟೆ ಸಂಕೀರ್ಣದಲ್ಲಿ ಅಕ್ರಮವಾಗಿ ಮಳಿಗೆಗಳನ್ನು ಕಟ್ಟಿದ ಹಾಗೂ ಅಗ್ನಿ ಅವಘಡಗಳು ತಡೆಯಲು ಸುರಕ್ಷಾ ಕ್ರಮಗಳನ್ನು ಕೈಗೊಳ್ಳದಿರುವ ಬಿಬಿಎಂಪಿ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಈ ಕುರಿತು ವಿವರಣೆ ನೀಡಲು ಪಾಲಿಕೆ ಆಯುಕ್ತರಿಗೆ ಬುಲಾವ್‌ ನೀಡಿದೆ.

ಈ ಕುರಿತು ಬೆಂಗಳೂರು ಹೂವು ವ್ಯಾಪಾರಿಗಳ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎಲ್‌. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ವಿಚಾರವಾಗಿ ಪಾಲಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಈ ಬಗ್ಗೆ ವಿವರಣೆ ನೀಡಲು ಬುಧವಾರ (ಮಾ.27) ಖುದ್ದು ಹಾಜರಾಗುವಂತೆ ಆಯುಕ್ತ ಮಂಜುನಾಥ್‌ ಪ್ರಸಾದ್‌ ಅವರಿಗೆ ತಾಕೀತು ಮಾಡಿದೆ.

ಮಾರುಕಟ್ಟೆ ಪ್ರದೇಶದಲ್ಲಿ ಮಳಿಗೆಗಳನ್ನು ನಿರ್ಮಿಸಲು ಮಂಜೂರಾತಿ ಯೋಜನೆ (ಸ್ಯಾಂಕ್ಷನ್‌ ಪ್ಲಾನ್‌) ಎಷ್ಟು, ಅಕ್ರಮವಾಗಿ ಕಟ್ಟಿದ ಮಳಿಗೆಗಳು ಎಷ್ಟು, ಅದಕ್ಕೆ ಅನುಮತಿ ಕೊಟ್ಟಿದ್ದು ಯಾರು, ಅವರ ವಿರುದ್ಧ ಕೈಗೊಂಡ ಕ್ರಮಗಳೇನು, ಅಕ್ರಮ ಮಳಿಗೆಗಳನ್ನು ನೆಲಸಮಗೊಳಿಸಲು ಕೈಗೊಂಡ ಕ್ರಮವೇನು, ಅಲ್ಲದೇ ಈ ಮಾರುಕಟ್ಟೆ ಪ್ರದೇಶದಲ್ಲಿ ಅಗ್ನಿ ಅನಾಹುತಗಳನ್ನು ತಡೆಯಲು ಅಗ್ನಿಶಾಮಕ ಇಲಾಖೆ ಸೂಚಿಸಿದ ಮಾರ್ಗಸೂಚಿಗಳನ್ನು ಇಲ್ಲಿವರೆಗೆ ಯಾಕೆ ಅಳವಡಿಸಿಕೊಂಡಿಲ್ಲ ಬಗ್ಗೆ ಖುದ್ದು ಹಾಜರಾಗಿ ವಿವರಣೆ ನೀಡಲು ಪಾಲಿಕೆ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.

ಅಲ್ಲದೇ ನಗರದ ರಸೆಲ್‌ ಮಾರ್ಕೆಟ್‌, ಮಡಿವಾಳ ಮಾರ್ಕೆಟ್‌ ಸೇರಿದಂತೆ ಬಿಬಿಎಂಪಿ ನಿರ್ವಹಿಸುತ್ತಿರುವ ಇತರೆ ಮಾರುಕಟ್ಟೆಗಳ ನಿರ್ವಹಣೆಯ ಬಗ್ಗೆಯೂ ವಿವರಣೆ ನೀಡುವಂತೆಯೂ ಇದೇ ವೇಳೆ ನ್ಯಾಯಪೀಠ ಸೂಚನೆ ನೀಡಿತು. ಅಲ್ಲದೇ ಕೆ.ಆರ್‌. ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಲಾಗಿರುವ ಎಲ್ಲ ಮಳಿಗೆಗಳನ್ನು ನೆಲಸಮಗೊಳಿಸಬೇಕು ಎಂದು ತಾಕೀತು ಮಾಡಿದೆ.

ಮಾರುಕಟ್ಟೆ ಸಂಪೂರ್ಣ ಮುಚ್ಚಬೇಕಾದೀತು?: ವಿಚಾರಣೆ ವೇಳೆ ಪಾಲಿಕೆ ನಿರ್ಲಕ್ಷ್ಯಕ್ಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸಿ, ಉಳಿದ ಮಳಿಗೆಗಳನ್ನು ಕ್ರಮಬದ್ಧಗೊಳಿಸಬೇಕು. ಈ ಪ್ರದೇಶ ದೇಶದ ಮಾದರಿ ಮಾರುಕಟ್ಟೆ ಪ್ರದೇಶ ಆಗಬೇಕು. ಅಗ್ನಿಶಾಮಕ ಇಲಾಖೆ ಸೂಚಿಸಿದ 19 ಅಂಶಗಳಲ್ಲಿ ಒಂದೂ ಬಿಡದಂತೆ ಕಾರ್ಯಾಗತಗೊಳಿಸಬೇಕು. ಅಲ್ಲಿ ವರೆಗೂ ಮಾರುಕಟ್ಟೆ ಸಂಪೂರ್ಣ ಮುಚ್ಚಬೇಕಾದೀತು? ವಹಿವಾಟು ಸ್ಥಗಿತಗೊಳಿಸಬೇಕಾದೀತು ಎಂದು ಮೌಖೀಕ ಎಚ್ಚರಿಕೆ ನೀಡಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.