ಐಎಂಎ: ಸಂತ್ರಸ್ತರಿಗೆ ಸಿಕ್ಕಿದ್ದು ಬರೀ 19 ಕೋಟಿ

1,381 ಕೋಟಿ ರೂ. ಸಂತ್ರಸ್ತರಿಗೆ ಹಿಂತಿರುಗಿಸಲು ಬಾಕಿ

Team Udayavani, May 17, 2023, 3:34 PM IST

tdy-13

ಬೆಂಗಳೂರು: ಐ ಮಾನಿಟರಿ ಎಡ್ವೈಸರಿ (ಐಎಂಎ) 1,400 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಸಂತ್ರಸ್ತರಿಗೆ ಇದುವರೆಗೆ ಕೇವಲ 19 ಕೋಟಿ ರೂ. ಹಂಚಿಕೆಯಾಗಿದ್ದು, ಇನ್ನೂ ಬರೋಬ್ಬರಿ 1,381 ಕೋಟಿ ರೂ. ಹಿಂತಿರುಗಿಸಲು ಬಾಕಿ ಇದೆ.

ರಾಷ್ಟ್ರ ಮಟ್ಟದಲ್ಲಿ ಭಾರಿ ಸದ್ದು ಮಾಡಿದ್ದ ಐಎಂಎ ವಂಚನೆ ಪ್ರಕರಣದಲ್ಲಿ ಬಹುತೇಕ ಸಂತ್ರಸ್ತರಿಗೆ ಅಸಲು ಹಣವೂ ಸಿಕ್ಕಿಲ್ಲ. ಸಕ್ಷಮ ಪ್ರಾಧಿಕಾರ ರಚನೆಯಾದ ಬಳಿಕ 50 ಸಾವಿರ ರೂ.ಗಿಂತ ಕಡಿಮೆ ಹೂಡಿಕೆ ಮಾಡಿರುವ 6 ಸಾವಿರ ಸಂತ್ರಸ್ತರಿಗೆ 19 ಕೋಟಿ ರೂ. ಸಮನಾಗಿ ಹಂಚಿಕೆಯಾಗಿದೆ. ಐಎಂಎ ವಂಚನೆ ಬೆಳಕಿಗೆ ಬಂದು 4 ವರ್ಷ ಕಳೆದರೂ ಹೂಡಿಕೆ ಮಾಡಿದ ಅಸಲು ಹಣ ಕೈ ಸೇರದ ಹಿನ್ನೆಲೆಯಲ್ಲಿ ಸಂತ್ರಸ್ತರು ನಿರಾಸೆಗೊಳಗಾಗಿದ್ದಾರೆ. ಇದನ್ನು ಮನಗಂಡಿರುವ ಐಎಂಎ ಸಕ್ಷಮ ಪ್ರಾಧಿಕಾರವು 75 ಕೋಟಿ ರೂ. ಅನ್ನು ಶೀಘ್ರದಲ್ಲೇ ಸಂತ್ರಸ್ತರಿಗೆ ಹಂಚಿಕೆ ಮಾಡಲು ಸಿದ್ಧತೆ ನಡೆಸಿದೆ ಎಂದು ಐಎಂಎ ಸಕ್ಷಮ ಪ್ರಾಧಿಕಾರದ ವಿಶೇಷ ಹಾಗೂ ಸಕ್ಷಮ ಅಧಿಕಾರಿ ಆದಿತ್ಯ ಆಮ್ಲನ್‌ ಬಿಸ್ವಾಸ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಕೋರ್ಟ್‌ ಅನುಮತಿಗೆ ಕಾದು ಕುಳಿತ ಪ್ರಾಧಿಕಾರ: ಐಎಂಎಗೆ ಸೇರಿದ 55 ಕೋಟಿ ರೂ. ಮೌಲ್ಯದ ವಜ್ರಾಭರಣ, ಚಿನ್ನ, 1.50 ಕೋಟಿ ರೂ. ಮೌಲ್ಯದ ರೇಂಜ್‌ ರೋವರ್‌, ಆಡಿ ಸೇರಿದಂತೆ ವಿವಿಧ ಕಾರುಗಳು, ಮೌಲ್ಯಯುತ ಪೀಠೊಪಕರಣ ಸೇರಿದಂತೆ ವಿವಿಧ ಬೆಲೆ ಬಾಳುವ ವಸ್ತುಗಳನ್ನು ಸಕ್ಷಮ ಪ್ರಾಧಿಕಾರ ಜಪ್ತಿ ಮಾಡಿತ್ತು. ಕೆಲ ದಿನಗಳ ಹಿಂದೆ ಹರಾಜು ಪ್ರಕ್ರಿಯೆ ನಡೆಸಿ 75 ಕೋಟಿ ರೂ. ಸಂಗ್ರಹಿಸಿದೆ. ಇದೀಗ ಈ ದುಡ್ಡನ್ನು ಹಂಚಿಕೆ ಮಾಡಲು ಅನುಮತಿ ನೀಡುವಂತೆ ಪ್ರಾಧಿಕಾರವು ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ. ನ್ಯಾಯಾಲಯದಿಂದ ಅನುಮತಿ ಸಿಗುತ್ತಿದ್ದಂತೆ ಕಾನೂನು ಪ್ರಕಾರ ವಂಚನೆಗೊಳಗಾ ದವರಿಗೆ ಸಮನಾಗಿ ಹಣ ಹಂಚಿಕೆಯಾಗಲಿದೆ. ಆದರೆ, ಹಂಚಿಕೆಗೆ ಬಾಕಿ ಇರುವ 1,381 ಕೋಟಿ ರೂ. ಎಲ್ಲೆಲ್ಲಿ ಹೂಡಿಕೆಯಾಗಿದೆ ಎಂಬುದು ಪತ್ತೆ ಹಚ್ಚುವುದು ಸವಾಲಾಗಿದೆ.

150 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಇ.ಡಿ. ಅಡ್ಡಿ: ಐಎಂಎ ಸಂಸ್ಥೆಯ ಹೆಸರಿನಲ್ಲಿ ದೇಶಾದ್ಯಂತ ಸುಮಾರು 150 ಕೋಟಿ ರೂ. ಸ್ಥಿರ ಆಸ್ತಿಯಿದ್ದು, ಇವುಗಳನ್ನು ಮುಟ್ಟುಗೋಲು ಹಾಕಲು ಸಕ್ಷಮ ಪ್ರಾಧಿಕಾರ ಮುಂದಾಗಿತ್ತು. ಈ ಸಂಗತಿ ತಿಳಿದ ಐಎಂಎ ಮುಖ್ಯಸ್ಥ ಮನ್ಸೂರ್‌ ಅಲಿ ಖಾನ್‌, ಜಾರಿ ನಿರ್ದೇಶನಾಲಯಕ್ಕೆ (ಇಡಿ) ಜಪ್ತಿ ಮಾಡುವ ಅವಕಾಶವಿದ್ದು, ಇಡಿಗೆ ಮಾಹಿತಿ ನೀಡದೇ ಸಕ್ಷಮ ಪ್ರಾಧಿಕಾರವು ಆಸ್ತಿ ಜಪ್ತಿ ಮಾಡಬಾರದು ಎಂದು ಕೋರ್ಟ್‌ ಮೂಲಕ ತಡೆ ತಂದಿದ್ದಾರೆ. ಇದರಿಂದ ಐಎಂಎ ಹೆಸರಿನಲ್ಲಿರುವ ಜಮೀನು, ನಿವೇಶನ, ಪ್ಲ್ರಾಟ್‌ಗಳು, ಶಾಲೆ ಸೇರಿದಂತೆ ಇನ್ನಿತರ ಸ್ಥಿರ ಆಸ್ತಿ ಜಪ್ತಿ ಮಾಡಲು ಪ್ರಾಧಿಕಾರಕ್ಕೆ ತೊಡಕಾಗಿದೆ. ಇಡಿ ಆಸ್ತಿ ಜಪ್ತಿ ಮಾಡಿದರೆ ಕೇಂದ್ರ ಸರ್ಕಾರದ ಪಾಲಾಗಲಿದೆ. ಅದೇ ಸಕ್ಷಮ ಪ್ರಾಧಿಕಾರ ಜಪ್ತಿ ಮಾಡಿದರೆ ಸಂತ್ರಸ್ತರಿಗೆ ಸೇರಲಿದೆ. ಸ್ಥಿರ ಆಸ್ತಿ ಜಪ್ತಿ ಮಾಡಲು ಅವಕಾಶ ನೀಡುವಂತೆ ಸಕ್ಷಮ ಪ್ರಾಧಿಕಾರವು ನ್ಯಾಯಾಲಯಕ್ಕೆ ಮನವಿ ಮಾಡಲು ಮುಂದಾಗಿದೆ.

ಏನಿದು ಪ್ರಕರಣ?: ಐಎಂಎ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದರೆ ಭಾರಿ ಲಾಭಾಂಶ ನೀಡುವುದಾಗಿ 1 ಲಕ್ಷ ಜನರಿಂದ 2,900 ಕೋಟಿ ರೂ. ಹೂಡಿಕೆ ಮಾಡಿಸಲಾಗಿತ್ತು. ಈ ಪೈಕಿ 1,500 ರೂ. ಅನ್ನು ಸಂತ್ರಸ್ತರಿಗೆ ಹಿಂತಿರುಗಿಸಲಾಗಿತ್ತು. 1,400 ಕೋಟಿ ರೂ. ಹಿಂತಿರುಗಿಸಲು ಬಾಕಿಯಿದ್ದಾಗ ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಇದಾದ ಬಳಿಕ ಐಎಂಎ ಸಂತ್ರಸ್ತರಿಗೆ ಹಣ ಹಿಂತಿರುಗಿಸುವ ನಿಟ್ಟಿನಲ್ಲಿ ಸಕ್ಷಮ ಪ್ರಾಧಿಕಾರ ರಚಿಸಲಾಗಿತ್ತು. ಸಕ್ಷಮ ಪ್ರಾಧಿಕಾರವು ಐಎಂಎ ಸಂಸ್ಥೆಯ ಒಂದೊಂದೇ ಆಸ್ತಿ ಮುಟ್ಟುಗೋಲು ಹಾಕಿ ಹರಾಜು ಪ್ರಕ್ರಿಯೆ ನಡೆಸಿ ಅದರಿಂದ ಬಂದ ದುಡ್ಡನ್ನು ಸಂತ್ರಸ್ತರಿಗೆ ಹಂಚಿಕೆ ಮಾಡುವ ಕೆಲಸದಲ್ಲಿ ತೊಡಗಿದೆ.

ರೋಷನ್‌ ಬೇಗ್‌ಗೆ ಮತ್ತೆ ಸಂಕಷ್ಟ?: ಐಎಂಎಗೆ ಸೇರಿದ ಕೋಟ್ಯಂತರ ರೂ. ಮಾಜಿ ಶಾಸಕ ರೋಶನ್‌ ಬೇಗ್‌ ಖಜಾನೆ ಸೇರಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಪ್ರಕರಣ ರದ್ದುಗೊಳಿಸಿದೆ. ಸಕ್ಷಮ ಪ್ರಾಧಿಕಾರವು ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ರೋಷನ್‌ ಬೇಗ್‌ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಇತ್ತ ಇಡಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಸಂತ್ರಸ್ತರಿಗೆ ಆದಷ್ಟು ಬೇಗ ಅವರು ಹೂಡಿಕೆ ಮಾಡಿದ ಹಣ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಸಕ್ಷಮ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿದೆ. ಕೋರ್ಟ್‌ನಿಂದ ಅನುಮತಿ ಸಿಗುತ್ತಿದ್ದಂತೆ 75 ಕೋಟಿ ರೂ. ಹಂಚಿಕೆ ಮಾಡಲು ಕ್ರಮ ಕೈಗೊಳ್ಳುತ್ತೇವೆ. -ಆದಿತ್ಯ ಆಮ್ಲನ್‌ ಬಿಸ್ವಾಸ್‌, ಐಎಂಎ ಸಕ್ಷಮ ಪ್ರಾಧಿಕಾರದ ವಿಶೇಷ ಹಾಗೂ ಸಕ್ಷಮ ಅಧಿಕಾರಿ

-ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.